New Year: ಹೊಸ ವರ್ಷಾಚರಣೆ, ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸುದ್ದಿಗೋಷ್ಠಿ: ಪ್ರಮುಖಾಂಶಗಳು ಇಲ್ಲಿವೆ
ಹೊಸ ವರ್ಷ ಸನ್ನಿಹಿತವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸುದ್ದಿಗೋಷ್ಠಿ ನಡೆಸಿದ್ದಾರೆ.
ಹೊಸ ವರ್ಷ(New Year) ಸನ್ನಿಹಿತವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸುದ್ದಿಗೋಷ್ಠಿ ನಡೆಸಿದ್ದಾರೆ. ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸಲು ಈ ಸುದ್ದಿಗೋಷ್ಠಿ ನಡೆಸಲಾಗಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಚನೆ ನೀಡಲಾಗಿದೆ. ಎಲ್ಲಾ ಠಾಣೆಗಳ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಹೊಸ ವರ್ಷದ ಹಿನ್ನೆಲೆ 8,500 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಸಂಚಾರ ವಿಭಾಗದ ಎಲ್ಲಾ ಅಧಿಕಾರಿಗಳು ಭಾಗಿಯಾಗಿದ್ದಾರೆ.
ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ವಿಶೇಷ ಗಮನ ನೀಡಲಾಗಿದೆ. ಪಬ್ ಬಾರ್ ರೆಸ್ಟೋರೆಂಟ್ಗಳ ಮಾಲೀಕರಿಗೆ ಮಾಹಿತಿ ನೀಡಲಾಗಿದೆ. ಕಾನೂನು ಪ್ರಕಾರ ನಿಯಮಗಳನ್ನು ಪಾಲಿಸಬೇಕು., ರಾತ್ರಿ ಒಂದು ಗಂಟೆವರೆಗೆ ಮಾತ್ರ ಪಾರ್ಟಿ ಗಳನ್ನು ನಡೆಸಲು ಅನುಮತಿ ನೀಡಲಾಗಿದೆ. ಲೌಡ್ ಸ್ಪೀಕರ್ ಹಾಕಲು ಅನುಮತಿ ಪಡೆದಿರುವವರು ರಾತ್ರಿ ಹನ್ನೆರಡು ಗಂಟೆಯ ತನಕ ಬಳಸಬಹುದು.
ಎಸಿಪಿ ಹಂತದ ಅಧಿಕಾರಿಗಳು ಶಬ್ದ ಮಾಲಿನ್ಯ ನಿಯಂತ್ರಣ ಯಂತ್ರಗಳನ್ನು ನೀಡಲಾಗುತ್ತದೆ. ಅದರ ಪ್ರಕಾರ ನಿರ್ದಿಷ್ಟ ಡೆಸಿಮಲ್ನಲ್ಲಿ ಮಾತ್ರ ಸೌಂಡ್ ಕೊಡಬೇಕಿದೆ. ಹೆಚ್ಚಿನ ಸೌಂಡ್ ಕೊಡುವಂತಿಲ್ಲ. ಟ್ರಾಫಿಕ್ ಕ್ಯಾಮರಾ, ಹಾಗೂ ನಗರದಲ್ಲಿ ಇರುವ ಎಲ್ಲಾ ಸಿಸಿಟಿವಿಗಳನ್ನು ಕ್ರೌಡ್ ಕಂಟ್ರೋಲ್ಗೆ ಬಳಸಲಾಗುತ್ತದೆ.
ನಗರದಲ್ಲಿ ಒಂದು ಲಕ್ಷ ಎಪತ್ತು ಸಾವಿರ ಸಿಸಿಟಿವಿ ಕ್ಯಾಮರಾ ಗಳನ್ನು ಮ್ಯಾಪಿಂಗ್ ಮಾಡಲಾಗಿದೆ ಅವಶ್ಯಕತೆ ಇದ್ದರೆ ಅದನ್ನು ಬಳಸುತ್ತೇವೆ. ಸಿಸಿಟಿವಿ ಹೆಚ್ಚುವರಿಯಾಗಿ ಬಳಕೆ ಆಗುತ್ತದೆ, ಮಫ್ತಿಯಲ್ಲಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗುತ್ತದೆ.
ಹೊಸ ವರ್ಷಾಚರಣೆ ಸಂಭ್ರಮದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯಲು ಬಿಡುವುದಿಲ್ಲ. ಸೂಕ್ತ ಭದ್ರತೆ ಒದಗಿಸಲಾಗುತ್ತದೆ. ಮಹಿಳೆಯರು ಹಾಗೂ ಮಕ್ಕಳು ಹಾಗೂ ವೃದ್ಧರ ಬಗ್ಗೆ ನಿಗಾ ವಹಿಸಿ ಹೆಚ್ಚಿನ ಭದ್ರತೆ ನೀಡಲಾಗುತ್ತದೆ. ನಗರದಲ್ಲಿನ ಪಬ್, ಬಾರ್ ಮತ್ತು ರೆಸ್ಟೊರೆಂಟ್‍ಗಳಲ್ಲಿ ಇನ್ನಷ್ಟು ಕ್ಯಾಮೆರಾ ಅಳವಡಿಸುವಂತೆ ಮಾಲೀಕರಿಗೆ ತಿಳಿಸಲಾಗಿದೆ ಎಂದು ಅವರು ಹೇಳಿದರು.
ಹೊಸ ವರ್ಷದ ಸಂಭ್ರಮಾಚರಣೆ ಆಗುತ್ತಿದೆ. ಈ ಪ್ರಮುಖ ರಸ್ತೆಗಳಲ್ಲಿ ಅತಿ ಹೆಚ್ಚು ಜನರು ಸೇರಲಿದ್ದಾರೆ. ಯಾವ ಪ್ರಮುಖ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಬೇಕು ಎಂಬ ಬಗ್ಗೆ ಪರಿಶೀಲನೆ ಮಾಡಿದ್ದೇವೆ. ಸಿಸಿ ಕ್ಯಾಮೆರಾದ ಜೊತೆ ಡ್ರೋನ್ ಬಳಕೆ ಮಾಡಲಾಗುತ್ತದೆ ಎಂದರು.
ಈಗಾಗಲೇ ಆಯಾ ವಿಭಾಗದ ಡಿಸಿಪಿಗಳು, ಇತರೆ ಅಕಾರಿಗಳು, ಪಬ್, ಬಾರ್ ಮತ್ತು ರೆಸ್ಟೋರೆಂಟ್‍ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ರಿಗೇಡ್ ರಸ್ತೆ ಹಾಗೂ ಚರ್ಚ್ ಸೀಟ್‍ಗಳಲ್ಲಿ ಅತಿ ಹೆಚ್ಚಾಗಿ ಬಂದೋಬಸ್ತ್ ಮಾಡಲಾಗುವುದು ಎಂದು ಅವರು ತಿಳಿಸಿದರು.
ರಸ್ತೆಯ ಎರಡು ಬದಿಗಳಲ್ಲಿ ಮೆಟಲ್ ಡಿಟೆಕ್ಟರ್ ಹಾಕಲಾಗುವುದು. ಡಿ. 31ರಂದು ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಸರ್ಕಾರ ಮಧ್ಯರಾತ್ರಿ 1 ಗಂಟೆವರೆಗೆ ವರ್ಷಾಚರಣೆಗೆ ಅನುಮತಿ ನೀಡಿದೆ. ಒಟ್ಟಾರೆ ನಗರದಲ್ಲಿ ವರ್ಷಾಚರಣೆ ವೇಳೆ ಹೆಚ್ಚಿನ ಭದ್ರತೆ ಜೊತೆಗೆ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಏನಾದರೂ ಆರೋಗ್ಯ ಸ್ಥಿತಿ ಗಂಬೀರ ಆದರೆ ಅಥವಾ ಪಾರ್ಟಿಯಲ್ಲಿ ಹೆಚ್ಚು ನಶೆಯಲ್ಲಿ ಇದ್ದು ಪೊಲೀಸರು ಹ್ಯಾಂಡಲ್ ಮಾಡಲು ಸಾಧ್ಯವಾಗಿಲ್ಲ ಎಂದಾದರೆ ಅವರನ್ನು ಪೊಲೀಸರು ಅಸ್ಪತ್ರೆಗೆ ದಾಖಲು ಮಾಡುತ್ತಾರೆ . ಅಸ್ಪತ್ರೆಯಲ್ಲಿ ಈಗಾಗಲೇ ಮಾತುಕತೆ ಮಾಡಿ ಬೆಡ್ ರೆಡಿ ಇಡಲಾಗಿದೆ. ಲೈಸೆನ್ಸ್ ಇರುವ ವೆಪ್ನಗಳನ್ನು ಪಾರ್ಟಿಗೆ ತರುವಂತಿಲ್ಲ.
ಡಿಸೆಂಬರ್ನಲ್ಲಿ ಡ್ರಗ್ಸ್ ಬಗ್ಗೆ ಹೆಚ್ಚಿನ ಕಾರ್ಯಾಚರಣೆ ಮಾಡಲಾಗಿದೆ ಒಟ್ಟು 637 ಆರೋಪಿಗಳನ್ನು ಬಂಧಿಸಲಾಗಿದೆ. ಅದರಲ್ಲಿ 6 ಜನರು ವಿದೇಶಿ ಡ್ರಗ್ಸ್ ಪೆಡ್ಲರ್ಸ್ಗಳಾಗಿದ್ದಾರೆ, ಒಟ್ಟು 547 ಪ್ರಕರಣಗಳು ದಾಖಲಾಗಿವೆ.
ಸಂಚಾರ ವಿಭಾಗದ ವಿಶೇಷ ಆಯುಕ್ತ ಸಲೀಂ , ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸುಬ್ರಮಣ್ಯೇಶ್ವರ ರಾವ್, ಸಂಧೀಪ್ ಪಾಟೀಲ್, ಅನುಚೇತ್ , ಜಂಟಿ ಆಯುಕ್ತ ಸಂಚಾರ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದರು.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:39 pm, Thu, 29 December 22