AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಕ್ಕೆ ಗುಡ್​​ನ್ಯೂಸ್​​: ಡಿ. 31ರ ತಡರಾತ್ರಿವರೆಗೂ ಮೆಟ್ರೋ, BMTC ಬಸ್​​ ಸಂಚಾರ

ಹೊಸ ವರ್ಷದ ಹಿನ್ನೆಲೆ ಡಿ. 31ರ ತಡ ರಾತ್ರಿಯಿಂದ ಜ. 1ರ ಬೆಳಗ್ಗಿನ ಜಾವದವರೆಗೂ ಮೆಟ್ರೋ ಸೇವೆ ಸಮಯವನ್ನು ವಿಸ್ತರಣೆಗೊಳಿಸಲಾಗಿದೆ. ಆದರೆ ಒಂದು ನಿಲ್ದಾಣ ಕ್ಲೋಸ್​​ ಆಗಿರಲಿದ್ದು,  2 ಸ್ಟಾಪ್​​ಗಳಲ್ಲಿ ರಾತ್ರಿ 11ರ ನಂತರ ಟೋಕನ್ ಮಾರಾಟ ಇರುವುದಿಲ್ಲ ಎಂದು BMRCL ಪ್ರಕಟಣೆಯಲ್ಲಿ ತಿಳಿಸಿದೆ. ಡಿಸೆಂಬರ್ 31ರಂದು ತಡರಾತ್ರಿವರೆಗೂ ಬಿಎಂಟಿಸಿ ಬಸ್​​ಗಳು ಕೂಡ ಕಾರ್ಯಾಚರಣೆ ನಡೆಸಲಿವೆ.

ಹೊಸ ವರ್ಷಕ್ಕೆ ಗುಡ್​​ನ್ಯೂಸ್​​: ಡಿ. 31ರ ತಡರಾತ್ರಿವರೆಗೂ ಮೆಟ್ರೋ, BMTC ಬಸ್​​ ಸಂಚಾರ
ಮೆಟ್ರೋ ರೈಲು ಮತ್ತು BMTC ಬಸ್​​
Kiran Surya
| Edited By: |

Updated on:Dec 29, 2025 | 6:51 PM

Share

ಬೆಂಗಳೂರು, ಡಿಸೆಂಬರ್​​ 29: ಹೊಸ ವರ್ಷದ ಹಿನ್ನೆಲೆ ಮೆಟ್ರೋ ಸೇವೆ ಸಮಯವನ್ನು ವಿಸ್ತರಣೆಗೊಳಿಸಲಾಗಿದ್ದು, ಡಿ.31ರಂದು ಬೆಳಗಿನಜಾವ 3:10ರ ವರೆಗೂ ಮೆಟ್ರೋ ರೈಲುಗಳು ಸಂಚಾರ ನಡೆಸಲಿವೆ. ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಪ್ರಯಾಣವನ್ನು ಒದಗಿಸುವ ಉದ್ದೇಶದಿಂದ ನೇರಳೆ, ಹಸಿರು ಹಾಗೂ ಹಳದಿ ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸಲಾಗುತ್ತಿದೆ ಎಂದು ಪ್ರಕಟಣೆ ಮೂಲಕ ಬಿಎಂಆರ್​​ಸಿಎಲ್​​ ತಿಳಿಸಿದೆ.

ಕೊನೆಯ ಮೆಟ್ರೋ ರೈಲಿನ ಸಮಯ

ನೇರಳೆ ಮಾರ್ಗ

ವೈಟ್‌ ಫೀಲ್ಡ್​​ನಿಂದ ಚಲ್ಲಘಟ್ಟದ ವರೆಗೆ- ರಾತ್ರಿ 1:45 ಗಂಟೆ

ಚಲ್ಲಘಟ್ಟದಿಂದ ವೈಟ್‌ಫೀಲ್ಡ್ ವರೆಗೆ- ರಾತ್ರಿ 2  ಗಂಟೆ

ಹಸಿರು ಮಾರ್ಗ

ಮಾದಾವರದಿಂದ ರೇಷ್ಮೆ ಸಂಸ್ಥೆಯ ವರೆಗೆ- ರಾತ್ರಿ 2 ಗಂಟೆ

ರೇಷ್ಮೆ ಸಂಸ್ಥೆಯಿಂದ ಮಾದಾವರದ ವರೆಗೆ- ರಾತ್ರಿ 2 ಗಂಟೆ

ಹಳದಿ ಮಾರ್ಗ

ಆರ್‌.ವಿ ರಸ್ತೆಯಿಂದ ಬೊಮ್ಮಸಂದ್ರದ ವರೆಗೆ- ಬೆಳಗಿನಜಾವ 3:10 ಗಂಟೆ

ಬೊಮ್ಮಸಂದ್ರದಿಂದ ಆರ್‌.ವಿ ರಸ್ತೆಯ ವರೆಗೆ- 1:30 ಗಂಟೆ

ಇದನ್ನೂ ಓದಿ: ಹೊಸ ವರ್ಷಾಚರಣೆಗೆ ಬೆಂಗಳೂರಿನ ಈ ಫ್ಲೈಓವರ್​ಗಳು, ಮಟ್ರೋ ಸ್ಟೇಷನ್ ಕ್ಲೋಸ್

ಮೆಜೆಸ್ಟಿಕ್​​ನಿಂದ ಕೊನೆಯ ಮೆಟ್ರೋ ಸಮಯ

ನೇರಳೆ ಮಾರ್ಗದ ವೈಟ್‌ಫೀಲ್ಡ್ ಮತ್ತು ಚಲ್ಲಘಟ್ಟ ಕಡೆಗೆ ಹಾಗೂ ಹಸಿರು ಮಾರ್ಗದ ಮಾದಾವರ ಮತ್ತು ರೇಷ್ಮೆ ಸಂಸ್ಥೆ ಕಡೆಗೆ ಹೊರಡುವ ಕೊನೆಯ ರೈಲು ರಾತ್ರಿ 2:45ಕ್ಕೆ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್​​ನಿಂದ ಹೊರಡಲಿದೆ.

ರೈಲು ಸಂಚಾರದ ಅಂತರ

31ನೇ ಡಿಸೆಂಬರ್ 2025ರ ರಾತ್ರಿ 11:30ರಿಂದ ವಿಸ್ತರಿತ ಸೇವೆ ಮುಗಿಯುವವರೆಗೂ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ 8 ನಿಮಿಷಗಳ ಅಂತರದಲ್ಲಿ ಹಾಗೂ ಹಳದಿ ಮಾರ್ಗದಲ್ಲಿ 15 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸಲಿವೆ.

ಎಂ.ಜಿ. ರೋಡ್​​ ನಿಲ್ದಾಣ ಬಂದ್​​

ಎಂ.ಜಿ. ರಸ್ತೆ ಪ್ರದೇಶದಲ್ಲಿ ಹೆಚ್ಚಿನ ಜನಸಂದಣಿ ನಿರೀಕ್ಷೆಯಿರುವುದರಿಂದ, ಡಿಸೆಂಬರ್ 31, 2025ರ ರಾತ್ರಿ 10ರಿಂದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದ ಪವೇಶ ಮತ್ತು ನಿರ್ಗಮನ ದ್ವಾರಗಳನ್ನು ಮುಚ್ಚಲಾಗುತ್ತದೆ. ಆದರೆ, ರೈಲುಗಳು ಪಕ್ಕದ ನಿಲ್ದಾಣಗಳಾದ ಟ್ರಿನಿಟಿ ಹಾಗೂ ಕಬ್ಬನ್ ಪಾರ್ಕ್ ನಿಲ್ದಾಣಗಳಲ್ಲಿ ನಿಲುಗಡೆ ಮಾಡಲಿದ್ದು, ಪುಯಾಣಿಕರು ಅಲ್ಲಿ ರೈಲನ್ನು ಹತ್ತಿ-ಇಳಿಯಬಹುದು.

ಟಿಕೆಟ್‌ ಕೌಂಟರ್‌ಗಳಲ್ಲಿ ಜನದಟ್ಟಣೆಯನ್ನು ತಪ್ಪಿಸುವ ಉದ್ದೇಶದಿಂದ, ಟ್ರಿನಿಟಿ ಹಾಗೂ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಲ್ಲಿ ರಾತ್ರಿ 11ರ ನಂತರ ಟೋಕನ್ ಮಾರಾಟ ಇರುವುದಿಲ್ಲ. ಈ ನಿಲ್ದಾಣಗಳಿಂದ ರಾತ್ರಿ 11 ಗಂಟೆಯ ನಂತರ ಪಯಾಣಿಸುವ ಪ್ರಯಾಣಿಕರು ಕ್ಯೂಆರ್ ಟಿಕೆಟ್‌ಗಳ ಮೂಲಕ ಅಥವಾ ಮುಂಗಡವಾಗಿ ರಿಟರ್ನ್ ಟಿಕೆಟ್ ಖರೀದಿಸಿ ಪ್ರಯಾಣಿಸುವಂತೆ BMRCL ತಿಳಿಸಿದೆ.

ತಡರಾತ್ರಿವರೆಗೆ BMTC ಬಸ್ ಕೂಡ​​ ಓಡಾಟ

ಡಿಸೆಂಬರ್ 31ರಂದು ತಡರಾತ್ರಿವರೆಗೂ ಬಿಎಂಟಿಸಿ ಬಸ್​​ಗಳು ಕೂಡ ಕಾರ್ಯಾಚರಣೆ ನಡೆಸಲಿವೆ. ಸಾರ್ವಜನಿಕರ ಅನುಕೂಲಕ್ಕಾಗಿ ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚಿನ ಸಾರಿಗೆ ಸೌಲಭ್ಯ ಇರಲಿದೆ. ರಾತ್ರಿ 11 ಗಂಟೆಯ ನಂತರ ತಡರಾತ್ರಿ 2 ಗಂಟೆಯವರೆಗೆ ಹೆಚ್ಚುವರಿ ಬಸ್​​ಗಳು ಓಡಾಟ ನಡೆಸಲಿದ್ದು, ಪ್ರಯಾಣಿಕರ ಬೇಡಿಕೆಗೆ ಅನುಸಾರ ಬಸ್​​ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಲೆಕ್ಟ್ರಾನಿಕ್ಸ್ ಸಿಟಿ ಪೂರ್ವ, ಜಿಗಣಿ, ಸರ್ಜಾಪುರ, ಕೆಂಗೇರಿ KHB ಕ್ವಾಟರ್ಸ್, ಜನಪ್ರಿಯ ಟೌನ್ ಶಿಪ್, ನೆಲಮಂಗಲ, ಯಲಹಂಕ, ಬಾಗಲೂರು, ಹೊಸಕೋಟೆ, ಚನ್ನಸಂದ್ರ, ಕಾಡುಗೋಡಿ, ಬನಶಂಕರಿ, ಜೀವನ್ ಭೀಮಾನಗರ ಸೇರಿ ಹಲವೆಡೆ ಹೆಚ್ಚುವರಿ ಬಸ್​​ಗಳು ಕಾರ್ಯಾಚರಣೆ ನಡೆಸಲಿವೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:49 pm, Mon, 29 December 25

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ