ಹೊಸ ವರ್ಷಾಚರಣೆ: ಬೆಂಗಳೂರಿನ ಹಲವೆಡೆ ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗಗಳು ಹೀಗಿವೆ
New Year 2024: ಹೊಸ ವರ್ಷಾಚರಣೆ ಹಿನ್ನೆಲೆ ಬೆಂಗಳೂರಿನ ಹಲವೆಡೆ ಸಂಚಾರ ಬದಲಾವಣೆ ಮಾಡಲಾಗಿದೆ. ವಾಹನ ಸವಾರರು, ಪಾದಚಾರಿಗಳು ಸೇರುವ ರಸ್ತೆ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಹಿತದೃಷ್ಟಿಯಿಂದ ವಾಹನಗಳ ಸಂಚಾರ ಮಾರ್ಪಾಡು ಮಾಡಲಾಗಿದೆ. ಪರ್ಯಾಯ ಮಾರ್ಗಗಳು ಹೀಗಿವೆ.
ಬೆಂಗಳೂರು, ಡಿಸೆಂಬರ್ 30: ಹೊಸ ವರ್ಷಾಚರಣೆ (New Year 2024) ಹಿನ್ನೆಲೆ ಬೆಂಗಳೂರಿನ ಹಲವೆಡೆ ಸಂಚಾರ ಬದಲಾವಣೆ ಮಾಡಲಾಗಿದೆ. ವಾಹನ ಸವಾರರು, ಪಾದಚಾರಿಗಳು ಸೇರುವ ರಸ್ತೆ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ. ಪೊಲೀಸ್ ವಾಹನಗಳು ಹಾಗೂ ಕರ್ತವ್ಯ ನಿರತ ತುರ್ತು ಸೇವಾ ವಾಹನಗಳನ್ನು ಹೊರತುಪಡಿಸಿ ಉಳಿದ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಹಿತದೃಷ್ಟಿಯಿಂದ ವಾಹನಗಳ ಸಂಚಾರ ಮಾರ್ಪಾಡು ಮಾಡಲಾಗಿದೆ.
ಯಾವೆಲ್ಲ ಮಾರ್ಗಗಳು ಬದಲಾವಣೆ
- ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಮೇಯೋ ಹಾಲ್ ಜಂಕ್ಷನ್ವರೆಗೆ,
- ಬ್ರಿಗೇಡ್ ರಸ್ತೆ, ಕಾವೇರಿ ಎಂಪೋರಿಯಂ ಜಂಕ್ಷನ್-ಅಪೇರಾ ಜಂಕ್ಷನ್ವರೆಗೆ
- ಚರ್ಚ್ಸ್ಟ್ರೀಟ್, ಬ್ರಿಗೇಡ್್ ರಸ್ತೆ ಜಂಕ್ಷನ್ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್
- ರೆಸ್ಟ್ಹೌಸ್ ರಸ್ತೆ, ಮ್ಯೂಸಿಯಂ ರಸ್ತೆ ಜಂಕ್ಷನ್ನಿಂದ ಬ್ರಿಗೇಡ್ ರಸ್ತೆ ಜಂಕ್ಷನ್
- ರೆಸಿಡೆನ್ಸಿ ಕ್ರಾಸ್ ರಸ್ತೆಯಲ್ಲಿ ರೆಸಿಡೆನ್ಸಿ ಜಂಕ್ಷನ್ನಿಂದ ಎಂ.ಜಿ.ರಸ್ತೆವರೆಗೆ
- ರೆಸಿಡೆನ್ಸಿ ರಸ್ತೆಯ ಆಶೀರ್ವಾದಂ ಜಂಕ್ಷನ್ನಿಂದ ಮೆಯೋಹಾಲ್ ಜಂಕ್ಷನ್
ಈ ಮಾರ್ಗಗಳಲ್ಲಿ ನಾಳೆ ರಾತ್ರಿ 8 ಗಂಟೆ ಬಳಿಕ ವಾಹನ ಸಂಚಾರ ಬದಲಾವಣೆ ಮಾಡಲಾಗಿದೆ.
ಎಂ.ಜಿ ರಸ್ತೆಯಲ್ಲಿ, ಕ್ಲೀನ್ಸ್ ವೃತ್ತದ ಕಡೆಯಿಂದ ಹಲಸೂರು ಹಾಗೂ ಇನ್ನು ಮುಂದಕ್ಕೆ ಹೋಗುವಂತಹ ಚಾಲಕರು ಅನಿಲ್ ಕುಂಬ್ಳೆ ವೃತ್ತದಲ್ಲಿ ಎಡತಿರುವು ಪಡೆದು, ಸೆಂಟ್ರಲ್ ಸ್ಟ್ರೀಟ್-ಬಿ.ಆರ್.ವಿ ಜಂಕ್ಷನ್-ಬಲ ತಿರುವು ಕಬ್ಬನ್‌ರಸ್ತೆ ಮೂಲಕ ಸಂಚರಿಸಿ ವೆಬ್‌ಜಂಕ್ಷನ್ ಬಳಿ ಎಂ.ಜಿ ರಸ್ತೆಯನ್ನು ಸೇರಿ ಮುಂದೆ ಸಾಗಬಹುದಾಗಿದೆ.
ಇದನ್ನೂ ಓದಿ: ಹೊಸ ವರ್ಷಕ್ಕೆ ಡ್ರಿಂಕ್ ಆ್ಯಂಡ್ ಡ್ರೈವ್ ಪರೀಕ್ಷೆ: 8 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ
ಹಲಸೂರು ಕಡೆಯಿಂದ ಕಂಟೊನ್ವೆಂಟ್ ಕಡೆಗೆ ಹೋಗುವಂತಹ ವಾಹನಗಳು ಟ್ರಿನಿಟಿ ವೃತ್ತದಲ್ಲಿ ಬಲ ತಿರುವು ಪಡೆದುಕೊಂಡು ಹಲಸೂರು ರಸ್ತೆ-ಡಿಕನ್ನನ್‌ರಸ್ತೆ ಮಾರ್ಗವಾಗಿ ಸಂಚರಿಸಿ ಕಬ್ಬನ್‌ರಸ್ತೆ ಸೇರಿ ಮುಂದೆ ಸಾಗುವುದು.
ಇದನ್ನೂ ಓದಿ: New Year 2024: ಡಿ.27ರಂದು ಹೊಸ ವರ್ಷಾಚರಣೆ ಮಾರ್ಗಸೂಚಿ ಬಗ್ಗೆ ನಿರ್ಧರಿಸಲಾಗುತ್ತೆ; ಬಿಎಂಪಿ ಮುಖ್ಯ ಆಯುಕ್ತ
ಹಲಸೂರು ಕಡೆಯಿಂದ ಮೆಜಸ್ಟಿಕ್ ಕಡೆಗೆ ಹೋಗುವಂತಯ ವಾಹನಗಳು ಮೆಯೋಹಾಲ್ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಕಮೀಷಾರಿಯೇಟ್ ರಸ್ತೆಯ ಮೂಲಕ ಗರುಡ ಮಾಲ್ ಜಂಕ್ಷನ್, ಡಿಸೋಜಾ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ರಿಚ್ಚಂಡ್ ರಸ್ತೆಯ ಮೂಲಕ ಸಾಗಬಹುದಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:53 pm, Sat, 30 December 23