ರಾಜಧಾನಿ ಬೆಂಗಳೂರಿನಲ್ಲಿ ಕಾನೂನು ಕಾಲೇಜಿನ ಬಳಿ 2 ದಿನದ ಹೆಣ್ಣು ಶಿಶು ಬಿಟ್ಟುಹೋಗಿರುವ ದುರುಳರು
ನಿನ್ನೆ ರಾತ್ರಿ ಸುಮಾರು 9.30 ಗಂಟೆಗೆ ಹಸುಗೂಸು ಪತ್ತೆಯಾಗಿದ್ದು, ಕಾಲೇಜು ವಿದ್ಯಾರ್ಥಿಗಳು ಓಡಾಡುತ್ತಿದ್ದಾಗ ಮಗು ಕಂಡಿದೆ. ಹಳೆ ಬಟ್ಟೆಯಲ್ಲಿ ಮಗುವನ್ನು ಸುತ್ತಿ ಬಿಸಾಡಲಾಗಿದ್ದು, ಕಾಲೇಜು ವಿದ್ಯಾರ್ಥಿಗಳು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಎರಡು ದಿನದ ಹೆಣ್ಣು ಮಗುವನ್ನು ಕಾಲೇಜು ಮುಂಭಾಗದಲ್ಲಿ ಬಿಟ್ಟು ಹೋಗಿರುವ ಘಟನೆ ಬೆಂಗಳೂರಿನ ಕೆಎಲ್‌ಇ ಕಾನೂನು ಕಾಲೇಜಿನ ಬಳಿ ನಡೆದಿದೆ. ನಿನ್ನೆ ರಾತ್ರಿ 2 ದಿನದ ಮಗು ಪತ್ತೆಯಾಗಿದೆ. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಣ್ಣು ಮಗು ಜನನವಾಗಿರುವ ಹಿನ್ನೆಲೆ ಬಿಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಮಗು ಹಿನ್ನೆಲೆಯನ್ನು ಪೋಲಿಸರು ಪತ್ತೆ ಮಾಡುತ್ತಿದ್ದಾರೆ.
ನಿನ್ನೆ ರಾತ್ರಿ ಸುಮಾರು 9.30 ಗಂಟೆಗೆ ಹಸುಗೂಸು ಪತ್ತೆಯಾಗಿದ್ದು, ಕಾಲೇಜು ವಿದ್ಯಾರ್ಥಿಗಳು ಓಡಾಡುತ್ತಿದ್ದಾಗ ಮಗು ಕಂಡಿದೆ. ಹಳೆ ಬಟ್ಟೆಯಲ್ಲಿ ಮಗುವನ್ನು ಸುತ್ತಿ ಬಿಸಾಡಲಾಗಿದ್ದು, ಕಾಲೇಜು ವಿದ್ಯಾರ್ಥಿಗಳು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಬ್ಯಾಡರಹಳ್ಳಿ ಠಾಣೆ ಪೊಲೀಸರು, ಮಗುವನ್ನು ವಾಣಿವಿಲಾಸ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಗುವಿನ ಮೇಲೆ ಯಾವುದೇ ಗಾಯದ ಗುರುತು ಇಲ್ಲ. ಮಗು ಆರೋಗ್ಯವಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಟೊಯಿಂಗ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ರೆ ರೌಡಿಪಟ್ಟಿ ಬೀಳುತ್ತೆ! ಸುಖಾ ಸುಮ್ಮನೆ ಟೋಯಿಂಗ್ (Towing) ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ಆರೋಪಿಗಳ ಮೇಲೆ ಸಂಚಾರಿ ಪೊಲೀಸರು ರೌಡಿ ಪಟ್ಟಿ ಜಾರಿಗೊಳಿಸಿದ್ದಾರೆ. ಇತ್ತೀಚೆಗೆ ಟೋಯಿಂಗ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸುವ ಪ್ರಕರಣ ಹೆಚ್ಚಾಗುತ್ತಿವೆ. ಯಲಹಂಕ ಮತ್ತು ಇಂದಿರಾನಗರ ವ್ಯಾಪ್ತಿಯಲ್ಲಿ ಟೋಯಿಂಗ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆ ಮಾಡಿದ್ದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಹಲ್ಲೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಅಧಿಕಾರಿಗಳು ಘಟನೆ ಬಗ್ಗೆ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು.
ಟೋಯಿಂಗ್ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿದ್ದ ಆರೋಪಿಗಳ ವಿರುದ್ಧ ಸಿ ಕ್ಯಾಟಗರಿ ರೌಡಿ ಪಟ್ಟಿ ಜಾರಿಗೊಳಿಸಿದ್ದಾರೆ. ಯಲಹಂಕದಲ್ಲಿ ಜುಲೈ 28ರಂದು ಬೈಕ್ ಸವಾರರು ಟೋಯಿಂಗ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದರು. ಘಟನೆ ಸಂಬಂಧ ವಿಜಯ್ ಮತ್ತು ರಾಜಶೇಖರ್ ಎಂಬುವವರನ್ನು ಬಂಧಿಸಲಾಗಿದೆ. ಬಂಧಿತರಿಬ್ಬರ ವಿರುದ್ಧ ರೌಡಿ ಶೀಟ್ ಓಪನ್ ಆಗಿದೆ. ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ಸಿಬ್ಬಂದಿ ಬೈಕ್ ಟೋಯಿಂಗ್ ಮಾಡುತ್ತಿದ್ದರು. ಈ ವೇಳೆ ಟೋಲ್ ವಾಹನ ಏರಿ ಹೆಲ್ಮಟ್ನಿಂದ ಬೈಕ್ ಟೋಯಿಂಗ್ ಸಿಬ್ಬಂದಿಗೆ ಮನಸೋ ಇಚ್ಚೆ ಹಲ್ಲೆ ನಡೆಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಟೋಯಿಂಗ್ ಸಿಬ್ಬಂದಿ ಮೇಲೆ ಹಲ್ಲೆ ವಿಡಿಯೋ ವೈರಲ್ ಆಗಿತ್ತು. ವಿಡಿಯೋ ವೈರಲ್ ಆದ ಬಳಿಕ ಯಲಹಂಕ ನ್ಯೂಟೌನ್ ಪೊಲೀಸರು ಪ್ರಕರಣ ದಾಖಲಿಸಿದ್ದರು.
ಇನ್ನು ಇದೇ ತಿಂಗಳು ಇಂದಿರಾನಗರದಲ್ಲಿ ಟೋಯಿಂಗ್ ಸಿಬ್ಬಂದಿಗಳ ಮೇಲೆ ನಡೆದಿತ್ತು. ಟೋಯಿಂಗ್ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿದ್ದ ಆರೋಪಿ ಕೆಂಚೇಗೌಡ ಮತ್ತು ಪಾಷನನ್ನು ಬಂಧಿಸಲಾಗಿದೆ. ಬಂಧನಕ್ಕೊಳಗಾದ ಕೆಂಚೇಗೌಡ ಸ್ಥಳೀಯರ ಪ್ರಚೋದನೆಗೊಳಗಾಗಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಚಪ್ಪಲಿ ಎಸೆದಿದ್ದ ಎಂದು ಪೊಲೀಸರು ತಿಳಿಸಿದ್ದರು. ಸದ್ಯ ಬಂಧಿತರ ವಿರುದ್ಧ ರೌಡಿ ಶೀಟ್ ಓಪನ್ ಮಾಡಲು ಸಿದ್ಧತೆ ನಡೆಯುತ್ತಿದೆ. ಟೋಯಿಂಗ್ ಸಿಬ್ಬಂದಿಗಳ ಮೇಲೆ ದೂರು ಇದ್ದರೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು. ಆಗ ಕಾನೂನು ಕೈಗೆತ್ತಿಕೊಂಡು ಆರೋಪಿಗಳ ಮೇಲೆ ರೌಡಿ ಪಟ್ಟಿ ಅಸ್ತ್ರ ಪ್ರಯೋಗಿಸುತ್ತಾರೆ.
ಇದನ್ನೂ ಓದಿ: ಬಚ್ಚಲಲ್ಲೇ ಹೆತ್ತು, ಮಗುವನ್ನು ನೇಣಿಗೆ ಹಾಕಿದ ತಾಯಿ; ಚಿಕ್ಕಬಳ್ಳಾಪುರ ಸರ್ಕಾರಿ ಆಸ್ಪತ್ರೆಯ ಕಿಟಕಿಯಲ್ಲಿ ನವಜಾತ ಶಿಶು ಪತ್ತೆ
ಹೆಣ್ಣು ಮಗು ಹುಟ್ಟಿತು ಎಂಬ ಒಂದೇ ಕಾರಣಕ್ಕೆ.. ನವಜಾತ ಶಿಶುವನ್ನು ತಿಪ್ಪೆಗುಂಡಿಗೆ ಬಿಸಾಡಿದ ಪಾಪಿಗಳು
Published On - 12:22 pm, Wed, 25 August 21