ಪ್ರಯಾಣಿಕರಿಗೆ ಗುಡ್​ನ್ಯೂಸ್: ಬಿಎಂಟಿಸಿ ಬಸ್​​ನಲ್ಲಿ ರಾತ್ರಿ ಪ್ರಯಾಣದ ಹೆಚ್ಚುವರಿ ಟಿಕೆಟ್​ ಶುಲ್ಕ ರದ್ದು

ಸೆಪ್ಟೆಂಬರ್​ 25ಕ್ಕೆ ಬಿಎಂಟಿಸಿ ಆರಂಭವಾಗಿ 25 ವರ್ಷ ಪೂರೈಸಲಿದೆ. ಈ ರಜತ ಮಹೋತ್ಸವ ದಿನದಂದೇ ‘ನಮ್ಮ ಬಿಎಂಟಿಸಿ’ ಬಸ್ ಟ್ರ್ಯಾಕಿಂಗ್ ಮೊಬೈಲ್​ ಆ್ಯಪ್ ಅನ್ನು ಬಿಡುಗಡೆ ಮಾಡಲಾಗುವುದು ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಪ್ರಯಾಣಿಕರಿಗೆ ಗುಡ್​ನ್ಯೂಸ್: ಬಿಎಂಟಿಸಿ ಬಸ್​​ನಲ್ಲಿ ರಾತ್ರಿ ಪ್ರಯಾಣದ ಹೆಚ್ಚುವರಿ ಟಿಕೆಟ್​ ಶುಲ್ಕ ರದ್ದು
ಬಿಎಂಟಿಸಿ
Follow us
TV9 Web
| Updated By: ವಿವೇಕ ಬಿರಾದಾರ

Updated on: Sep 06, 2023 | 8:05 AM

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ಪ್ರಯಾಣಿಸುವ ಪ್ರಾಯಣಿಕರಿಗೆ ಸಾಮಾನ್ಯ ದರಕ್ಕಿಂತ 1.5 ಪಟ್ಟು ಹೆಚ್ಚು ಹಣ ಪಡೆಯುತ್ತಿತ್ತು. ಆದರೆ ಶೀಘ್ರದಲ್ಲೇ ಇದನ್ನು ರದ್ದುಪಡಿಸಲಾಗುವುದು ಎಂದು ಸಾರಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಹೇಳಿದರು. ಇನ್ನು ಸೆಪ್ಟೆಂಬರ್​ 25ಕ್ಕೆ ಬಿಎಂಟಿಸಿ ಆರಂಭವಾಗಿ 25 ವರ್ಷ ಪೂರೈಸಲಿದೆ. ಈ ರಜತ ಮಹೋತ್ಸವ ದಿನದಂದೇ ‘ನಮ್ಮ ಬಿಎಂಟಿಸಿ (Namma BMTC)’ ಬಸ್ ಟ್ರ್ಯಾಕಿಂಗ್ ಮೊಬೈಲ್​ ಆ್ಯಪ್ ಅನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಸೋಮವಾರ ನಗರದ ಕಲಾಸಿಪಾಳ್ಯ ಬಸ್ ನಿಲ್ದಾಣವನ್ನು ಪರಿಶೀಲಿಸಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮತನಾಡಿದ ಅವರು ಈ ಆ್ಯಪ್ ಮೂಲಕ ಪ್ರಯಾಣಿಕರು ಬಿಎಂಟಿಸಿ ಬಸ್‌ಗಳನ್ನು ಟ್ರ್ಯಾಕ್ ಮಾಡಬಹುದಾಗಿದೆ. ಮತ್ತು ಈ ಆ್ಯಪ್​ನಲ್ಲಿ ಪ್ರಯಾಣದ ಟಿಕೆಟ್​ ಕೂಡ ಕೊಂಡುಕೊಳ್ಳಬಹುದಾಗಿದೆ ಎಂದರು.

ಇದನ್ನೂ ಓದಿ: ಬೆಂಗಳೂರು: ಡಬಲ್ ಡೆಕ್ಕರ್​ ಬಸ್​​ಗೆ ಶೀಘ್ರ ಟೆಂಡರ್ ಕರೆಯಲಿದೆ ಬಿಎಂಟಿಸಿ, ವರ್ಷಾಂತ್ಯ ರಸ್ತೆಗಿಳಿಯಲಿವೆ ಬಸ್​ಗಳು

“ಈ ಆ್ಯಪ್​ ಅನ್ನು ಆ್ಯಪ್ ಅನ್ನು 2022 ರ ಡಿಸೆಂಬರ್​​ನಲ್ಲಿ ಮತ್ತು ನಂತರ 2023 ರ ಜನವರಿ ಮತ್ತು ಮಾರ್ಚ್​ನಲ್ಲಿ ಪ್ರಾರಂಭಿಸಲು ನಿರೀಕ್ಷಿಸಲಾಗಿತ್ತು. ಆದರೆ ತಾಂತ್ರಿಕ ದೋಷಗಳು ಮತ್ತು ಇತರ ಸಮಸ್ಯೆಗಳನ್ನು ಸರಿಪಡಿಸಿ ಅನಾವರಣಗೊಳಿಸಲು ವಿಳಂಬವಾಯಿತು.”

ಇತ್ತೀಚಿಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKSRTC) ಬಸ್​ಗಳಲ್ಲಿ ಯುಪಿಐ ಮೂಲಕ ಟಿಕೆಟ್​ ಕೊಂಡುಕೊಳ್ಳುವ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಪರಿಚಯಿಸಲಾಗಿದೆ. ಇದು ಯಶಸ್ವಿಯಾದರೇ ಬಿಎಂಟಿಸಿ ಮತ್ತು ಕೆಎಸ್​ಆರ್​ಟಿಸಿ ಬಸ್​​ಗಳಲ್ಲೂ ಪರಿಚಯಿಸಲಾಗುವುದು ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ