ಬೆಂಗಳೂರು: ಶಂಕಿತ ಉಗ್ರ ಅಲಿ ಅಬ್ಬಾಸ್ ಬಂಧಿಸಿದ ಎನ್​ಐಎ ಅಧಿಕಾರಿಗಳು

| Updated By: ಆಯೇಷಾ ಬಾನು

Updated on: Dec 14, 2023 | 8:56 AM

ಬೆಂಗಳೂರಿನಲ್ಲಿ ನಡೆದಿದ್ದ ಎನ್ಐಎ (NIA) ದಾಳಿ ಪ್ರಕರಣ ಸಂಬಂಧ ಶಂಕಿತ ಉಗ್ರ ಅಲಿ ಅಬ್ಬಾಸ್​ನನ್ನು ಬೆಂಗಳೂರಿನಲ್ಲಿ ಎನ್​ಐಎ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

ಬೆಂಗಳೂರು: ಶಂಕಿತ ಉಗ್ರ ಅಲಿ ಅಬ್ಬಾಸ್ ಬಂಧಿಸಿದ ಎನ್​ಐಎ ಅಧಿಕಾರಿಗಳು
ಎನ್​ಐಎ
Follow us on

ಬೆಂಗಳೂರು, ಡಿ.14: ಬೆಂಗಳೂರಿನಲ್ಲಿ ನಡೆದಿದ್ದ ಎನ್ಐಎ (NIA) ದಾಳಿ ಪ್ರಕರಣ ಸಂಬಂಧ ಶಂಕಿತ ಉಗ್ರ ಅಲಿ ಅಬ್ಬಾಸ್​ನನ್ನು ಬೆಂಗಳೂರಿನಲ್ಲಿ ಎನ್​ಐಎ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಇತ್ತೀಚೆಗೆ ಅಲಿ ಅಬ್ಬಾಸ್ ಮನೆ ಮೇಲೆ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ದಿನ‌ ವಶಕ್ಕೆ ಪಡೆದು ವಿಚಾರಣೆ ನಡೆಸಿ ಕಳುಹಿಸಲಾಗಿತ್ತು. ಇದಾದ ಬಳಿಕ ದಾಖಲೆಗಳ‌ ಪರಿಶೀಲನೆ ನಡೆಸಿ ಮತ್ತಷ್ಟು ವಿಚಾರಣೆಗಾಗಿ ಮತ್ತೆ ವಶಕ್ಕೆ ಪಡೆದಿದ್ದರು. ಸದ್ಯ ಈಗ ಅಬ್ಬಾಸ್ ಅಲಿಯನ್ನ ಬಂಧಿಸಿ ತೀವ್ರ ವಿಚಾರಣೆ ನಡೆಸ್ತಿದ್ದಾರೆ.

ಬೆಂಗಳೂರು ಸೇರಿದಂತೆ ಮಹಾರಾಷ್ಟ್ರದ 44 ಸ್ಥಳಗಳಲ್ಲಿ ದಾಳಿ ನಡೆಸಿದ್ದ ಎನ್ಐಎ ಅಧಿಕಾರಿಗಳು ಐಸಿಸ್ ನೊಂದಿಗೆ ಸಂಪರ್ಕದಲ್ಲಿದ್ದ 15 ಶಂಕಿತರನ್ನ ಬಂಧಿಸಿ, ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನ ವಶಪಡಿಸಿಕೊಂಡಿದ್ದರು. ಅದರಲ್ಲಿ ಐಎಸ್‌ (ಇಸ್ಲಾಮಿಕ್ ಸ್ಟೇಟ್) ಸಂಘಟನೆ ಜೊತೆ ನಂಟು ಹೊಂದಿ ಯುವಕರನ್ನು ಪ್ರಚೋದಿಸುತ್ತಿದ್ದ ಆರೋಪದಡಿ ಅಲಿ ಹಫೀಜ್ ಅಲಿಯಾಸ್ ಅಲಿ ಅಬ್ಬಾಸ್‌ ಮನೆ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಐಸಿಸ್​​ ಶಂಕಿತ ಉಗ್ರನ ಮನೆ ಮೇಲೆ ಮತ್ತೆ ಎನ್​ಐಎ ದಾಳಿ: ಯಾರು ಈ ಅಬ್ಬಾಸ್ ಅಲಿ?

ಪುಲಿಕೇಶಿನಗರದ ಮೋರ್ ರಸ್ತೆಯಲ್ಲಿ ವಾಸವಾಗಿದ್ದ ಅಲಿ ಅಬ್ಬಾಸ್ ಪೇಟಿವಾಲ ಎಂಬಾತನ ಮನೆಯ ಮೇಲೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿ ತೀವ್ರ ಶೋಧ ನಡೆಸಿದ್ದರು. ಬಳಿಕ ಮರುದಿನ ಮತ್ತೆ ಅಬ್ಬಾಸ್ ಮನೆಯ ಮೇಲೆ ದಾಳಿ ಮಾಡಿ ಪರಿಶೀಲಿಸಿ 16,42,000 ಹಣ ಸೀಜ್ ಮಾಡಿದ್ದರು. ಮೊಬೈಲ್​, ಲ್ಯಾಪ್​ಟಾಪ್​​​ ಪರಿಶೀಲನೆ ನಡೆಸಿ ಐಸಿಸ್​​ ಶಂಕಿತ ಉಗ್ರ ಅಬ್ಬಾಸ್​ನನ್ನ ವಶಕ್ಕೆ ಪಡೆದಿದ್ದರು. ಬಳಿಕ ವಿಚಾರಣೆ ನಡೆಸಿ ಬಿಟ್ಟು ಕಳಿಸಿದ್ದರು. ನಂತರ ದಾಖಲೆಗಳ ಪರಿಶೀಲನೆ ನಡೆಸಿ ಮತ್ತೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಸದ್ಯ ಈಗ ಅರೆಸ್ಟ್ ಮಾಡಲಾಗಿದೆ.

ಅಬ್ಬಾಸ್ ಅಲಿ ಯಾರು?

ಮೂಲತಃ ಮುಂಬೈ ಮೂಲದ ಆಲಿ ಅಬ್ಬಾಸ್ ಪೇಟಿವಾಲ, ಸಾಪ್ಟ್ ವೇರ್ ಉದ್ಯೋಗಿಯಾಗಿದ್ದು‌, ಐಸಿಸ್ ನೊಂದಿಗೆ ಸಂಪರ್ಕ್ ಹೊಂದಿದ್ದ ಎಂದು ತಿಳಿದುಬಂದಿದೆ. ಜೊತೆಗೆ ಈತ ಟ್ಯಾನರಿ ರೋಡ್ ನಲ್ಲಿ ಉರ್ದು ಶಾಲೆ ನಡೆಸ್ತಿದ್ದ. ಹೆಂಡ್ತಿ ಡಯಾಟಿಕ್ ಹಾಸ್ಪಿಟಲ್ ನಡೆಸ್ತಿದ್ದಾರೆ. ಇವರು ಶಾಮಾಜ್ ಎಂಬುವರಿಂದ 2018ರಲ್ಲಿ 62 ಲಕ್ಷಕ್ಕೆ ಫ್ಲ್ಯಾಟ್ ಖರೀದಿ ಮಾಡಿದ್ದರು. ಹೆಂಡ್ತಿ, ಮೂವರು ಮಕ್ಕಳು ಹಾಗು ತಂದೆ ಜೊತೆ ಅಬ್ಬಾಸ್ ವಾಸವಾಗಿದ್ದ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:43 am, Thu, 14 December 23