AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಾತ್ರಿ ಕರ್ಫ್ಯೂ ಕಟ್ಟುನಿಟ್ಟು, ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆ ನಿಷೇಧ

ನಿಯಮಗಳನ್ನು ಈಗಾಗಲೇ ಪ್ರಕಟಿಸಲಾಗಿದೆ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಸೂಚನೆ ನೀಡಲಾಗಿದೆ ಎಂದರು.

ಬೆಂಗಳೂರಿನಲ್ಲಿ ರಾತ್ರಿ ಕರ್ಫ್ಯೂ ಕಟ್ಟುನಿಟ್ಟು, ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆ ನಿಷೇಧ
ಸಾಂದರ್ಭಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 27, 2021 | 7:17 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆದೇಶದಂತೆ ಬೆಂಗಳೂರು ನಗರದಲ್ಲಿ ರಾತ್ರಿ ಕರ್ಫ್ಯೂ (Night Curfew) ಜಾರಿಗೊಳಿಸಲಾಗುತ್ತಿದೆ. ಈ ಬಗ್ಗೆ ಸಭೆ ನಡೆಸಿ ಎಲ್ಲ ಅಧಿಕಾರಿಗಳಿಗೂ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ನಿಯಮಗಳನ್ನು ಈಗಾಗಲೇ ಪ್ರಕಟಿಸಲಾಗಿದೆ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಸೂಚನೆ ನೀಡಲಾಗಿದೆ ಎಂದರು.

ನಗರ ವ್ಯಾಪ್ತಿಯಲ್ಲಿ ರಾತ್ರಿ ಕರ್ಫ್ಯೂ ಜೊತೆಗೆ ಇನ್ನೂ ಕೆಲ ನಿಯಮಗಳನ್ನು ಜಾರಿಗೊಳಿಸಬೇಕಾಗುತ್ತದೆ. ನಿಯಮಗಳ ಪಾಲನೆ ಖಾತ್ರಿಪಡಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಪೊಲೀಸರು, ಹೋಮ್ ಗಾರ್ಡ್ಸ್, ಮಾರ್ಷಲ್​ಗಳು, ಹೆಲ್ತ್ ಇನ್​ಸ್ಪೆಕ್ಟರ್​ಗಳು, ಮೆಡಿಕಲ್ ಆಫೀಸರ್​ಗಳು ಜಾಯಿಂಟ್ ಕಮೀಷನರ್​ಗಳ ಜೊತೆಗೆ ಚರ್ಚೆ ಮಾಡಲಾಗಿದೆ. ನಿಯಮಗಳನ್ನು ಯಾರೇ ಉಲ್ಲಂಘಿಸಿದರೂ ನಿಯಮಾನುಸಾರ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಹೊಸ ವರ್ಷಾಚರಣೆಗೆ ನಂದಿಗಿರಿಧಾಮದಲ್ಲಿ ನಿಷೇಧ ಚಿಕ್ಕಬಳ್ಳಾಫುರ: ಬೆಂಗಳೂರು ಸಮೀಪದ ನಂದಿಬೆಟ್ಟದಲ್ಲಿ ಹೊಸ ವರ್ಷಾಚರಣೆಗೆ ನಿಷೇಧ ಹೇರಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಆರ್.ಲತಾ ಆದೇಶ ಹೊರಡಿಸಿದ್ದಾರೆ. ಡಿ.30ರ ಸಂಜೆ 6ರಿಂದ ಜ.2ರ ಬೆಳಿಗ್ಗೆ 6 ಗಂಟೆಯವರೆಗೂ ಜನರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ. ಗಿರಿಧಾಮಕ್ಕೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲು ಪೊಲೀಸ್ ಇಲಾಖೆ ಮನವಿ ಮಾಡಿತ್ತು. ಹೊಸ ವರ್ಷಾಚರಣೆಯ ಗುಂಗಿನಲ್ಲಿ ಜನರು ಗಿಡ-ಮರ-ಬಳ್ಳಿ ಸೇರಿದಂತೆ ಪರಿಸರಕ್ಕೆ ಹಾನಿ ಮಾಡುವ ಸಂಭವವಿದೆ ಎಂಬ ಆತಂಕ ವ್ಯಕ್ತವಾಗಿತ್ತು. ಇದರ ಜೊತೆಗೆ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ಭೀತಿಯೂ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ನಿರ್ಬಂಧದ ಆದೇಶವನ್ನು ಹೊರಡಿಸಲಾಗಿದೆ.

ಇದನ್ನೂ ಓದಿ: ಮೈಸೂರು: ಅಪಾರ್ಟ್​​ಮೆಂಟ್​​ಗಳಲ್ಲಿ ಹೊಸ ವರ್ಷ ಆಚರಣೆಗೆ ಅವಕಾಶ; 10 ಗಂಟೆಗೆ ಎಲ್ಲಾ ವ್ಯಾಪಾರ ವಹಿವಾಟು ಬಂದ್ ಇದನ್ನೂ ಓದಿ: ATM New Rules: ಹೊಸ ವರ್ಷದಿಂದ ದುಬಾರಿಯಾಗಲಿದೆ ಎಟಿಎಂ ಕ್ಯಾಶ್ ವಿತ್​ಡ್ರಾ ಶುಲ್ಕ: ಹೊಸ ದರದ ಮಾಹಿತಿ ಇಲ್ಲಿದೆ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು