Karnataka Rain: ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ; ಕರಾವಳಿ ಭಾಗದಲ್ಲಿ ದಾಖಲೆ ಪ್ರಮಾಣದ ಮಳೆ, ವಿವರ ಇಲ್ಲಿದೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಟಿವಿ9ಗೆ ಹವಾಮಾನ ಇಲಾಖೆ ತಜ್ಞ ಆರ್.ಪ್ರಸಾದ್ ತಿಳಿಸಿದ್ದಾರೆ.
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ (Bangal Kolli) ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಟಿವಿ9ಗೆ ಹವಾಮಾನ ಇಲಾಖೆ ತಜ್ಞ ಆರ್.ಪ್ರಸಾದ್ ತಿಳಿಸಿದ್ದಾರೆ. ರಾಜ್ಯದ ಕರಾವಳಿ (Coastal), ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಕರವಾಳಿಯಲ್ಲಿ ಸುಬ್ರಹ್ಮಣ್ಯದಲ್ಲಿ 16 ಸೆಂ ಮೀ ನಷ್ಟು ಮಳೆಯಾಗಿದೆ. ಹೀಗಾಗಿ ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿಗೆ ಯಲ್ಲೋ ಅಲರ್ಟ್ ಹಾಗೂ ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ಇನ್ನೂ 2 ದಿನ ಮೋಡ ಕವಿದ ವಾತಾವರಣ ಇರಲಿದೆ. ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಕರಾವಳಿ ಭಾಗದ ಜಿಲ್ಲೆಗಳಲ್ಲಿ ದಾಖಲೆ ಪ್ರಮಾಣದ ಮಳೆ 24 ಗಂಟೆಯಲ್ಲಿ 8 ಪ್ರದೇಶಗಳಲ್ಲಿ 100 ಮಿ.ಮೀ.ಗೂ ಹೆಚ್ಚು ಮಳೆಯಾಗಿದೆ . ಉತ್ತರ ಕನ್ನಡ ಜಿಲ್ಲೆಯಲ್ಲಿ ದಾಖಲೆ ಪ್ರಮಾಣದ ಮಳೆ ಸುರಿದಿದೆ.
1. ಉತ್ತರಕನ್ನಡ ಜಿಲ್ಲೆ ಕ್ಯಾಸಲ್ರಾಕ್ ಪ್ರದೇಶದಲ್ಲಿ 152.4 ಮಿ.ಮೀ. ಮಳೆಯಾಗಿದೆ
2. ದಕ್ಷಿಣ ಕನ್ನಡ ಜಿಲ್ಲೆ ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ 159.8 ಮಿ.ಮೀ. ಮಳೆಯಾಗಿದೆ
3. ಉಡುಪಿ ಜಿಲ್ಲೆ ಕೋಟ ವ್ಯಾಪ್ತಿಯಲ್ಲಿ 118.8 ಮಿಲಿ ಮೀಟರ್ ಮಳೆಯಾಗಿದೆ. ಜಿಲ್ಲೆಯ 7 ಪ್ರದೇಶಗಳಲ್ಲಿ 80 ಮಿಲಿ ಮೀಟರ್ನಿಂದ 100 ಮಿ.ಮೀ ಮಳೆಯಾಗಿದೆ. ಕುಂದಾಪುರ, ಬೆಳ್ತಂಗಡಿ, ಮಾನಕಿ, ಪಣಂಬೂರು, ಗೋಕರ್ಣ, ಸುಳ್ಯ ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗಿದೆ.
4. ಉಡುಪಿ ಜಿಲ್ಲೆ ಕುಂದಾಪುರದಲ್ಲಿ 92.5 ಮಿಲಿ ಮೀಟರ್ ಮಳೆಯಾಗಿದೆ.
5. ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರಿನಲ್ಲಿ 80.4 ಮಿ.ಮೀ. ಮಳೆಯಾಗಿದೆ. ಮಂಗಳೂರು-87.5 ಮಿ.ಮೀ., ಸುಳ್ಯ-75.6 ಮಿ.ಮೀ. ಮಳೆಯಾಗಿದೆ. ಕುಮಟಾ ತಾಲೂಕಿನ ಗೋಕರ್ಣದಲ್ಲಿ 80.3 ಮಿಲಿ ಮೀಟರ್ ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Published On - 5:30 pm, Mon, 11 July 22