ಸದ್ಯಕ್ಕೆ ನೈಟ್, ವೀಕೆಂಡ್ ಕರ್ಫ್ಯೂ ಇಲ್ಲ; ವಾರದ ಬಳಿಕ ಕ್ರಿಸ್‌ಮಸ್, ಹೊಸ ವರ್ಷಾಚರಣೆ ಬಗ್ಗೆ ನಿರ್ಧಾರ- ಸಿಎಂ ಬೊಮ್ಮಾಯಿ

| Updated By: sandhya thejappa

Updated on: Jan 10, 2022 | 12:05 PM

ಇಂದು ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆದಿದೆ. ಸಭೆ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇರಳ ವಿದ್ಯಾರ್ಥಿಗಳು ಹಾಗೂ ಗಡಿಭಾಗದಲ್ಲಿ ಬರುವವರಿಗೆ ಟೆಸ್ಟಿಂಗ್ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.

ಸದ್ಯಕ್ಕೆ ನೈಟ್, ವೀಕೆಂಡ್ ಕರ್ಫ್ಯೂ ಇಲ್ಲ; ವಾರದ ಬಳಿಕ ಕ್ರಿಸ್‌ಮಸ್, ಹೊಸ ವರ್ಷಾಚರಣೆ ಬಗ್ಗೆ ನಿರ್ಧಾರ- ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
Follow us on

ಸದ್ಯ ರಾಜ್ಯದಲ್ಲಿ ಕೊರೊನಾ (Coronavirus) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು (ಡಿಸೆಂಬರ್ 9) ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆದಿದೆ. ಸಭೆ ನಡೆಸಿ ಮಾತನಾಡಿದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇರಳ ವಿದ್ಯಾರ್ಥಿಗಳು ಹಾಗೂ ಗಡಿಭಾಗದಲ್ಲಿ ಬರುವವರಿಗೆ ಟೆಸ್ಟಿಂಗ್ ಮುಂದುವರಿಯುತ್ತದೆ. ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಬಗ್ಗೆ ಮುಂದಿನ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಮಾಡಲಾಗುತ್ತದೆ ಅಂತ ತಿಳಿಸಿದ್ದಾರೆ. 

ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಬಗ್ಗೆ ನಿರ್ಧರಿಸಿಲ್ಲ. ಇನ್ನೊಂದು ವಾರದ ಬೆಳವಣಿಗೆ ಅವಲೋಕಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು
ಬೆಂಗಳೂರಿನಲ್ಲಿ ತಿಳಿಸಿದ ಸಿಎಂ ಬಸವರಾಜ ಬೊಮ್ಮಾಯಿ, ವಾರದ ಬಳಿಕ ಕ್ರಿಸ್‌ಮಸ್, ಹೊಸ ವರ್ಷಾಚರಣೆ ಬಗ್ಗೆ ನಿರ್ಧಾರ ಮಾಡಲಾಗುವುದು. ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಮುಂದುವರಿಯುತ್ತೆ. ಮೂವರಿಗೆ ಕೊರೊನಾ ಪಾಸಿಟಿವ್ ಬಂದರೆ ಕ್ಲಸ್ಟರ್ ಮಾಡುತ್ತೇವೆ.  ಸದ್ಯಕ್ಕೆ ಹೊಸದಾಗಿ ಯಾವುದೇ ನಿರ್ಬಂಧ ವಿಧಿಸಿಲ್ಲ ಅಂತ ಸ್ಪಷ್ಟಪಡಿಸಿದ್ದಾರೆ.

ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ
ಸಚಿವ ಸಂಪುಟ ಸಭೆ ಬಳಿಕ ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥ ಡಾ.ಎಂಕೆ ಸುದರ್ಶನ್ ಎಚ್ಚರಿಕೆ ನೀಡಿದ್ದಾರೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿದ್ದರೆ ಕಷ್ಟ. ಮುಂದೆ ನೈಟ್ ಕರ್ಫ್ಯೂ ಹಾಗು ಲಾಕ್​ಡೌನ್ ಮಾಡಬಾರದು ಎಂದರೆ ಈಗಲೇ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ಸಮಾರಂಭಗಳು, ಜನ ಸೇರುವ ಕಾರ್ಯಕ್ರಮಗಳು, ಜಾತ್ರೆಗಳು, ಮದುವೆಗಳಿಗೆ ಜಸ ಸೇರುವುದಕ್ಕೆ ಬ್ರೇಕ್ ಹಾಕಬೇಕು. ಹೊಸ ವರ್ಷಾಚರಣೆಗೆ ಅವಕಾಶ ನೀಡಬಾರದು. ಪ್ರತಿಭಟನೆಗಳಿಗೆ ಅವಕಾಶ ಬೇಡ. ಚುನಾವಣಾ ಫಲಿತಾಂಶದ ಸಂಭ್ರಾಮಚರಣೆ ಬೇಡ. ಇದಕ್ಕೆ ಸಿಎಂ ಬಹುತೇಕ ಒಪ್ಪಿಗೆ ಸೂಚಿಸಿದ್ದಾರೆ ಅಂತ ಡಾ.ಎಂಕೆ ಸುದರ್ಶನ್ ತಿಳಿಸಿದ್ದಾರೆ.

ನೈಟ್ ಕರ್ಫ್ಯೂ, ಲಾಕ್‌ಡೌನ್ ಮಾಡದೆ ಗೈಡ್‌ಲೈನ್ಸ್?
ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಪರಿಶೀಲಿಸಿ ಸರ್ಕಾರ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತದೆ. ನಾಳೆ ಅಥವಾ ನಾಡಿದ್ದು ಸರ್ಕಾರಕ್ಕೆ ಸಮಿತಿ ಶಿಫಾರಸು ಮಾಡುತ್ತದೆ. ಬಹುತೇಕ ಸಭೆ, ಸಮಾರಂಭ, ಮೆರವಣಿಗೆ, ಕಾರ್ಯಕ್ರಮಗಳು, ಹೊಸ ವರ್ಷಾಚರಣೆಗೂ ಈ ಬಾರಿ ಬ್ರೇಕ್ ಬೀಳುವ ಸಾಧ್ಯತೆಯಿದೆ. ನೈಟ್ ಕರ್ಫ್ಯೂ, ಲಾಕ್‌ಡೌನ್ ಮಾಡದೆ ಗೈಡ್‌ಲೈನ್ಸ್ ಬಿಡುಗಡೆ ಮಾಡುವ ಸಾಧ್ಯತೆ ಹೆಚ್ಚಿದೆ.

ಇನ್ನು ಇಂದು ನಡೆದ ಸಭೆಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಗೈರಾಗಿದ್ದರು. ಸುಧಾಕರ್ ಜೊತೆ ಸಚಿವ ನಾರಾಯಣಗೌಡ, ಸಚಿವ ಸುನಿಲ್ ಕುಮಾರ್ ಸೇರಿ ಪ್ರಮುಖರು ಗೈರಾಗಿದ್ದರು.

ಇದನ್ನೂ ಓದಿ

General Bipin Rawat Chopper Crash ಮೃತದೇಹಗಳನ್ನು ಇಂದು ಸಂಜೆ ದೆಹಲಿಗೆ ತರಲಾಗುವುದು: ರಾಜನಾಥ್ ಸಿಂಗ್

Army Chopper Crash: ಜನರಲ್‌ ಬಿಪಿನ್ ರಾವತ್ ನನಗೆ ನೀರು ಕೇಳಿದ್ದರು -ಪ್ರತ್ಯಕ್ಷದರ್ಶಿ

Published On - 12:35 pm, Thu, 9 December 21