AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ನೋಟು ತಯಾರಿಸುವ ಜಾಲದ ಮೇಲೆ NIA ಅಧಿಕಾರಿಗಳ ದಾಳಿ; ಆರೋಪಿ ಬಂಧನ

ನಕಲಿ ನೋಟು(Fake Note)ತಯಾರಿಸುವ ಜಾಲದ ಮೇಲೆ ಎನ್‌ಐಎ (NIA) ಅಧಿಕಾರಿಗಳ ದಾಳಿ ಮಾಡಿದ್ದು, ಕರ್ನಾಟಕದ ಬೆಂಗಳೂರು, ಬಳ್ಳಾರಿಯಲ್ಲಿ ಎನ್‌ಐಎ ದಾಳಿ ನಡೆಸಿದೆ. ಈ ವೇಳೆ ಪ್ರಮುಖ ಆರೋಪಿ ರಾಹುಲ್ ತಾನಾಜಿ ಎಂಬಾತನನ್ನು ಬಂಧಿಸಲಾಗಿದೆ. ಇನ್ನು ಬಳ್ಳಾರಿ ಜಿಲ್ಲೆಯಲ್ಲೂ ದಾಳಿ ನಡೆಸಿ ಓರ್ವನನ್ನು ಅರೆಸ್ಟ್​ ಮಾಡಲಾಗಿದೆ. ಬಳ್ಳಾರಿ ಮೂಲದ ಮಹೇಂದರ್ ಬಂಧಿತ ಆರೋಪಿ.

ನಕಲಿ ನೋಟು ತಯಾರಿಸುವ ಜಾಲದ ಮೇಲೆ NIA ಅಧಿಕಾರಿಗಳ ದಾಳಿ; ಆರೋಪಿ ಬಂಧನ
ಎನ್​ಐಎ ಅಧಿಕಾರಿಗಳು
Shivaprasad B
| Edited By: |

Updated on:Dec 02, 2023 | 5:24 PM

Share

ಬೆಂಗಳೂರು, ಬಳ್ಳಾರಿ ಡಿ.02: ನಕಲಿ ನೋಟು(Fake Note)ತಯಾರಿಸುವ ಜಾಲದ ಮೇಲೆ ಎನ್‌ಐಎ (NIA) ಅಧಿಕಾರಿಗಳ ದಾಳಿ ಮಾಡಿದ್ದು, ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಕರ್ನಾಟಕದ ಬೆಂಗಳೂರು, ಬಳ್ಳಾರಿಯಲ್ಲಿ ಎನ್‌ಐಎ ದಾಳಿ ನಡೆಸಿದೆ. ಈ ವೇಳೆ ಪ್ರಮುಖ ಆರೋಪಿ ರಾಹುಲ್ ತಾನಾಜಿ ಎಂಬಾತನನ್ನು ಬಂಧಿಸಲಾಗಿದೆ. ಇನ್ನು ಬಳ್ಳಾರಿ ಜಿಲ್ಲೆಯಲ್ಲೂ ದಾಳಿ ನಡೆಸಿ ಓರ್ವನನ್ನು ಅರೆಸ್ಟ್​ ಮಾಡಲಾಗಿದೆ. ಬಳ್ಳಾರಿ ಮೂಲದ ಮಹೇಂದರ್ ಬಂಧಿತ ಆರೋಪಿ. ಇತ ಮನೆಯಲ್ಲೇ 500, 200, 100 ರೂಪಾಯಿಯ ಮುಖಬೆಲೆಯ ನಕಲಿ ನೋಟು ತಯಾರಿಸುತ್ತಿದ್ದ. ಇದೀಗ ಪೊಲೀಸರು ನೋಟು ತಯಾರಿಸುವ ಪೇಪರ್, ಪ್ರಿಂಟಿಂಗ್ ಮಶಿನ್​ಗಳನ್ನು ವಶಕ್ಕೆ ಪಡೆದಿದ್ದಾರೆ.

ನಕಲಿ ನೋಟು ಸ್ಮಗ್ಲಿಂಗ್ ಪ್ರಕರಣದ ಅಪರಾಧಿಗೆ 6 ವರ್ಷ ಜೈಲುಶಿಕ್ಷೆ

ನಕಲಿ ನೋಟು ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ವನಿತಾ ಎಂಬುವವರಿಗೆ ಸೆ.16 ರಂದುಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯ 6 ವರ್ಷ ಜೈಲುಶಿಕ್ಷೆ ಜೊತೆಗೆ 20 ಸಾವಿರ ದಂಡ ವಿಧಿಸಿತ್ತು. 2018ರಲ್ಲಿ ಬಾಂಗ್ಲಾದೇಶದಿಂದ ಅಕ್ರಮವಾಗಿ ರಾಜ್ಯಕ್ಕೆ ಖೋಟಾ ನೋಟು ಸಾಗಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ಎನ್ಐಎ, ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಅಪರಾಧಿ ವನಿತಾ ಅಲಿಯಾಸ್ ತಂಗಂ ಬಳಿ 2.50 ಲಕ್ಷ ನಕಲಿ ನೋಟು ಪತ್ತೆಯಾಗಿತ್ತು. ಬಳಿಕ 8 ಜನರ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಿದ್ದರು. ಈ ಕುರಿತು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು. ನಂತರ ಪ್ರಕರಣದ 6ನೇ ಆರೋಪಿ ವನಿತಾ ಅವರಿಗೆ ಆರೋಪ ಸಾಬೀತಾದ ಹಿನ್ನೆಲೆ ಶಿಕ್ಷೆ ವಿಧಿಸಲಾಗಿತ್ತು.

ಇದನ್ನೂ ಓದಿ:Belagavi News: ಕರ್ನಾಟಕ ಮಹಾರಾಷ್ಟ್ರ ಗಡಿಯಲ್ಲಿ ನಕಲಿ ನೋಟು ಬದಲಾಯಿಸೋ ಗ್ಯಾಂಗ್ ಅರೆಸ್ಟ್

ಇನ್ನು ಕರ್ನಾಟಕದಲ್ಲಿ ನಕಲಿ ನೋಟುಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಂತೆ ಇತ್ತೀಚೆಗೆ 100 ರೂಪಾಯಿ ಮುಖಬೆಲೆಯ ಒಟ್ಟು 30 ನಕಲಿ ನೋಟುಗಳು ಉಡುಪಿ , ಮಣಿಪಾಲ , ಹುಬ್ಬಳ್ಳಿ ಹಾಗು ಮಲ್ಲೇಶ್ವರ ಬ್ರಾಂಚ್​ನ ಬ್ಯಾಂಕ್ ಗಳಲ್ಲಿ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳಲ್ಲಿ 4 ಎಫ್​ಐಆರ್​ಗಳು ದಾಖಲಾಗಿದ್ದು, ಆರ್​ಬಿಐಗೆ ರಿಮೀಟ್ ಮಾಡುವ ಸಂದರ್ಭದಲ್ಲಿ ಈ ನಕಲಿ ನೋಟುಗಳು ಬೆಳಕಿಗೆ ಬಂದಿತ್ತು. ಇದೀಗ ನೋಟು ಪ್ರಿಂಟ್ ಮಾಡುವ ಜಾಲ ಪತ್ತೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:15 pm, Sat, 2 December 23

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​