ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿಯಾದ ನಿಖಿಲ್ ಕುಮಾರಸ್ವಾಮಿ, ಮೈತ್ರಿ ವಿಚಾರವಾಗಿ ಚರ್ಚೆ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಜೆಡಿಎಸ್ ಪಕ್ಷದ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ಮಾಡಿ ಬಿಜೆಪಿ ಜೊತೆಗಿನ ಮೈತ್ರಿ ವಿಚಾರವಾಗಿ ಚರ್ಚೆ ನಡೆಸಿದ್ದಾರೆ. ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳ ಬಗ್ಗೆ ನಿಖಿಲ್ ಕುಮಾರಸ್ವಾಮಿ ಅವರಿಗೆ ಯೋಗಿ ಆದಿತ್ಯನಾಥ್ ಅವರು ಪಾಠ ಮಾಡಿದ್ದಾರೆ.
ಬೆಂಗಳೂರು, ಅ.28: ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ರಾಜಕೀಯದಲ್ಲಿ ಆ್ಯಕ್ಟಿವ್ ಆಗಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರನ್ನು ಜೆಡಿಎಸ್ ಪಕ್ಷದ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ಮಾಡಿ ಬಿಜೆಪಿ ಜೊತೆಗಿನ ಮೈತ್ರಿ ವಿಚಾರವಾಗಿ ಚರ್ಚೆ ನಡೆಸಿದ್ದಾರೆ. ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳ ಬಗ್ಗೆ ನಿಖಿಲ್ ಕುಮಾರಸ್ವಾಮಿ ಅವರಿಗೆ ಯೋಗಿ ಆದಿತ್ಯನಾಥ್ ಅವರು ಪಾಠ ಮಾಡಿದ್ದಾರೆ. ಭೇಟಿ ವೇಳೆ ನಿಖಿಲ್, ಯೋಗಿಗೆ ರಾಮ, ಲಕ್ಷ್ಮಣ, ಸೀತೆ ವಿಗ್ರಹ ಗಿಫ್ಟ್ ಮಾಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ನಿಖಿಲ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೀ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆಗಿರುವ ಜೆಡಿಎಸ್ – ಬಿಜೆಪಿ ಮೈತ್ರಿಯ ಬಗ್ಗೆ ಅವರೊಂದಿಗೆ ಚರ್ಚಿಸಲಾಯಿತು. ಇದು ಅತ್ಯಂತ ಉತ್ತಮ ಬೆಳವಣಿಗೆ ಎಂದು ಅವರು ಸಂತಸ ವ್ಯಕ್ತಪಡಿಸಿದರು. ಇದೇ ವೇಳೆ ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳನ್ನು ಅವರು ಹಂಚಿಕೊಂಡರು. ಅವರು ಅತ್ಯಂತ ಪ್ರೀತಿ, ವಾತ್ಸಲ್ಯದಿಂದ ನನ್ನನ್ನು ಬರಮಾಡಿಕೊಂಡು ಆಶೀರ್ವದಿಸಿದರು. ಪ್ರೀತಿಯಿಂದ ಸತ್ಕರಿಸಿದ ನಿಮಗೆ ಧನ್ಯವಾದಗಳು ಯೋಗಿ ಜೀ… ಎಂದು ನಿಖಿಲ್ ಫೋಸ್ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ಮಾಜಿ ಸಿಎಂ ಅಖಿಲೇಶ್ ಯಾದವ್ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ: ಲೋಕಸಭೆ ಚುನಾವಣೆ ಬಗ್ಗೆ ಸುದೀರ್ಘ ಚರ್ಚೆ
ಕಳೆದ ತಿಂಗಳು ದೆಹಲಿಯಲ್ಲಿ ನಡೆದ ಅಮಿತ್ ಶಾ, ಜೆಪಿ ನಡ್ಡಾ ಮತ್ತು ಹೆಚ್ಡಿ ಕುಮಾರಸ್ವಾಮಿ ಸಭೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಈ ವೇಳೆ ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡುವ ಅವಕಾಶ ನಿಖಿಲ್ ಕುಮಾರಸ್ವಾಮಿಗೆ ಸಿಕ್ಕಿತ್ತು. ಆದರೆ ದೆಹಲಿಗೆ ಸಿ.ಎಂ. ಇಬ್ರಾಹಿಂ ಅವರನ್ನು ಬಿಟ್ಟು ಹೋದದ್ದು, ಮೈತ್ರಿ ಮಾಡಿಕೊಂಡದ್ದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.
ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ