Bengaluru: ಬೆಂಗಳೂರಿನಲ್ಲಿ ಆಗಸ್ಟ್ 30ರ ವರೆಗೆ ನೈಟ್ ಕರ್ಫ್ಯೂ ವಿಸ್ತರಣೆ: ಕಮಲ್ ಪಂತ್ ಆದೇಶ

Bengaluru Night Curfew: ನೈಟ್‌ ಕರ್ಫ್ಯೂ ವಿಸ್ತರಿಸಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯ ವರೆಗೆ ನೈಟ್‌ ಕರ್ಫ್ಯೂ ಜಾರಿಯಲ್ಲಿ ಇರಲಿದೆ.

Bengaluru: ಬೆಂಗಳೂರಿನಲ್ಲಿ ಆಗಸ್ಟ್ 30ರ ವರೆಗೆ ನೈಟ್ ಕರ್ಫ್ಯೂ ವಿಸ್ತರಣೆ: ಕಮಲ್ ಪಂತ್ ಆದೇಶ
ಕೊರೊನಾ ಕರ್ಫ್ಯೂ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: ganapathi bhat

Updated on:Aug 17, 2021 | 8:08 PM

ಬೆಂಗಳೂರು: ನಗರದಲ್ಲಿ ಆಗಸ್ಟ್ 30 ರ ವರೆಗೆ ನೈಟ್‌ ಕರ್ಫ್ಯೂ ವಿಸ್ತರಿಸಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಇಂದು (ಆಗಸ್ಟ್ 17) ಆದೇಶ ಹೊರಡಿಸಿದ್ದಾರೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯ ವರೆಗೆ ನೈಟ್‌ ಕರ್ಫ್ಯೂ ಜಾರಿಯಲ್ಲಿ ಇರಲಿದೆ. ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಾದಂತ ರಾತ್ರಿ ಕರ್ಫ್ಯೂ ನಿರ್ಬಂಧ ವಿಧಿಸಲಾಗಿತ್ತು. ಜೊತೆಗೆ, ಗಡಿಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಹಾಕಲಾಗಿತ್ತು. ನೈಟ್ ಕರ್ಫ್ಯೂ ವಿಧಿಸಿರುವುದರಿಂದ ಮೆಟ್ರೋ ಸಂಚಾರ ಅವಧಿಯಲ್ಲಿ ಬದಲಾವಣೆ ಮಾಡಲಾಗಿತ್ತು. ಇದೀಗ, ರಾತ್ರಿ ಕರ್ಫ್ಯೂ ಆದೇಶವನ್ನು ಈ ತಿಂಗಳ ಅಂತ್ಯದ ವರೆಗೆ ಮುಂದುವರಿಸಿ ಆದೇಶ ಹೊರಡಿಸಲಾಗಿದೆ. ಹಾಗಾಗಿ, ಬಹುತೇಕ ಈಗಿರುವ ನಿಯಮಗಳು ಇನ್ನೂ ಹದಿನೈದು ದಿನಗಳ ಕಾಲ ಬೆಂಗಳೂರಿನಲ್ಲಿ ಮುಂದುವರಿಯಲಿದೆ.

ರಾತ್ರಿ 9ರಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ ಹಿನ್ನೆಲೆಯಲ್ಲಿ, ಮೆಟ್ರೋ ಕೊನೆಯ ರೈಲು ರಾತ್ರಿ 9 ಗಂಟೆ ಬದಲಾಗಿ 8 ಗಂಟೆಗೆ ಸಂಚರಿಸಲಿದೆ. ಮೆಟ್ರೋ ಕೊನೆಯ ರೈಲು ರಾತ್ರಿ 8 ಗಂಟೆಗೆ ಹೊರಡಲಿದೆ. ಆ ಬಳಿಕ, ಮೆಟ್ರೋ ರೈಲು ಸೇವೆ ಇರುವುದಿಲ್ಲ ಎಂದು ತಿಳಿಸಲಾಗಿತ್ತು. ಕೊನೆಯ ಮೆಟ್ರೋ ರೈಲು ಟರ್ಮಿನಲ್ ನಿಲ್ದಾಣಗಳಿಂದ ರಾತ್ರಿ 9 ಗಂಟೆಯ ಬದಲು ರಾತ್ರಿ 8 ಗಂಟೆಗೆ ಹೊರಡುತ್ತದೆ. ಈ ಬದಲಾವಣೆಯನ್ನು ಆಗಸ್ಟ್ 7 ರಿಂದ ಜಾರಿಗೊಳಿಸಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಮಾಧ್ಯಮ ಪ್ರಕಟಣೆಯಲ್ಲಿ ಹೇಳಿತ್ತು.

ಕೊರೊನಾ ಟೆಸ್ಟ್ ಪ್ರಮಾಣ ಹೆಚ್ಚಳ ನಗರದಲ್ಲಿ ಹೆಚ್ಚು ಮಕ್ಕಳಿಗೆ ಕೊವಿಡ್ ಟೆಸ್ಟ್ ಮಾಡುತ್ತೇವೆ. ಯಾರಿಗಾದ್ರೂ ಸೋಂಕು ದೃಢಪಟ್ಟರೆ ಅವರ ಮಕ್ಕಳಿಗೆ ಟೆಸ್ಟ್​ ಮಾಡಿಸುತ್ತೇವೆ. ಕೊವಿಡ್ ಟೆಸ್ಟ್ ಪ್ರಮಾಣ​ ಶೇಕಡಾ 50 ರಷ್ಟು ಹೆಚ್ಚಿಸುತ್ತೇವೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಇಂದು (ಆಗಸ್ಟ್ 17) ಹೇಳಿಕೆ ನೀಡಿದ್ದಾರೆ. ರಾತ್ರಿ 9 ಗಂಟೆಯೊಳಗೆ ಅಂಗಡಿ ಮುಂಗಟ್ಟು ಮುಚ್ಚಬೇಕು. ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಹೀಗಾಗಿ, ರಾತ್ರಿ 9 ಗಂಟೆ ನಂತರ ಶಾಪ್ ತೆರೆದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಹಬ್ಬ ಹರಿದಿನ ಬರುತ್ತಿರುವ ಹಿನ್ನೆಲೆಯಲ್ಲಿ ಟೆಸ್ಟ್ ಹೆಚ್ಚಿಸ್ತೇವೆ. ಮಹದೇವಪುರ, ಬೊಮ್ಮನಹಳ್ಳಿ ಪ್ರದೇಶದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ. ನಿರೀಕ್ಷಿಸಿದಷ್ಟು ಪ್ರಮಾಣದಲ್ಲಿ ಬಿಬಿಎಂಪಿಗೆ ಲಸಿಕೆ ಸಿಗುತ್ತಿಲ್ಲ. ಪ್ರತಿದಿನ 30 ಸಾವಿರ ಜನರಿಗೆ ನೀಡುವಷ್ಟು ಲಸಿಕೆ ಸಿಗುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇಕಡಾ 70ರಷ್ಟು ಜನ ಲಸಿಕೆ ಪಡೆದಿದ್ದಾರೆ. ಸೆಕೆಂಡ್​ ಡೋಸ್ ಪಡೆಯುತ್ತಿರುವವರ ಸಂಖ್ಯೆ ಕ್ರಮೇಣ ಜಾಸ್ತಿಯಿದೆ. ಹೀಗಾಗಿ ಕೇಂದ್ರಕ್ಕೆ ಹೆಚ್ಚಿನ ಲಸಿಕೆಗಾಗಿ ಮನವಿ ಮಾಡಿದ್ದೇವೆ. ಬೆಂಗಳೂರಿಗೆ ದಿನಕ್ಕೆ 1 ಲಕ್ಷ ಲಸಿಕೆ ಬೇಕೆಂದು ತಿಳಿಸಿದ್ದೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.

ಇದನ್ನೂ ಓದಿ: Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,298 ಜನರಿಗೆ ಕೊರೊನಾ ದೃಢ; 32 ಮಂದಿ ಸಾವು

ದೇಶದಲ್ಲಿ 154 ದಿನಗಳಲ್ಲೇ ಅತಿ ಕಡಿಮೆ ಕೊರೊನಾ ಕೇಸ್​ಗಳು ದಾಖಲು; ಚೇತರಿಕೆ ಪ್ರಮಾಣದಲ್ಲೂ ಏರಿಕೆ

(Night Curfew in Bengaluru extended till August 30 orders Police Commissioner Kamal Pant)

Published On - 7:52 pm, Tue, 17 August 21

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ