ಹೊಸ ವರ್ಷಾಚರಣೆ: ಮಧ್ಯರಾತ್ರಿ 2 ಗಂಟೆವರೆಗೂ ಓಡಲಿವೆ ಬಿಎಂಟಿಸಿ ಬಸ್‌ಗಳು

ಹೊಸ ವರ್ಷಾಚರಣೆ ಹಿನ್ನಲೆ ಬಿಎಂಟಿಸಿ ಬಸ್ ಸಂಚಾರದ ಅವಧಿ ವಿಸ್ತರಣೆ ಮಾಡಲಾಗಿದೆ. ಇಂದು ಮಧ್ಯರಾತ್ರಿ 2 ಗಂಟೆಯವರೆಗೆ ಬಿಎಂಟಿಸಿ ಬಸ್‌ಗಳ ಸಂಚಾರವಿರಲಿದೆ. ಜೊತೆಗೆ ಹೊಸ ವರ್ಷಾಚರಣೆಗೆ ಬರುವ ಸಾರ್ವಜನಿಕರಿಗಾಗಿ ಹೆಚ್ಚುವರಿ ಬಸ್​ಗಳ ನಿಯೋಜನೆ ಮಾಡಲಾಗಿದೆ.

ಹೊಸ ವರ್ಷಾಚರಣೆ: ಮಧ್ಯರಾತ್ರಿ 2 ಗಂಟೆವರೆಗೂ ಓಡಲಿವೆ ಬಿಎಂಟಿಸಿ ಬಸ್‌ಗಳು
ಬಿಎಂಟಿಸಿ
Follow us
Kiran Surya
| Updated By: ಆಯೇಷಾ ಬಾನು

Updated on: Dec 31, 2023 | 10:50 AM

ಬೆಂಗಳೂರು, ಡಿ.31: ಹೊಸ ಭರವಸೆಗಳೊಂದಿಗೆ ಹೊಸ ವರ್ಷವನ್ನು (New Year) ಆರಂಭಿಸಲು ಸಿಲಿಕಾನ್ ಸಿಟಿ ಮಂದಿ ಸಜ್ಜಾಗಿದ್ದಾರೆ. ಹೊಸವರ್ಷಾಚರಣೆ ಹಿನ್ನೆಲೆ ನಗರದ ಹಲವೆಡೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದ್ದು ಡಿಜೆ ಪಾರ್ಟಿ ಸೇರಿದಂತೆ ಭರ್ಜರಿಯಾಗಿ ಕುಣಿದು ಕುಪ್ಪಳಿಸಲು ಎಲ್ಲಾ ರೀತಿಯ ತಯಾರಿ ನಡೆದಿದೆ. ಇನ್ನು ಜನರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದೆ. ಮತ್ತೊಂದೆಡೆ ತಡರಾತ್ರಿ 2 ಗಂಟೆವರೆಗೆ ನಮ್ಮ ಮೆಟ್ರೋ (Namma Metro) ಸಂಚರಿಸಲಿದೆ. ಸದ್ಯ ಈಗ ಪ್ರಯಾಣಿಕರ ಅನುಕೂಲಕ್ಕೆಂದು ಡಿ.31ರ ಮಧ್ಯರಾತ್ರಿ 2 ಗಂಟೆವರೆಗೂ ಬಿಎಂಟಿಸಿ (BMTC) ಬಸ್‌ಗಳ ಸಂಚಾರ ಸೇವೆ ಇರಲಿದೆ.

ಹೊಸ ವರ್ಷಾಚರಣೆ ಹಿನ್ನಲೆ ಬಿಎಂಟಿಸಿ ಬಸ್ ಸಂಚಾರದ ಅವಧಿ ವಿಸ್ತರಣೆ ಮಾಡಲಾಗಿದೆ. ಇಂದು ಮಧ್ಯರಾತ್ರಿ 2 ಗಂಟೆಯವರೆಗೆ ಬಿಎಂಟಿಸಿ ಬಸ್‌ಗಳ ಸಂಚಾರವಿರಲಿದೆ. ಜೊತೆಗೆ ಹೊಸ ವರ್ಷಾಚರಣೆಗೆ ಬರುವ ಸಾರ್ವಜನಿಕರಿಗಾಗಿ ಹೆಚ್ಚುವರಿ ಬಸ್​ಗಳ ನಿಯೋಜನೆ ಮಾಡಲಾಗಿದೆ. ಎಂ.ಜಿ.ರಸ್ತೆ ಹಾಗೂ ಬ್ರಿಗೇಡ್ ರಸ್ತೆಗೆ ಹೊಸ ವರ್ಷಾಚರಣೆಗೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸುತ್ತಾರೆ. ಹೀಗಾಗಿ ಆ ಮಾರ್ಗದಲ್ಲಿ ಹೆಚ್ಚುವರಿ ಬಸ್​ಗಳನ್ನು ನಿಯೋಜಿಸಲಾಗಿದೆ. ಬೇಡಿಕೆಗೆ ಅನುಗುಣವಾಗಿ ಬಿಎಂಟಿಸಿ ಬಸ್ ಸಂಚಾರಕ್ಕೆ ನಿಗಮದಿಂದ ಸಿದ್ಧತೆ ನಡೆದಿದೆ.

ಎಂ.ಜಿ.ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಿಂದ ನಗರದ ಹಲವೆಡೆ ಬಸ್‌ ವ್ಯವಸ್ಥೆ ಮಾಡಲಾಗಿದೆ. ಎಂ.ಜಿ.ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಿಂದ ಕಾಡುಗೋಡಿ, ಎಲೆಕ್ಟ್ರಾನಿಕ್ ಸಿಟಿ, ಸರ್ಜಾಪುರ, ಬನ್ನೇರುಘಟ್ಟ, ಕೆಂಗೇರಿ, ನೆಲಮಂಗಲ, ಮಾಗಡಿ ರಸ್ತೆ, ಹೆಣ್ಣೂರು ಸೇರಿದಂತೆ ಹಲವು ಏರಿಯಾಗಳಿಗೆ ಬಿಎಂಟಿಸಿ ಬಸ್ ವ್ಯವಸ್ಥೆ ಇರಲಿದೆ. ಜನದಟ್ಟಣೆ ಹೆಚ್ಚಾಗಿರುವ ಯಲಹಂಕ, ಇಂದಿರಾನಗರ, ಕೋರಮಂಗಲ, ಬನಶಂಕರಿ, ಶಾಂತಿನಗರ, ಗೊರಗುಂಟೆ ಪಾಳ್ಯ ಸುತ್ತಮುತ್ತ ಬಸ್‌ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್ ಕಾರ್ಯಾಚರಣೆ ನಡೆಸಲಿದೆ ಎಂದು ಬಿಎಂಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಿತ್ಯ ಮಧ್ಯರಾತ್ರಿ 11 ಗಂಟೆಯವರೆಗೂ ಮಾತ್ರ ಬಿಎಂಟಿಸಿ ಬಸ್‌ ಸಂಚಾರ ಇತ್ತು. ಆದರೆ ಇಂದು ಹೊಸ ವರ್ಷಾಚರಣೆ ಹಿನ್ನೆಲೆ ಪ್ರಯಾಣಿಕರನ್ನು ಗಮನದಲ್ಲಿಟ್ಟುಕೊಂಡು ಬಸ್ ಸೇವೆ ವಿಸ್ತರಿಸಲಾಗಿದೆ. ಮಧ್ಯರಾತ್ರಿ 2 ಗಂಟೆಯ ವರೆಗೂ ಬಸ್ ಸೇವೆ ಇರಲಿದೆ.

ಇದನ್ನೂ ಓದಿ: Bengaluru New Year: ಸಂಭ್ರಮಾಚರಣೆ ವೇಳೆ ಅಸ್ವಸ್ಥಗೊಂಡ ಮಹಿಳೆಯರು ಹಾಗೂ ವೃದ್ಧರಿಗೆ ಚಿಕಿತ್ಸೆ ನೀಡಲು ಹಾಸಿಗೆ, ದಿಂಬು ರೆಡಿ

ತಡರಾತ್ರಿ 2 ಗಂಟೆವರೆಗೆ ಸಂಚರಿಸಲಿದೆ ನಮ್ಮ ಮೆಟ್ರೋ

ಹೊಸ ವರ್ಷಾಚರಣೆಗೆ ಅನುಕೂಲವಾಗುವಂತೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಡಿಸೆಂಬರ್ 31ರಂದು ರಾತ್ರಿಯಿಂದ ಬೆಳಗಿನ ಜಾವ 2 ಗಂಟೆಯವರೆಗೆ ನಮ್ಮ ಮೆಟ್ರೋ ರೈಲು ಸೇವೆಯನ್ನು ವಿಸ್ತರಿಸಿದೆ. ಆದರೆ, ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಎಂಜಿ ರಸ್ತೆ ಮೆಟ್ರೋ ನಿಲ್ದಾಣಕ್ಕೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಪೊಲೀಸ್ ಇಲಾಖೆ ಸೂಚನೆ ಮೇರೆಗೆ ಎಂಜಿ ರಸ್ತೆಗೆ ಪ್ರವೇಶ ನಿರ್ಬಂಧಿಸಲಾಗಿದೆ. ಹೀಗಾಗಿ ವಿಸ್ತೃತ ರೈಲು ಸೇವೆಯನ್ನು ಬಳಸಲು ಮೆಟ್ರೋ ಪ್ರಯಾಣಿಕರು ಟ್ರಿನಿಟಿ ಅಥವಾ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಿಗೆ ತೆರಳಲು ಸೂಚಿಸಲಾಗಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪತಿ-ಪತ್ನಿ ಒಂದೇ ರಾಶಿಯವರಾಗಿದ್ದರೆ ಏನರ್ಥ? ವಿಡಿಯೋ ನೋಡಿ
ಪತಿ-ಪತ್ನಿ ಒಂದೇ ರಾಶಿಯವರಾಗಿದ್ದರೆ ಏನರ್ಥ? ವಿಡಿಯೋ ನೋಡಿ
ವಾರ ಭವಿಷ್ಯ: ನವೆಂಬರ್​ 18 ರಿಂದ 24ರವರೆಗೆ ವಾರ ಭವಿಷ್
ವಾರ ಭವಿಷ್ಯ: ನವೆಂಬರ್​ 18 ರಿಂದ 24ರವರೆಗೆ ವಾರ ಭವಿಷ್
Nithya Bhavishya: ಈ ರಾಶಿಯವರಿಗೆ ಇಂದು ನಿವೇಶನ ಖರೀದಿಸುವ ಯೋಗವಿದೆ
Nithya Bhavishya: ಈ ರಾಶಿಯವರಿಗೆ ಇಂದು ನಿವೇಶನ ಖರೀದಿಸುವ ಯೋಗವಿದೆ
ವಕ್ಫ್ ವಿವಾದದ ಬಗ್ಗೆ ಯಡಿಯೂರಪ್ಪ-ವಿಜಯೇಂದ್ರಗೆ ಕಾಳಜಿಯಿಲ್ಲ: ಯತ್ನಾಳ್
ವಕ್ಫ್ ವಿವಾದದ ಬಗ್ಗೆ ಯಡಿಯೂರಪ್ಪ-ವಿಜಯೇಂದ್ರಗೆ ಕಾಳಜಿಯಿಲ್ಲ: ಯತ್ನಾಳ್
‘ಶ್... ಬಾಯ್ಮುಚ್ಚು‘: ಸುಳ್ಳು ಹೇಳಿದ ಚೈತ್ರಾ ಮೇಲೆ ಕಿಚ್ಚ ಕೆಂಡ
‘ಶ್... ಬಾಯ್ಮುಚ್ಚು‘: ಸುಳ್ಳು ಹೇಳಿದ ಚೈತ್ರಾ ಮೇಲೆ ಕಿಚ್ಚ ಕೆಂಡ
ಸ್ಟಾರ್ ಪ್ರಚಾರಕ ಅಲ್ಲ, ಹಾಗಾಗೇ ಚನ್ನಪಟ್ಟಣದಲ್ಲಿ ಪ್ರಚಾರ ಮಾಡಿಲ್ಲ:ಯತ್ನಾಳ್
ಸ್ಟಾರ್ ಪ್ರಚಾರಕ ಅಲ್ಲ, ಹಾಗಾಗೇ ಚನ್ನಪಟ್ಟಣದಲ್ಲಿ ಪ್ರಚಾರ ಮಾಡಿಲ್ಲ:ಯತ್ನಾಳ್
ನಾನ್ಯಾಕೆ ಬೇಡವಾಗಿದ್ದೇನೆಂದು ಕುಮಾರಸ್ವಾಮಿಯೇ ಹೇಳಬೇಕು: ದೇವೇಗೌಡ
ನಾನ್ಯಾಕೆ ಬೇಡವಾಗಿದ್ದೇನೆಂದು ಕುಮಾರಸ್ವಾಮಿಯೇ ಹೇಳಬೇಕು: ದೇವೇಗೌಡ
ಜಾಗೃತಿ ಅಭಿಯಾನಕ್ಕಾಗಿ ವಿಜಯೇಂದ್ರ 3 ತಂಡಗಳನ್ನು ರಚಿಸಿದ್ದಾರೆ: ಯಡಿಯೂರಪ್ಪ
ಜಾಗೃತಿ ಅಭಿಯಾನಕ್ಕಾಗಿ ವಿಜಯೇಂದ್ರ 3 ತಂಡಗಳನ್ನು ರಚಿಸಿದ್ದಾರೆ: ಯಡಿಯೂರಪ್ಪ
ನಂಬಿಕೆಗಳ ಮಹಾ ತರ್ಕ, ಲೆಕ್ಕಚಾರ ಮಾಡಲು ಬಂದ ಸುದೀಪ್
ನಂಬಿಕೆಗಳ ಮಹಾ ತರ್ಕ, ಲೆಕ್ಕಚಾರ ಮಾಡಲು ಬಂದ ಸುದೀಪ್
ವಕ್ಫ್ ಭೂವಿವಾದ; ಬಿಜೆಪಿಯ ಪ್ರಸ್ತಾಪಿತ ಜಾಗೃತಿ ಜಾಥಾಗೆ ಸಮನ್ವಯತೆಯ ಕೊರತೆ
ವಕ್ಫ್ ಭೂವಿವಾದ; ಬಿಜೆಪಿಯ ಪ್ರಸ್ತಾಪಿತ ಜಾಗೃತಿ ಜಾಥಾಗೆ ಸಮನ್ವಯತೆಯ ಕೊರತೆ