ಸಿಎಂ ಮುಂದೆ ಶರಣಾಗಿದ್ದ 6 ನಕ್ಸಲರಿಗೆ ನ್ಯಾಯಾಂಗ ಬಂಧನ

ಕರ್ನಾಟಕ ಸರ್ಕಾರದ ಮುಂದೆ ಶರಣಾಗಿದ್ದ ರಾಜ್ಯದ 6 ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್ಐಎ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದೆ ಶರಣಾಗಿದ್ದ ನಕ್ಸಲರನ್ನು ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದರು. ಇಂದು ಅವರನ್ನು ಎನ್​ಐಎ ವಿಶೇಷ ಕೋರ್ಟ್​ ಮುಂದೆ ಹಾಜರುಪಡಿಸಲಾಗಿತ್ತು. ಕೋರ್ಟ್‌ಗೆ ಹಾಜರುಪಡಿಸುವ ಮುನ್ನಾ 6 ನಕ್ಸಲರಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಸಲಾಗಿತ್ತು. ನಂತರ 6 ನಕ್ಸಲರನ್ನು ಬಿಗಿ ಪೊಲೀಸ್ ಬಂಧೋಬಸ್ತ್‌ನಲ್ಲಿ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಎನ್‌ಐಎ ವಿಶೇಷ ಕೋರ್ಟ್‌ಗೆ ಪೊಲೀಸರು ಹಾಜರುಪಡಿಸಿದ್ದರು.

ಸಿಎಂ ಮುಂದೆ ಶರಣಾಗಿದ್ದ 6 ನಕ್ಸಲರಿಗೆ ನ್ಯಾಯಾಂಗ ಬಂಧನ
Karnataka Naxals
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jan 09, 2025 | 6:07 PM

ಬೆಂಗಳೂರು: ಕರ್ನಾಟಕವನ್ನು ನಕ್ಸಲ್ ಮುಕ್ತ ರಾಜ್ಯವನ್ನಾಗಿ ಮಾಡಲು ಹೆಜ್ಜೆ ಇಟ್ಟಿರುವ ಕಾಂಗ್ರೆಸ್ ಸರ್ಕಾರದ ಮುಂದೆ ನಿನ್ನೆ (ಬುಧವಾರ) 6 ನಕ್ಸಲ್ ನಾಯಕರು ಶರಣಾಗಿದ್ದರು. ರಾಜ್ಯದ ನಕ್ಸಲ್ ನಾಯಕರಾದ ಮುಂಡಗಾರು ಲತಾ, ಸುಂದರಿ ಕೊತ್ಲೂರು, ವನಜಾಕ್ಷಿ ಬಾಳೆಹೊಳೆ, ಜಿಶಾ, ವಸಂತ್ ಟಿ.ಎನ್, ಮಾರೆಪ್ಪ ಅರೋಲಿ ಅವರನ್ನು ಇಂದು ಚಿಕ್ಕಮಗಳೂರು ಡಿವೈಎಸ್‌ಪಿ ಬಾಲಾಜಿ ಸಿಂಗ್ ಎನ್‌ಐಎ ವಿಶೇಷ ಕೋರ್ಟ್‌ನ ನ್ಯಾಯಾಧೀಶರಾದ ಗಂಗಾಧರ್ ಮುಂದೆ ಹಾಜರುಪಡಿಸಿದ್ದರು. ಆ ಆರು ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ. ಜನವರಿ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್​ ಆದೇಶಿಸಿದೆ. ಕೆಲವೇ ಕ್ಷಣಗಳಲ್ಲಿ ನಕ್ಸಲರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುವುದು.

ಶರಣಾದ 6 ನಕ್ಸಲರನ್ನು ಪೊಲೀಸರು ಕೋರ್ಟ್​ಗೆ ಹಾಜರುಪಡಿಸಿದ್ದರು. ಸಿಟಿ ಸಿವಿಲ್ ಕೋರ್ಟ್ ಸಂಕೀರ್ಣದ NIA ಕೋರ್ಟ್​ಗೆ ಹಾಜರು ಪಡಿಸಲಾಗಿತ್ತು. ನಕ್ಸಲರನ್ನು ಕೋರ್ಟ್​ಗೆ ಹಾಜರು ಪಡಿಸಿರುವ ಹಿನ್ನೆಲೆಯಲ್ಲಿ ಖುದ್ದು ಡಿಸಿಪಿ ಹೆಚ್.ಟಿ. ಶೇಖರ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ವಹಿಸಲಾಗಿತ್ತು. ನಕ್ಸಲರನ್ನು ಕೋರ್ಟ್​ಗೆ ಹಾಜರುಪಡಿಸುವ ಮುನ್ನ 6 ನಕ್ಸಲರಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಸಲಾಗಿತ್ತು. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಖಚಿತಪಡಿಸಿಕೊಳ್ಳಲಾಗಿತ್ತು.

ಇದನ್ನೂ ಓದಿ: ನಕ್ಸಲರು ಶರಣಾದ ನಂತರ ಕಾನೂನು ಪ್ರಕ್ರಿಯೆಗಳು ಏನೇನಿರುತ್ತವೆ? ಇಲ್ಲಿದೆ ಮಾಹಿತಿ

ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಎದುರು ಶರಣಾದ ನಕ್ಸಲರಲ್ಲಿ ನಾಲ್ವರು ಮಹಿಳೆಯರು, ಇಬ್ಬರು ಪುರುಷರಿದ್ದಾರೆ. ಅವರಲ್ಲಿ ತಮಿಳುನಾಡು ಮೂಲದ ವಸಂತ್ ಎಂಬಾತ ಬಿಟೆಕ್ ಪದವೀಧರನಾಗಿದ್ದಾನೆ. ಶರಣಾದವರಲ್ಲಿ ಶೃಂಗೇರಿಯ ಮುಂಡಗಾರು ಲತಾ, ರಾಯಚೂರಿನ ಮಾರೆಪ್ಪ ಅರೋಲಿ, ದಕ್ಷಿಣ ಕನ್ನಡದ ಸುಂದರಿ ಕೊತ್ಲೂರು, ಚಿಕ್ಕಮಗಳೂರಿನ ವನಜಾಕ್ಷಿ ಬಾಳೆಹೊಳೆ, ಕೇರಳ ಮೂಲದ ಜಿಶಾ ಸೇರಿದ್ದಾರೆ.

ಇತಿಹಾಸದಲ್ಲೇ ಮೊದಲ ಬಾರಿಗೆ ನಿನ್ನೆ ಆರು ನಕ್ಸಲರು ಮುಖ್ಯಮಂತ್ರಿಗಳ ಮುಂದೆ ಶರಣಾಗುವ ಮೂಲಕ ಮುಖ್ಯಭೂಮಿಕೆಗೆ ಬಂದಿದ್ದಾರೆ. ಕರ್ನಾಟಕದಲ್ಲಿ ಉಳಿದಿರುವ ಏಕೈಕ ನಕ್ಸಲ್ ರವೀಂದ್ರನಿಗಾಗಿ ಹುಡುಕಾಟ ನಡೆಯುತ್ತಿದೆ. ಆತ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ.

ಕರ್ನಾಟಕದ 8 ನಕ್ಸಲರ ಪೈಕಿ ಇತ್ತೀಚೆಗೆ ವಿಕ್ರಂಗೌಡ ಎನ್​ಕೌಂಟರ್ ಮಾಡಲಾಗಿದೆ. 7 ಜನರ ಪೈಕಿ ನಿನ್ನೆ 6 ನಕ್ಸಲರ ಶರಣಾಗತಿಯಾಗಿದ್ದಾರೆ. ಆದರೆ ಏಕೈಕ ನಕ್ಸಲ್ ರವೀಂದ್ರ ಮಾತ್ರ ಶರಣಾಗಿಲ್ಲ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ರವೀಂದ್ರ ವಿರುದ್ಧ 14 ಕೇಸ್​​ಗಳಿವೆ. ನಕ್ಸಲ್ ಶರಣಾಗತಿ ಕಮಿಟಿ ಸಂಪರ್ಕಕ್ಕೂ ಸಿಕ್ಕಿಲ್ಲ. ಕಳೆದ 18 ವರ್ಷಗಳಿಂದ ಭೂಗತವಾಗಿರುವ ನಕ್ಸಲ್​​ ರವೀಂದ್ರ, ಯಾರ ಸಂಪರ್ಕಕ್ಕೆ ಸಿಕ್ಕಿಲ್ಲ. ಆ ಮೂಲಕ ರಾಜ್ಯದ ನಕ್ಸಲರ ಪಟ್ಟಿಯಲ್ಲಿ ಉಳಿದುಕೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:48 pm, Thu, 9 January 25

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್