ಬೆಂಗಳೂರಲ್ಲಿ ಶಂಕಿತ ಉಗ್ರರ ಬಂಧನ ಪ್ರಕರಣ: ಐವರನ್ನು ಶೀಘ್ರದಲ್ಲೇ ವಶಕ್ಕೆ ಪಡೆಯಲಿರುವ ಎನ್ಐಎ ಅಧಿಕಾರಿಗಳು

ಸ್ಪೋಟಕ್ಕೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದ ಐವರು ಶಂಕಿತ ಉಗ್ರರನ್ನು ಶೀಘ್ರದಲ್ಲೇ ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆಯಲಿದ್ದಾರೆ.

ಬೆಂಗಳೂರಲ್ಲಿ ಶಂಕಿತ ಉಗ್ರರ ಬಂಧನ ಪ್ರಕರಣ: ಐವರನ್ನು ಶೀಘ್ರದಲ್ಲೇ ವಶಕ್ಕೆ ಪಡೆಯಲಿರುವ ಎನ್ಐಎ ಅಧಿಕಾರಿಗಳು
ಎನ್​​ಐಎ (ಸಂಗ್ರಹ ಚಿತ್ರ)
Follow us
TV9 Web
| Updated By: ವಿವೇಕ ಬಿರಾದಾರ

Updated on: Aug 06, 2023 | 8:05 AM

ಬೆಂಗಳೂರು: ಸ್ಪೋಟಕ್ಕೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ಸಿಸಿಬಿ (CCB) ಪೊಲೀಸರು ಬಂಧಿಸಿದ್ದ ಐವರು ಶಂಕಿತ ಉಗ್ರರನ್ನು (Suspected Terrorists) ಶೀಘ್ರದಲ್ಲೇ ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆಯಲಿದ್ದಾರೆ. ಸಿಸಿಬಿ ವಿಚಾರಣೆ ಮುಗಿದ ನಂತರ ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ರಾಷ್ಟ್ರೀಯ ತನಿಖಾ ದಳ (National Investigation Agency-NIA) ಈಗಾಗಲೇ ಪ್ರಕರಣದ ಬಗ್ಗೆ ಸಿಸಿಬಿಯಿಂದ ಪ್ರಾಥಮಿಕ ಮಾಹಿತಿ ಪಡೆದಿದೆ. ಶಂಕಿತರ ಬಳಿ ಪತ್ತೆಯಾದ ಗ್ರೆನೇಡ್, ನಾಡ ಪಿಸ್ತೂಲ್​ಗಳ ಬಗ್ಗೆ ಎನ್ಐಎ ನಿಗಾ ಇಟ್ಟಿದೆ. ಈ ಹಿನ್ನೆಲೆಯಲ್ಲಿ ಶಂಕಿತ ಉಗ್ರರ ಒಳಸಂಚು ಮತ್ತು ಷಡ್ಯಂತ್ರ ಬಗ್ಗೆ ವಿಚಾರಣೆ ನಡೆಸಲಿದೆ.

ವಿದೇಶದಿಂದ‌ ಫಂಡಿಂಗ್ ಮತ್ತು ಗ್ರೆನೇಡ್ ಭಾರತಕ್ಕೆ ಸರಬರಾಜನ್ನು ಗಂಭೀರವಾಗಿ ಪರುಗಣಸಿದ ಎನ್​ಐಎ ಐವರನ್ನು ವಶಕ್ಕೆ ಪಡೆಯಲಿದ್ದಾರೆ. ಅಲ್ಲದೇ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಜುನೇದ್ ಕರೆ ತರುವ ಬಗ್ಗೆ ಕಾನೂನು ಪ್ರಕ್ರಿಯೆ ಕೈಗೊಳ್ಳಲಿದೆ. ಜುನೈದ್ ಪತ್ತೆಗೆ ಸಿಸಿಬಿ ಈಗಾಗಲೇ ಲುಕ್ ಔಟ್ ನೋಟಿಸ್ ಹೊರಡಿಸಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಶಂಕಿತ ಉಗ್ರರಿಗೆ ಪಿಸ್ತೂಲ್ ಸಪ್ಲೈ ಮಾಡಿದ್ದವನ ಜಾಡು ಪತ್ತೆ ಹಚ್ಚಿದ ಸಿಸಿಬಿ

ಜುನೇದ್​ನನ್ನು ಎನ್ಐಎ ಮತ್ತು ಸಿಬಿಐ ಇಂಟರ್ ಪೋಲ್ ಮೂಲಕ ವಶಕ್ಕೆ ಪಡೆಯಲು ತಯಾರಿ ನಡೆಸಿದೆ. ಎನ್ಐಎ ಇನ್ನೂ ಕೆಲವೇ ದಿನಗಳಲ್ಲಿ ಐವರು ಶಂಕಿತರನ್ನ ವಿಚಾರಣೆಗೆ ಒಳಪಡಿಸಿ ಮಾಹಿತಿ ಕಲೆ ಹಾಕಲಿದೆ. ಎನ್ಐಎ ಅಧಿಕಾರಿಗಳು ನ್ಯಾಯಾಲಯದ ಅನುಮತಿ ಪಡೆದು ಜೈಲಿನಲ್ಲಿ ಅಥವಾ ಬಾಡಿ ವಾರೆಂಟ್ ಮೇಲೆ ವಶಕ್ಕೆ ಪಡೆಯಲಿದ್ದಾರೆ.

ಸುಲ್ತಾನ್‌ಪಾಳ್ಯದ ಮನೆಯೊಂದರ ಮೇಲೆ ಜುಲೈ 1ರಂದು ದಾಳಿ ಮಾಡಿದ್ದ ಸಿಸಿಬಿ ಪೊಲೀಸರು, ಶಂಕಿತರಾದ ಸೈಯದ್ ಸುಹೇಲ್ ಖಾನ್, ಜಾಹೀದ್‌ ತಬ್ರೇಜ್, ಸೈಯದ್‌ ಮುದಾಸೀರ್ ಪಾಷಾ, ಮಹಮ್ಮದ್ ಫೈಜಲ್ ರಬ್ಬಾನಿ, ಹಾಗೂ ಮೊಹಮ್ಮದ್‌ ಉಮರ್‌ನನ್ನು ಬಂಧಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ