ಬೆಂಗಳೂರಿಗೆ ಮುಂದಿನ 2 ವರ್ಷಗಳಲ್ಲಿ 2454 ಪೊಲೀಸ್​​ ಹುದ್ದೆ, 11 ಪೊಲೀಸ್​ ಠಾಣೆ ಸ್ಥಾಪನೆ: ಸಿಎಂ

ಪ್ರಸಕ್ತ ವರ್ಷ ಚಿಕ್ಕಬಾಣಾವರ ಮತ್ತು ಜ್ಞಾನಭಾರತಿ ಸಂಚಾರ ಠಾಣೆಗಳು ಹಾಗೂ ಉತ್ತರ, ಕೇಂದ್ರ ಪಶ್ಚಿಮ, ಈಶಾನ್ಯ, ಆಗ್ನಿಯ ಮತ್ತು ವೈಟ್‌ಫೀಲ್ಡ್ ವಿಭಾಗದಲ್ಲಿ ಮಹಿಳಾ ಠಾಣೆಗಳನ್ನು ಸ್ಥಾಪಿಸಲಾಗುತ್ತದೆ.

ಬೆಂಗಳೂರಿಗೆ ಮುಂದಿನ 2 ವರ್ಷಗಳಲ್ಲಿ 2454 ಪೊಲೀಸ್​​ ಹುದ್ದೆ, 11 ಪೊಲೀಸ್​ ಠಾಣೆ ಸ್ಥಾಪನೆ: ಸಿಎಂ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on: Sep 16, 2023 | 10:46 AM

ಬೆಂಗಳೂರು ಸೆ.16: ನಗರದಲ್ಲಿ ಸುಗಮ ಸಂಚಾರ ಹಾಗೂ ಕಾನೂನು ಸುವ್ಯವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ಮುಂದಿನ ಎರಡು ವರ್ಷಗಳಲ್ಲಿ ಐದು ಸಂಚಾರ (Traffic) ಹಾಗೂ ಆರು ಮಹಿಳಾ ಪೊಲೀಸ್ (Woman Police Station) ಠಾಣೆಗಳನ್ನು ಸ್ಥಾಪಿಸಲಾಗುತ್ತದೆ. ಸಿಸಿಬಿ ಘಟಕಕ್ಕೆ 234 ಸಿಬ್ಬಂದಿ ಸೇರಿದಂತೆ ನಗರ ಕಮೀಷನರೇಟ್‌ಗೆ 2454 ಹುದ್ದೆಗಳನ್ನು ನೇಮಿಸಿಕೊಳ್ಳುವುದರಿಂದ ಪೊಲೀಸ್‌ ವ್ಯವಸ್ಥೆ ಮತ್ತಷ್ಟು ಬಲವರ್ಧನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು. ರಾಜ್ಯ ಪೊಲೀಸ್‌ ಕೇಂದ್ರ ಕಚೇರಿಯಲ್ಲಿ ಗುರುವಾರ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಿ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ಪೊಲೀಸರಿಗೆ ಶಕ್ತಿ ತುಂಬಲು ಸರ್ಕಾರ ಬದ್ಧವಾಗಿದೆ ಎಂದರು.

2016-17ನೇ ಸಾಲಿನ ಬಜೆಟ್‌ನಲ್ಲಿ ನಗರ ಸಶಸ್ತ್ರ ಮೀಸಲು ಪಡೆ ಪಶ್ಚಿಮ ಹಾಗೂ ಪೂರ್ವಘಟಕ ಗಳನ್ನು ಸ್ಥಾಪಿಸಲು ಘೋಷಿಸಿದ್ದೆ. ಇದರಲ್ಲಿ ಪಶ್ಚಿಮ ಸ್ಥಾಪನೆಯಾಗಿದ್ದು, ಇನ್ನುಳಿದ ಪೂರ್ವ ಘಟಕ ಘಟಕ ಆರಂಭಕ್ಕೆ 60.64 ಕೋಟಿ ರೂ. ಅನುದಾನ ಒದಗಿಸಲಾಗುತ್ತದೆ. ಇನ್ನು ಪಾರಂಪರಿಕ ಕಟ್ಟಡವಾಗಿರುವ 148 ವರ್ಷದ ಹಳೆಯ ಪೊಲೀಸ್ ಆಯುಕ್ತರ ಕಚೇರಿ ಸಂರಕ್ಷಿಸುವ ಉದ್ದೇಶದಿಂದ ನವೀಕರಣಕ್ಕೆ 3 ಕೋಟಿ ರೂ. ಅನುದಾನ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.

ಬೆಂಗಳೂರು ಪೊಲೀಸರಿಗೆ ಹೊಸ ವಾಹನಗಳ ಖರೀದಿಗೆ 100 ಕೋಟಿ ರೂ. ಹಣಕಾಸು ನೆರವು ನೀಡುವ ಸಂಬಂಧ ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲು ಒಪ್ಪಿಗೆ ಸೂಚಿಸಿದ ಮುಖ್ಯಮಂತ್ರಿಗಳು, ಈ ಯೋಜನೆಯ ಕಡತವನ್ನು ಸಂಪುಟ ಸಭೆಯಲ್ಲಿ ಮಂಡಿಸಲು ಗೃಹ ಸಚಿವರಿಗೆ ಹೇಳಿದರು.

ಇದನ್ನೂ ಓದಿ: G. Parameshwar: ರಾಜ್ಯದಲ್ಲಿರುವ ಎಲ್ಲಾ ಪೊಲೀಸ್​ ಠಾಣೆಗಳನ್ನು ಡಿಜಿಟಲೀಕರಣ ಮಾಡುತ್ತೇವೆ: ಗೃಹ ಸಚಿವ ಡಾ ಜಿ ಪರಮೇಶ್ವರ್

ಪ್ರಸಕ್ತ ವರ್ಷ ಚಿಕ್ಕಬಾಣಾವರ ಮತ್ತು ಜ್ಞಾನಭಾರತಿ ಸಂಚಾರ ಠಾಣೆಗಳು ಹಾಗೂ ಉತ್ತರ, ಕೇಂದ್ರ ಪಶ್ಚಿಮ, ಈಶಾನ್ಯ, ಆಗ್ನಿಯ ಮತ್ತು ವೈಟ್‌ಫೀಲ್ಡ್ ವಿಭಾಗದಲ್ಲಿ ಮಹಿಳಾ ಠಾಣೆಗಳನ್ನು ಸ್ಥಾಪಿಸಲಾಗುತ್ತದೆ. ಹಾಗೆಯೇ 3 ಎಸಿಪಿ, 23 ಪಿಐಗಳು, 116 ಪಿಎಸ್‌ಐಗಳು, 234 ಎಎಸ್‌ಐಗಳು, 273 ಹೆಡ್ ಕಾನ್‌ಸ್ಟೇಬಲ್, 574 ಕಾನ್‌ಸ್ಟೇಬಲ್‌ಗಳು ಸೇರಿದಂತೆ 1226 ಹುದ್ದೆಗಳನ್ನು ಹೊಸದಾಗಿ, ಸೃಷ್ಟಿಸಿ ಭರ್ತಿ ಮಾಡಲಾಗುತ್ತದೆ ಎಂದು ತಿಳಿಸಿದರು.

2024-25ನೇ ಸಾಲಿನಲ್ಲಿ ಜೆ.ಪಿ.ನಗರ, ಶೇಷಾದ್ರಿಪುರ ಹಾಗೂ ಸಂಜಯನಗರ ಸಂಚಾರ ಠಾಣೆಗಳು ಸ್ಥಾಪಿಸಲಾಗುತ್ತದೆ. ಹಾಗೆಯೇ ಓರ್ವ ಎಸಿಪಿ, ಆರು ಪಿಎಸ್​ಐಗಳು, 162 ಪಿಎಸ್‌ಐಗಳು, 318 ಎಎಸ್‌ಐಗಳು, 236 ಹೆಡ್ ಕಾನ್‌ಸ್ಟೇಬಲ್‌ಗಳು ಹಾಗೂ 505 ಕಾನ್‌ಸ್ಟೇಬಲ್‌ಗಳು ಸೇರಿದಂತೆ 1228 ಹುದ್ದೆಗಳನ್ನು ಸೃಜಿಸುವುದಾಗಿ ಎಂದು ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ