New Year 2024: ಹೊಸ ವರ್ಷಕ್ಕೆ ಗೈಡ್ ಲೈನ್ಸ್ ರೆಡಿ: ಡಿ. 31ರ ಮಧ್ಯರಾತ್ರಿಯಿಂದಲೇ ಅನ್ವಯ
ಹೊಸ ವರ್ಷಕ್ಕೆ ಪಾಲಿಕೆ ಹಾಗೂ ಪೊಲೀಸ್ ಇಲಾಖೆಯಿಂದ ಗೈಡ್ ಲೈನ್ಸ್ ರೆಡಿ ಮಾಡಿದ್ದು, ಇದರಿಂದ ಸಿಲಿಕಾನ್ ಸಿಟಿಯಲ್ಲಿ ನ್ಯೂ ಇಯರ್ ಗುಂಗಿನಲ್ಲಿದ್ದವರಿಗೆ ಲಗಾಮು ಬೀಳಲಿದೆ. ಈ ಬಾರೀ ಹೆಚ್ಚು ಸಿಸಿಟಿವಿ ಅಳವಡಿಕೆಗೆ ಪಾಲಿಕೆಗೆ ಸೂಚನೆ ನೀಡಲಾಗಿದೆ. ಅದರಲ್ಲೂ ಈ ಬಾರಿ ಪಾಲಿಕೆ, ಪೊಲೀಸ್ ಇಲಾಖೆ ಜೊತೆ ಕೈಜೋಡಿಸಿ ಕೆಲಸ ಮಾಡುತ್ತಿದೆ. ಹೊಸ ವರ್ಷಾಚರಣೆ ಗೈಡ್ ಲೈನ್ಸ್ ಇಲ್ಲಿದೆ.
ಬೆಂಗಳೂರು, ಡಿ.17: ಕೆಲವೇ ದಿನಗಳಲ್ಲಿ ಹೊಸ ವರ್ಷ(New Year) ಸಮೀಪಿಸುತ್ತಿದೆ. ಈ ಹಿನ್ನಲೆ ಬೆಂಗಳೂರು ನಗರ ಪೊಲೀಸರು (Bangalore City Police) ಹಾಗೂ ಪಾಲಿಕೆ ಅಲರ್ಟ್ ಆಗಿದ್ದಾರೆ. ಅಹಿತಕರ ಘಟನೆ ನಡೆಯದಂತೆ ಪ್ಲ್ಯಾನಿಂಗ್ ನಡೆಸಿದ್ದು, ಇಂದು(ಡಿ.17) ಪಾಲಿಕೆ ಜೊತೆ ಸಭೆ ನಡೆಸಿ ಪೊಲೀಸರು ಗೈಡ್ ಲೈನ್ಸ್ ರೆಡಿ ಮಾಡಿದ್ದಾರೆ. ಇನ್ನು ನಗರದ ಬ್ರಿಗೇಡ್ ರೋಡ್(Brigade Road), ಎಂಜಿ ರಸ್ತೆ(MG Road)ಯಲ್ಲಿ ಹೊಸ ಅಲೆಯ ವರ್ಷಾಚರಣೆಗೆ ಹೆಚ್ಚಿನ ಜನ ಸೇರುತ್ತಾರೆ. ಹಾಗಾಗಿ ಪ್ರತಿ ಬಾರಿ ಒಂದಷ್ಟು ಗೊಂದಲ ಮತ್ತು ಅಹಿತಕರ ಘಟನೆ ನಡೆಯುತ್ತದೆ. ಈ ಬಾರಿ ಆ ರೀತಿ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.
ಡಿಸೆಂಬರ್ 31ರ ಮಧ್ಯರಾತ್ರಿಯಿಂದಲೇ ರೂಲ್ಸ್ ಅಪ್ಲೈ
ಹೊಸ ವರ್ಷಕ್ಕೆ ಪಾಲಿಕೆ ಹಾಗೂ ಪೊಲೀಸ್ ಇಲಾಖೆಯಿಂದ ಗೈಡ್ ಲೈನ್ಸ್ ರೆಡಿ ಮಾಡಿದ್ದು, ಇದರಿಂದ ಸಿಲಿಕಾನ್ ಸಿಟಿಯಲ್ಲಿ ನ್ಯೂ ಇಯರ್ ಗುಂಗಿನಲ್ಲಿದ್ದವರಿಗೆ ಲಗಾಮು ಬೀಳಲಿದೆ. ಈ ಬಾರೀ ಹೆಚ್ಚು ಸಿಸಿಟಿವಿ ಅಳವಡಿಕೆಗೆ ಪಾಲಿಕೆಗೆ ಸೂಚನೆ ನೀಡಲಾಗಿದೆ. ಅದರಲ್ಲೂ ಈ ಬಾರಿ ಪಾಲಿಕೆ, ಪೊಲೀಸ್ ಇಲಾಖೆ ಜೊತೆ ಕೈಜೋಡಿಸಿ ಕೆಲಸ ಮಾಡುತ್ತಿದೆ. ಪೊಲೀಸ್ ಇಲಾಖೆ ಜೊತೆ ಸಾಥ್ ನೀಡೋದಾಗಿ ಪಾಲಿಕೆ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದು, ಹೊಸ ವರ್ಷಾಚರಣೆ ಗೈಡ್ ಲೈನ್ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದಾರೆ.
ಗೈಡ್ ಲೈನ್ಸ್ ನಲ್ಲಿ ಏನಿದೆ?
- ರಾತ್ರಿ 1 ಗಂಟೆಯೊಳಗೆ ಹೊಸ ವರ್ಷಾಚರಣೆ ಮುಗಿಸಬೇಕು.
- ಎಂ.ಜಿ.ರಸ್ತೆ,ಬ್ರಿಗೇಡ್ ರಸ್ತೆ, ಇಂದಿರಾನಗರದಲ್ಲಿ ಆಚರಣೆಗೆ ಅನುಮತಿ.
- ರಾತ್ರಿ 10 ಗಂಟೆ ಬಳಿಕ ಪ್ರಮುಖ ಫ್ಲೈ ಓವರ್ ಗಳು ಬಂದ್.
- ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ 200ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ.
- ರಾತ್ರಿ 8 ಗಂಟೆ ಬಳಿಕ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್.
- ಸೆಲೆಬ್ರೇಷನ್ ಗೆ ಬರುವವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ.
- ಮಹಿಳೆಯರ ಸುರಕ್ಷತೆಗಾಗಿ ಮಹಿಳಾ ಪೊಲೀಸರ ನಿಯೋಜನೆ.
- ಬಾರ್, ಪಬ್ ಗಳಿಗೂ ರಾತ್ರಿ 1 ಗಂಟೆ ಬಳಿಕ ಬಂದ್ ಗೆ ಸೂಚನೆ.
- ನಗರದ ವಿವಿಧ ಭಾಗಗಳಲ್ಲಿ ಆಚರಣೆಗೆ ಅನುಮತಿ ಕಡ್ಡಾಯ.
- ಲೌಡ್ ಸ್ಪೀಕರ್, ಪಟಾಕಿ ಸಿಡಿಸಲು ನಿರ್ಬಂಧ.
- ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಸಂಚಾರ.
- ರಾತ್ರಿ 1 ಗಂಟೆ ತನಕ ನಮ್ಮ ಮೆಟ್ರೋ ಸಂಚಾರ.
ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಭರ್ಜರಿ ತಯಾರಿ ನಡೆಸಲಾಗಿದ್ದು, ಮಾದಕ ಲೋಕ ಕೂಡ ಸಿದ್ಧವಾಗಿದೆ. ಈ ಹಿನ್ನಲೆ ಬೆಂಗಳೂರಿನಲ್ಲಿ ಸಿಂಥೆಟಿಕ್ ಡ್ರಗ್ಸ್ಗೆ ಭಾರೀ ಬೇಡಿಕೆ ಇರುವುದರಿಂದ ನಗರಕ್ಕೆ 100 ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ಸಾಗಿಸಲು ಏಳೆಂಟು ಗುಂಪುಗಳಿಂದ ಪ್ಲ್ಯಾನ್ ಮಾಡಲಾಗಿದೆ ಎಂಬ ಮಾಹಿತಿಯು ಪೊಲೀಸರಿಗೆ ಸಿಕ್ಕಿದ್ದು, ಈಗಾಗಲೇ ಪೊಲೀಸರು ಅಲರ್ಟ್ ಆಗಿದ್ದಾರೆ. ಇದೀಗ ಅಹಿತಕರ ಘಟನೆ ನಡೆಯದಂತೆ ಗೈಡ್ ಲೈನ್ಸ್ ಕೂಡ ನೀಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ