ರಾಜ್ಯದ ಹಲವೆಡೆ ನಿಷೇಧಿತ PFI ಮುಖಂಡರ ಮನೆಗಳ ಮೇಲೆ NIA ದಾಳಿ

ಇಂದು ಮುಂಜಾನೆಯೇ ಎನ್​ಐಎ ಅಧಿಕಾರಿಗಳು ನಿಷೇಧಿತ ಪಿಎಫ್​ಐ ಮುಖಂಡರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ರಾಜ್ಯದ ಹಲವೆಡೆ ಪಿಎಫ್​ಐ ಮುಖಂಡರ ಮನೆ ಬಾಗಿಲು ತಟ್ಟಿದ್ದಾರೆ.

ರಾಜ್ಯದ ಹಲವೆಡೆ ನಿಷೇಧಿತ PFI ಮುಖಂಡರ ಮನೆಗಳ ಮೇಲೆ NIA ದಾಳಿ
ಎನ್​ಐಎ ಅಧಿಕಾರಿಗಳು (ಸಂಗ್ರಹ ಚಿತ್ರ)
Follow us
TV9 Web
| Updated By: ಆಯೇಷಾ ಬಾನು

Updated on:Nov 05, 2022 | 10:46 AM

ಮಂಗಳೂರು: ರಾಜ್ಯದ ಹಲವೆಡೆ ನಿಷೇಧಿತ ಪಿಎಫ್​ಐ ಮುಖಂಡರ ಮನೆಗಳ ಮೇಲೆ ಎನ್​ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ, ಸುಳ್ಯ, ಮೈಸೂರು, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಿ PFI ಮುಖಂಡರ ಮನೆಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ನಿಷೇಧಿತ ಪಿಎಫ್​ಐ ಮುಖಂಡರಿಗಾಗಿ ಎನ್​ಐಎ ತಲಾಶ್ ನಡೆಸುತ್ತಿದೆ.

ಹೈದ್ರಾಬಾದ್ ನಿಂದ ಬಂದಿರೋ NIA ಅಧಿಕಾರಿಗಳು ಬೆಳಗಿನ ಜಾವ ಹಳೇ‌ ಹುಬ್ಬಳ್ಳಿಯ ನುರಾನಿ ಪ್ಲಾಟ್ ನಲ್ಲಿರುವ ಎಸ್​ಡಿಪಿಐ ಮುಖಂಡ ಇಸ್ಮಾಯಿಲ್ ನಾಲಬಂದ್ ಮನೆ ಮೇಲೆ‌ ದಾಳಿ ನಡೆಸಿದ್ದು ಮನೆಯಲ್ಲಿ ಸಂಪೂರ್ಣ ಪರಿಶೀಲನೆ ನಡೆಸಿದ್ದಾರೆ. ಹಾಘೂ ಇಸ್ಮಾಯಿಲ್ ಗೆ ನೋಟಿಸ್ ಕೊಟ್ಟಿದ್ದಾರೆ. ಬೆಳಗಿನ ಜಾವ ನಾಲ್ಕು ಗಂಟೆಗೆ 10 ಜನ ಅಧಿಕಾರಿಗಳ ತಂಡದಿಂದ ಕಸಬಾಪೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಕಚೇರಿಯ ಮೇಲೆ ದಾಳಿ ನಡೆದಿದೆ. ಮೈಸೂರಿನ ಎನ್.ಆರ್ ಮೊಹಲ್ಲಾ, ಮಂಡಿ‌ ಮೊಹಲ್ಲಾದಲ್ಲಿ ಕೆಲ ಕಾರ್ಯಕರ್ತರ ಮನೆಗಳಲ್ಲಿ ತಪಾಸಣೆ ನಡೆಸಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ನಾನು ಕಳೆದ ಆರು ವರ್ಷದಿಂದ SDPI ನಲ್ಲಿ ಕೆಲಸ‌ ಮಾಡುತ್ತಿದ್ದೆನೆ. ಇಂದು ಬೆಳಗ್ಗೆ ಐದು ಗಂಟೆಗೆ NIA ಅಧಿಕಾರಿಗಳು ಬಂದು ವಿಚಾರಣೆ ಮಾಡಬೇಕೆಂದರು. ನಾವು ಸಹಕಾರ ನೀಡಿದ್ದೆವೆ ಅವರು ಸಹ ಸೌಜನ್ಯ ಪೂರ್ವಕವಾಗಿ ನಡೆಸಿಕೊಂಡರು. ನಮ್ಮ ಕಿರಿಯ ಮಗನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಇಂದು ಸಂಜೆ ಅಥವಾ ಈ ತಿಂಗಳ ಏಳರಂದು ಬೆಂಗಳೂರಿನಲ್ಲಿ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ. ಈ ವಿಚಾರಣೆಗೆ ನಾವು ಸಂಪೂರ್ಣ ಸಹಕಾರ ನೀಡುತ್ತೆವೆ. SDPI ಗೂ PFI ಗೂ ಯಾವುದೇ ಸಂಬಂಧವಿಲ್ಲ. ಅವರ ತತ್ವ ಸಿದ್ದಾಂತಗಳೇ ಬೇರೆ ನಮ್ಮ ಸಿದ್ದಾಂತಗಳೇ ಬೇರೆ ಎಂದು ಇಸ್ಮಾಯಿಲ್ ತಿಳಿಸಿದರು.

ಮೈಸೂರಿನಲ್ಲಿ ಪಿಎಫ್​ಐ ಮಾಜಿ ಕಾರ್ಯದರ್ಶಿ ಎನ್​ಐಎ ವಶಕ್ಕೆ

ಮಂಡಿ ಮೊಹಲ್ಲಾದ ಮನೆಯಲ್ಲಿ ಸುಲೈಮಾನ್ ವಶಕ್ಕೆ ಪಡೆದು ಎನ್​ಐಎ ವಿಚಾರಣೆ ನಡೆಸಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಮುಖ ಆರೋಪಿಗಳನ್ನು ಹುಡುಕಿಕೊಟ್ಟವರಿಗೆ ಬಹುಮಾನ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳ ಬಂಧನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸುತ್ತಮುತ್ತ ರಾಷ್ಟ್ರೀಯ ತನಿಖಾ ದಳದ (ಎನ್​ಐಎ) ಶೋಧ ಕಾರ್ಯ ನಡೆಸುತ್ತಿದೆ. ಪುತ್ತೂರು, ಬೆಳ್ಳಾರೆ, ಸುಳ್ಯದಲ್ಲಿ ಎನ್​ಐಎ ಅಧಿಕಾರಿಗಳ ಒಟ್ಟು ಆರು ತಂಡಗಳಿಂದ ಶೋಧ ಕಾರ್ಯ ನಡೆಸಲಾಗುತ್ತಿದ್ದು, ಸಾರ್ವಜನಿಕರಿಂದ ಮಾಹಿತಿ ಕಲೆ ಹಾಕಿಕೊಳ್ಳಲಾಗುತ್ತಿದೆ. ನಾಲ್ವರು ಅರೋಪಿಗಳ ಸುಳಿವು ಕೊಟ್ಟವರಿಗೆ ಒಟ್ಟು 14 ಲಕ್ಷ ನಗದು ಬಹುಮಾನ ನೀಡುವುದಾಗಿ ಅಧಿಕಾರಿಗಳು ಘೋಷಿಸಿದ್ದಾರೆ. ಇಬ್ಬರು ಆರೋಪಿ ಬಗ್ಗೆ ಮಾಹಿತಿ ನೀಡಿದರೆ 5 ಲಕ್ಷ ರೂಪಾಯಿ ಹಾಗೂ ಇನ್ನಿಬ್ಬರ ಆರೋಪಗಳ ಬಗ್ಗೆ ಮಾಹಿತಿ ತಿಳಿಸಿದರೆ 2 ಲಕ್ಷ ಬಹುಮಾನ ರೂ. ನಗದು ಬಹುಮಾನ ನೀಡುವುದಾಗಿ ಎನ್‌ಐಎ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.

ಮೊಹಮ್ಮದ್ ಮುಸ್ತಫಾ ಮತ್ತು ತುಫೈಲ್ ಬಗ್ಗೆ ಮಾಹಿತಿ ನೀಡಿದರೆ 5 ಲಕ್ಷ ರೂ. ಬಹುಮಾನ, ಇನ್ನು ಇಬ್ಬರು ಆರೋಪಿಗಳಾದ ಉಮರ್ ಫಾರೂಕ್‌ ಹಾಗೂ ಅಬೂಬಕರ್ ಸಿದ್ದಿಕ್‌ ಬಗ್ಗೆ ಮಾಹಿತಿ ನೀಡಿದರೆ 2 ಲಕ್ಷ ಬಹುಮಾನ ರೂಪಾಯಿ ನಗದು ಬಹುಮಾನ ನೀಡುವಾಗಿ ಎನ್​ಐಎ ಪ್ರಕಟಣೆಯಲ್ಲಿ ತಿಳಿಸಿದೆ. ಸದ್ಯ ಈಗ ಈ ಪ್ರಕರಣ ಸಂಬಂಧ ಮತ್ತೆ ಮೂವರು ಆರೋಪಿಗಳನ್ನು NIA ಅಧಿಕಾರಿಗಳು ಬಂಧಿಸಿದ್ದಾರೆ. ಬೆಳ್ಳಾರೆ ಗ್ರಾ.ಪಂ ಸದಸ್ಯ ಇಕ್ಬಾಲ್​ ಬೆಳ್ಳಾರೆ, ಸುಳ್ಯದ ಇಬ್ರಾಹಿಂ ಶಾ, SDPI ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಸೇರಿದಂತೆ ಇಂದು ಮುಂಜಾನೆ ಮೂವರನ್ನು ಅರೆಸ್ಟ್ ಮಾಡಲಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆಗೂ ಪಿಎಫ್​ಐ ನಿಷೇಧಕ್ಕೂ ಇದೆ ನಂಟು

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (Pupular Front of India – PFI) ಹಾಗೂ ಅದರ ಸಹವರ್ತಿ ಸಂಘಟನೆಗಳು ಅಥವಾ ಅಧೀನ ಸಂಘಟನೆಗಳನ್ನು ಕೇಂದ್ರ ಸರ್ಕಾರವು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ನಿಷೇಧಿಸಿ ಸೆಪ್ಟೆಂಬರ್ ತಿಂಗಳಲ್ಲಿ ಆದೇಶ ಹೊರಡಿಸಿತ್ತು. ನಿಷೇಧಕ್ಕೆ ಸಂಬಂಧಿಸಿದಂತೆ ಹೊರಡಿಸಿರುವ ಅಧಿಸೂಚನೆಯಲ್ಲಿ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ ಪ್ರಕರಣ ಪ್ರಸ್ತಾಪವಾಗಿತ್ತು. ಪಿಎಫ್​ಐ ನಿಷೇಧಕ್ಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ತನ್ನ ಅಧಿಸೂಚನೆಯಲ್ಲಿ ನೀಡಿರುವ ವಿವರಣೆಯಲ್ಲಿ ಕರ್ನಾಟಕ ಸರ್ಕಾರದ ಶಿಫಾರಸನ್ನೂ ಉಲ್ಲೇಖಿಸಿತ್ತು.

ಸಂಜಿತ್ (ಕೇರಳ 2021), ವಿ.ರಾಮಲಿಂಗಮ್ (ತಮಿಳುನಾಡು 2019), ನಂದು (ಕೇರಳ 2021), ಅಭಿಮನ್ಯು (ಕೇರಳ 2018), ಬಿಬಿನ್ (ಕೇರಳ 2017), ಶರತ್ (ಕರ್ನಾಟಕ 2017), ಆರ್.ರುದ್ರೇಶ್ (ಕರ್ನಾಟಕ 2016), ಪ್ರವೀಣ್ ಪೂಜಾರಿ (ಕರ್ನಾಟಕ 2016), ಶಶಿ ಕುಮಾರ (ತಮಿಳುನಾಡು 2016) ಮತ್ತು ಪ್ರವೀಣ್ ನೆಟ್ಟಾರು (ಕರ್ನಾಟಕ 2022) ಅವರ ಕೊಲೆ ಸೇರಿದಂತೆ ಹಲವು ಅಪರಾಧ ಚಟುವಟಿಕೆಗಳಲ್ಲಿ ಪಿಎಫ್​ಐ ಭಾಗಿಯಾಗಿದೆ. ಸಾರ್ವಜನಿಕ ನೆಮ್ಮದಿಗೆ ಭಂಗ ತರುವುದು ಹಾಗೂ ಭಯ ಹೆಚ್ಚಿಸುವ ಉದ್ದೇಶವನ್ನು ಪಿಎಫ್​ಐ ಹೊಂದಿದೆ ಎಂದು ಕೇಂದ್ರ ಸರ್ಕಾರದ ಅಧಿಸೂಚನೆ ಹೇಳಿತ್ತು.

Published On - 8:08 am, Sat, 5 November 22

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್