AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಕೋರಿ ಹೈಕೋರ್ಟ್​ಗೆ ಪಿಐಎಲ್

ರಾಜ್ಯದಲ್ಲೂ ಕೊವಿಡ್ ಹರಡುವ ಭೀತಿ ಎದುರಾಗಿದೆ. ಹೀಗಾಗಿ ಕೊವಿಡ್ ತಡೆಯಲು ಹೊಸ ವರ್ಷಾಚರಣೆ ನಿರ್ಬಂಧಿಸಿ ಎಂದು ವಕೀಲ ಎನ್.ಪಿ.ಅಮೃತೇಶ್​ರಿಂದ‌ ಹೈಕೋರ್ಟ್​ಗೆ ಪಿಐಎಲ್ ಸಲ್ಲಿಸಲಾಗಿದೆ. ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್​ ರಸ್ತೆ, ಚರ್ಚ್ ಸ್ಟ್ರೀಟ್​, ಕಮರ್ಷಿಯಲ್ ಸ್ಟ್ರೀಟ್​ಗಳಲ್ಲಿ ಸಾವಿರಾರು ಜನ ಸೇರುತ್ತಾರೆ. ಈ ಪ್ರದೇಶಗಳಲ್ಲಿ ಹೊಸ ವರ್ಷಾಚರಣೆ ನಿರ್ಬಂಧಿಸಲು ಮನವಿ ಮಾಡಲಾಗಿದೆ. 

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಕೋರಿ ಹೈಕೋರ್ಟ್​ಗೆ ಪಿಐಎಲ್
ಹೈಕೋರ್ಟ್​
Ramesha M
| Edited By: |

Updated on:Dec 26, 2023 | 7:54 PM

Share

ಬೆಂಗಳೂರು, ಡಿಸೆಂಬರ್​ 26: ರಾಜ್ಯದಲ್ಲೂ ಕೊವಿಡ್ ಹರಡುವ ಭೀತಿ ಎದುರಾಗಿದೆ. ಹೀಗಾಗಿ ಕೊವಿಡ್ ತಡೆಯಲು ಹೊಸ ವರ್ಷಾಚರಣೆ (new year) ನಿರ್ಬಂಧಿಸಿ ಎಂದು ವಕೀಲ ಎನ್.ಪಿ.ಅಮೃತೇಶ್​ರಿಂದ‌ ಹೈಕೋರ್ಟ್​ಗೆ ಪಿಐಎಲ್ ಸಲ್ಲಿಸಲಾಗಿದೆ. ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಕ್ಕೆ ಸೂಚನೆ ನೀಡಿದೆ. ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್​ ರಸ್ತೆ, ಚರ್ಚ್ ಸ್ಟ್ರೀಟ್​, ಕಮರ್ಷಿಯಲ್ ಸ್ಟ್ರೀಟ್​ಗಳಲ್ಲಿ ಸಾವಿರಾರು ಜನ ಸೇರುತ್ತಾರೆ. ಈ ಪ್ರದೇಶಗಳಲ್ಲಿ ಹೊಸ ವರ್ಷಾಚರಣೆ ನಿರ್ಬಂಧಿಸಲು ಮನವಿ ಮಾಡಲಾಗಿದೆ.

ಬೆಂಗಳೂರಿನ ಎಂಜಿ ರಸ್ತೆ ಹಾಗೂ ಬ್ರಿಗೇಡ್ ರೋಡ್​ನಲ್ಲಿ ಸಾವಿರಾರು ಜನರು ಸೇರಿಸಿಕೊಂಡು ಪ್ರತಿ ಸಲ ಹೊಸ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳುತ್ತಾರೆ. ಕೊರೋನಾ ಆತಂಕ ಸೃಷ್ಟಿಸಿದ್ದರಿಂದ ಈ ಬಾರಿ ಹೊಸ ವರ್ಷಾಚರಣೆಗೆ ನಿರ್ಬಂಧಿಸಬೇಕಾ ಅಥವಾ ಬೇಡವಾ ಎನ್ನುವ ಚರ್ಚೆಗಳು ನಡೆದಿದೆ. ಆದರೆ ಬಿಬಿಎಂಪಿ, ಗೃಹ ಇಲಾಖೆ, ಆರೋಗ್ಯ ಇಲಾಖೆ ಸಭೆ ಮಾಡಿದ್ದು, ಹೊಸ ವರ್ಷ ಆಚರಣೆಗೆ ಯಾವುದೇ ನಿರ್ಭಂಧವಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: New Year Guidelines: ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಬೆಂಗಳೂರು ಪೊಲೀಸ್​ ಆಯುಕ್ತ: ಇಲ್ಲಿದೆ ಮಾಹಿತಿ

ಬೆಂಗಳೂರಿನ ಈ ನಗರಗಳಲ್ಲಿ ಜನಸಂದಣಿ ಹೆಚ್ಚಾಗಿರಲಿದ್ದು ಇಲ್ಲಿ ಮಹಿಳೆಯರ ಸುರಕ್ಷತೆಗಾಗಿ ಐಲ್ಯಾಂಡ್‌ ನಿರ್ಮಾಣವಾಗಲಿದೆ. ಇನ್ನು ಕೆಲವು ಸ್ಥಳಗಳಲ್ಲಿ ಪೊಲೀಸ್ ಕಿಯೋಸ್ಕ್ ಗಳನ್ನು ತೆರೆಯಲಾಗುತ್ತಿದ್ದು ಮಕ್ಕಳು ಕಾಣೆಯಾದಲ್ಲಿ, ಯಾವುದೇ ರೀತಿಯ ಕಳುವಿನ ದೂರುಗಳು ಇನ್ನಿತರ ತುರ್ತಿ ಸಂದರ್ಭದಲ್ಲಿ ಅವಶ್ಯಕ ಸೇವೆಯನ್ನು ಪಡೆಯಬಹುದಾಗಿದೆ.

ಹೊಸ ವರ್ಷಾಚರಣೆ ಹಿನ್ನೆಲೆ ಬೆಂಗಳೂರಿನಲ್ಲಿ ಪೊಲೀಸರು ಈಗಿನಿಂದಲೇ ಅಲರ್ಟ್ ಆಗಿದ್ದಾರೆ. ಈ ಬಾರಿ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದ್ದಾರೆ. ಮುಂಜಾಗ್ರತ ಕ್ರಮಗಳ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್​, ಒಂದು ಗಂಟೆವರೆಗೆ ಕ್ಲಬ್​ಗಳು ಓಪನ್​ ಇರುತ್ತೆ ಎಂದು ಹೇಳಿದ್ದರು.

ಇದನ್ನೂ ಓದಿ; ಕರ್ನಾಟಕದಲ್ಲಿ ಕೊರೋನಾ ಉಪತಳಿ ಜೆಎನ್​.1 ಸೋಂಕು ದೃಢ, ನಾಳೆಯಿಂದ ನಿತ್ಯ 5 ಸಾವಿರ ಟೆಸ್ಟಿಂಗ್

ಡಿಸೆಂಬರ್ 31 ರಾತ್ರಿ ಎಂಜಿರಸ್ತೆಯ ಮೆಟ್ರೋ ನಿಲ್ದಾಣದ ಬಳಿ‌ ನೂಕು ನುಗ್ಗಲು ಉಂಟಾಗುವ ಸಾಧ್ಯತೆಗಳಿರುವ ಕಾರಣ ರಾತ್ರಿ 11 ರಿಂದ 2ಗಂಟೆಯವೆಗೂ ಎಂಜಿ ರಸ್ತೆಯ ಮೆಟ್ರೋ ನಿಲ್ದಾಣ ಬಂದ್ ಆಗಲಿದೆ. ಕಬ್ಬನ್ ಪಾರ್ಕ್ ನಿಲ್ದಾಣ ಪರ್ಯಾಯವಾಗಿ ಬಳಕೆಯಾಗಲಿದೆ.

ವೀಲಿಂಗ್ ಪುಂಡರ ಪುಂಡಾಟಕ್ಕೆ ಬ್ರೇಕ್ ಹಾಕುವ ಸಲುವಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಫ್ಲೈಓವರ್ ಹೊರತು ನಗರ ಎಲ್ಲಾ ಫ್ಲೈ ಓವರ್ ಗಳನ್ನು ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆಯವರೆಗೂ ಸಂಪೂರ್ಣ ಬಂದ್ ಮಾಡಲಿದ್ದಾರೆ. ಭಾರಿ ವಾಹನಗಳನ್ನು ಒಂದು ದಿನ ಮುಂಚಿತವಾಗಿಯೇ ನಗರ ಪ್ರವೇಶ ನಿಷೇಧಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:13 pm, Tue, 26 December 23

Follow Us
Ramesha M
Ramesha M
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?