AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎಸ್​ಐಎಸ್​ ಸಂಘಟನೆಗೆ ಬೆಂಬಲ ನೀಡ್ತಿದ್ದ ಉಗ್ರನಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಬೆಂಗಳೂರಿನ ಎನ್​ಐಎ ವಿಶೇಷ ನ್ಯಾಯಾಲಯವು ಐಎಸ್​ಐಎಸ್ (ISIS) ಸಂಘಟನೆಗೆ ಬೆಂಬಲ ನೀಡುತ್ತಿದ್ದ ಉಗ್ರ(Terrorist)ಅಬೂಬ್ಬಕ್ಕರ್ ಬಾಗ್ದಾದಿ ಎಂಬಾತನಿಗೆ ​​10 ವರ್ಷ ಜೈಲು, 2 ಲಕ್ಷದ 15 ಸಾವಿರ ದಂಡ ವಿಧಿಸಿ ತೀರ್ಪು ಪ್ರಕಟ ಮಾಡಿದೆ. ಈ ಅಪರಾಧಿ ಟ್ವಿಟರ್​​ ಖಾತೆ ಮೂಲಕ ಉಗ್ರ ಸಂಘಟನೆಗೆ ಯುವಕರನ್ನು ಸೆಳೆಯುತ್ತಿದ್ದ.

ಐಎಸ್​ಐಎಸ್​ ಸಂಘಟನೆಗೆ ಬೆಂಬಲ ನೀಡ್ತಿದ್ದ ಉಗ್ರನಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್
ಪ್ರಾತಿನಿಧಿಕ ಚಿತ್ರ
Shivaprasad B
| Edited By: |

Updated on:Feb 01, 2024 | 6:58 PM

Share

ಬೆಂಗಳೂರು, ಫೆ.01: ಐಎಸ್​ಐಎಸ್ (ISIS) ಸಂಘಟನೆಗೆ ಬೆಂಬಲ ನೀಡುತ್ತಿದ್ದ ಉಗ್ರ(Terrorist)ಅಬೂಬ್ಬಕ್ಕರ್ ಬಾಗ್ದಾದಿ ಎಂಬಾತನಿಗೆ ಬೆಂಗಳೂರಿನ ಎನ್​ಐಎ ವಿಶೇಷ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ‘SAMI WITNESS’ ಎಂಬ ಟ್ವಿಟರ್​​ ಖಾತೆ ಹೊಂದಿದ್ದ ಉಗ್ರ ಬಾಗ್ದಾದಿ, ಅದರ ಮೂಲಕ ಉಗ್ರ ಸಂಘಟನೆಗೆ ಯುವಕರನ್ನು ಸೆಳೆಯುತ್ತಿದ್ದ. ಇದರ ಖಚಿತ ಮಾಹಿತಿ ಬೆನ್ನಲ್ಲೇ ಆತನನ್ನು ಬಂಧಿಸಲಾಗಿತ್ತು. ಇದೀಗ ಆತನಿಗೆ ಕೋರ್ಟ್,​ ಶಿಕ್ಷೆ ವಿಧಿಸಿದೆ.

ಇತ ಸಿಕ್ಕಿಬಿದ್ದಿದ್ದೇಗೆ

ಸಿಸಿಬಿ ಟೀಂ ಗಂಗಮ್ಮನಗುಡಿಯಲ್ಲಿ ಮೆಹದಿ ಮಸ್ರೂರ್ ಬಿಸ್ವಾಸ್ ಎಂಬಾತನನ್ನು ಬಂಧಿಸಿತ್ತು. ಬಂಧಿತನಾಗಿದ್ದ ಮೆಹದಿ ಮಸ್ರೂರ್ ಬಿಸ್ವಾಸ್ ಕೊಟ್ಟ ಮಾಹಿತಿ ಮೇರೆಗೆ ಎನ್​ಐಎ ತಂಡ 2016ರಲ್ಲಿ ಅಬ್ಬೂಬ್ಬಕರ್ ಬಾಗ್ದಾದಿಯನ್ನು ಬಂಧಿಸಿದ್ದರು. ಬಳಿಕ ತೀವ್ರ ವಿಚಾರಣೆ ನಡೆಸಲಾಯಿತು. ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಇದೀಗ ವಿಶೇಷ ಕೋರ್ಟ್​​ 10 ವರ್ಷ ಜೈಲು, 2 ಲಕ್ಷದ 15 ಸಾವಿರ ದಂಡ ವಿಧಿಸಿ ತೀರ್ಪು ಪ್ರಕಟ ಮಾಡಿದೆ.

ಇದನ್ನೂ ಓದಿ:ದಕ್ಷಿಣ ಭಾರತವನ್ನು ಟಾರ್ಗೆಟ್ ಮಾಡಿದ್ರಾ ಐಎಸ್​ಐಎಸ್​ ಉಗ್ರಗಾಮಿಗಳು? ಟಿವಿ9ಗೆ ಸಿಕ್ಕಿದೆ ಸ್ಪೋಟಕ ಅಂಶ

ಪಂಜಾಬ್ ಮುಖ್ಯಮಂತ್ರಿ ಹತ್ಯೆ ಮಾಡಲು ಬೆದರಿಕೆ ಹಾಕಿದ್ದ ಉಗ್ರ

ಇತ್ತೀಚಿಗೆ ಗಣರಾಜ್ಯೋತ್ಸವದಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್​ರನ್ನು ಕೊಲ್ಲುವುದಾಗಿ ಉಗ್ರ ಗುರು ಪತ್ವಂತ್​ ಸಿಂಗ್ ಪನ್ನು ಬೆದರಿಕೆ ಹಾಕಿದ್ದನು. ಗ್ಯಾಂಗ್​ಸ್ಟರ್ ವಿರುದ್ಧ ಪಂಜಾಬ್ ಪೊಲೀಸರು ಶೂನ್ಯ ಸಹಿಷ್ಣುತೆಯ ನೀತಿಯನ್ನು ಅಳವಡಿಸಿಕೊಂಡು ಕಠಿಣ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಡಿಜಿಪಿ ಗೌರವ್ ಯಾದವ್ ಅವರಿಗೆ ಜೀವ ಬೆದರಿಕೆ ಹಾಕಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:52 pm, Thu, 1 February 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್