ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಗಲಭೆ; ಬೆಂಗಳೂರಿನ 7 ಸ್ಥಳಗಳಲ್ಲಿ ಎನ್‌ಐಎ ಅಧಿಕಾರಿಗಳ ದಾಳಿ

ಕೆ.ಜಿ. ಹಳ್ಳಿ, ಡಿ.ಜೆ. ಹಳ್ಳಿ, ಗೋವಿಂದಪುರ ಹಾಗೂ ಥಣಿಸಂದ್ರ ಭಾಗಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು, ಕೆಲ ಕಾರ್ಯಕರ್ತರ ಮನೆಯಲ್ಲಿ ಪ್ರಚೋದನಕಾರಿ ಬರಹ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ ಎನ್‌ಐಎ ಅಧಿಕಾರಿಗಳು ತಮ್ಮ ದಾಳಿ ಮುಕ್ತಾಯಗೊಳಿಸಿದ್ದಾರೆ.

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಗಲಭೆ; ಬೆಂಗಳೂರಿನ 7 ಸ್ಥಳಗಳಲ್ಲಿ ಎನ್‌ಐಎ ಅಧಿಕಾರಿಗಳ ದಾಳಿ
ಪ್ರಾತಿನಿಧಿಕ ಚಿತ್ರ
Follow us
| Updated By: preethi shettigar

Updated on: Aug 07, 2021 | 1:08 PM

ಬೆಂಗಳೂರು: ಡಿ.ಜೆ. ಹಳ್ಳಿ ಹಾಗೂ ಕೆ.ಜಿ. ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು (ಆಗಸ್ಟ್ 7) ಬೆಳಂಬೆಳಗ್ಗೆ ಬೆಂಗಳೂರಿನ 7 ಸ್ಥಳಗಳಲ್ಲಿ ಎನ್‌ಐಎ (NIA) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಎಸ್​ಡಿಪಿಐ, ಪಿಎಫ್​ಐ ಕಾರ್ಯಕರ್ತರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಕೆ.ಜಿ. ಹಳ್ಳಿ, ಡಿ.ಜೆ. ಹಳ್ಳಿ, ಗೋವಿಂದಪುರ ಹಾಗೂ ಥಣಿಸಂದ್ರ ಭಾಗಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು, ಕೆಲ ಕಾರ್ಯಕರ್ತರ ಮನೆಯಲ್ಲಿ ಪ್ರಚೋದನಕಾರಿ ಬರಹ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ ಎನ್‌ಐಎ ಅಧಿಕಾರಿಗಳು ತಮ್ಮ ದಾಳಿ ಮುಕ್ತಾಯಗೊಳಿಸಿದ್ದಾರೆ.

ಭಟ್ಕಳದಲ್ಲಿ ಎನ್​ಐಎ ದಾಳಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ರಾಷ್ಟ್ರೀಯ ತನಿಖಾ ದಳ ಶುಕ್ರವಾರ ದಾಳಿ ನಡೆಸಿ, ಐಸಿಸ್ ಉಗ್ರರ ಜೊತೆಗೆ ನಂಟು ಹೊಂದಿದ್ದ ಶಂಕೆಯ ಮೇಲೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಭಟ್ಕಳದ ಉಮರ್ ಸ್ಟ್ರೀಟ್, ಸಾಗರ ರಸ್ತೆಯ ಮನೆ ಮೇಲೆ ದಾಳಿ ನಡೆಸಲಾಗಿದೆ.

ವಿವಿಧೆಡೆ ಕಾರ್ಯಾಚರಣೆ ದೇಶದ ವಿವಿಧೆಡೆ ಇತ್ತೀಚೆಗೆ ಕಾರ್ಯಾಚರಣೆ ನಡೆಸಿದ ರಾಷ್ಟ್ರೀಯ ತನಿಖಾ ದಳದ ಭದ್ರತಾ ಸಿಬ್ಬಂದಿ ಹಲವು ಐಸಿಸ್ ಉಗ್ರರನ್ನು ಬಂಧಿಸಿದ್ದಾರೆ. ರಾಜ್ಯದಲ್ಲಿಯೂ ಇಬ್ಬರು ಶಂಕಿತ ಐಸಿಸ್ ಉಗ್ರರನ್ನು ಬಂಧಿಸಲಾಗಿದೆ. ಬೆಂಗಳೂರಿನ ಶಂಕರ್ ವೆಂಕಟೇಶ್ ಪೆರುಮಾಳ್, ಮಂಗಳೂರಿನ ಅಮರ್ ಅಬ್ದುಲ್ ರೆಹಮಾನ್ ಬಂಧಿತರು. ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತಿಬ್ಬರು ಶಂಕಿತ ಉಗ್ರರನ್ನು ಸೆರೆ ಹಿಡಿಯಲಾಗಿದೆ.

ಕರ್ನಾಟಕ ಸೇರಿದಂತೆ ದೇಶದ 5 ಕಡೆ ಎನ್‌ಐಎ ಬುಧವಾರ ದಾಳಿ ನಡೆಸಿತ್ತು. ಕರ್ನಾಟಕದ ಬಂಧಿತ ಉಗ್ರರು ಕೇರಳದ ಮೊಹಮದ್ ಅಮೀನ್ ಜೊತೆಗೆ ನಂಟು ಹೊಂದಿದ್ದರು ಎಂದು ಆರೋಪಿಸಲಾಗಿದೆ. ಐಸಿಎಸ್ ಉಗ್ರಗಾಮಿಗಳೊಂದಿಗೆ ಸಂಪರ್ಕದಲ್ಲಿದ್ದ ಮೊಹಮದ್ ಅಮೀನ್, ಉಗ್ರಗಾಮಿ ಚಟುವಟಿಕೆಗಳಿಗೆ ಹಣಕಾಸು ಒದಗಿಸುತ್ತಿದ್ದ. ಬಂಧಿತರು ಸಹ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿ ಹಣ ಸಂಗ್ರಹಿಸುತ್ತಿದ್ದರು ಎಂದು ದೂರಲಾಗಿದೆ.

ಇದನ್ನೂ ಓದಿ:

ಶಾಸಕ ಜಮೀರ್ ಆಪ್ತ ಮುಜಾಹಿದ್ ಮನೆ ಮೇಲೂ ಇಡಿ ದಾಳಿ

ಡಿಲೀಟ್ ಆಗಿದ್ದ ಡಾಟಾ ರಿಕವರಿಯೇ ಶಾಸಕ ಜಮೀರ್ ಅಹ್ಮದ್ ಆಸ್ತಿ ಮೇಲೆ ದಾಳಿಗೆ ಕಾರಣವಾಯ್ತು!