ಬೆಂಗಳೂರು: ರಾತ್ರಿಪಾಳಿಗೆ ವಾಹನ ವ್ಯವಸ್ಥೆ ಮಾಡಲು ಕೇಳಿದ್ದಕ್ಕೆ ನಿಮ್ಹಾನ್ಸ್ ಆಸ್ಪತ್ರೆ ಪೌರಕಾರ್ಮಿಕರನ್ನು ವಜಾ ಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆ ಬಳಿ ಪೌರಕಾರ್ಮಿಕರು ಧರಣಿ ನಡೆಸಿದ್ದಾರೆ. ಪೌರಕಾರ್ಮಿಕರು ಕಳೆದ 2 ತಿಂಗಳಿನಿಂದ ಧರಣಿ ನಡೆಸುತ್ತಿದ್ದಾರೆ. 19 ಪೌರಕಾರ್ಮಿಕರ ವಜಾಗೊಳಿಸಿದ ಕ್ರಮ ಪ್ರಶ್ನಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಸಂಬಂಧ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಶಿವಣ್ಣ ಭೇಟಿ ನೀಡಿದ್ದಾರೆ. ನೊಂದ ಪೌರಕಾರ್ಮಿಕರ ಅಹವಾಲು ಆಲಿಸಿದ್ದಾರೆ.
ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪೌರಕಾರ್ಮಿಕರಿಗೆ ಆಗಿರುವ ಅನ್ಯಾಯದ ವಿರುದ್ಧ ಕಿಡಿಕಾರಿದ್ದಾರೆ. ನಿಮ್ಹಾನ್ಸ್ ಆಸ್ಪತ್ರೆ ನಿರ್ದೇಶಕಿಯನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ವಜಾಗೊಂಡ ಕಾರ್ಮಿಕರಿಗೆ ನ್ಯಾಯ ನೀಡುವಂತೆ ಆಗ್ರಹಿಸಿದ್ದಾರೆ.
ನಿಮ್ಹಾನ್ಸ್ ಸಿಬ್ಬಂದಿ ಪ್ರತಿಭಟನೆ
ನಗರದ ನಿಮ್ಹಾನ್ಸ್ ಆಸ್ಪತ್ರೆ ಗುತ್ತಿಗೆ ಸಿಬ್ಬಂದಿಯಿಂದ ಕೆಲಸದ ಸಮಯದ ವಿಚಾರವಾಗಿ ಈ ಹಿಂದೆಯೂ ಪ್ರತಿಭಟನೆ ನಡೆದಿತ್ತು. ಮಹಿಳಾ ಸಿಬ್ಬಂದಿ ಸಂಜೆ 7.30ರ ಒಳಗೆ ಶಿಫ್ಟ್ ಮುಗಿಸುವಂತೆ ಮನವಿ ಮಾಡಿದ್ದರು. ಆದರೆ, ಗುತ್ತಿಗೆ ಸಿಬ್ಬಂದಿ ಮನವಿಗೆ ಆಡಳಿತ ಮಂಡಳಿ ಸೂಕ್ತ ರೀತಿಯಲ್ಲಿ ಸ್ಪಂದಿಸಿಲ್ಲ. ಹೀಗಾಗಿ, ಸಿಬ್ಬಂದಿ ಧರಣಿ ನಡೆಸಿದ್ದರು. ಈ ವಿಚಾರವಾಗಿ ಕಳೆದ ಕೆಲವು ಸಮಯದಿಂದ ಗುತ್ತಿಗೆ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದರು. ಆದರೂ ಸಂಸ್ಥೆ ಡೋಂಟ್‌ಕೇರ್ ಎಂಬಂತೆ ವರ್ತಿಸುತ್ತಿದೆ ಎಂದು ತಿಳಿದುಬಂದಿತ್ತು.
ರೇಡಿಯಾಲಜಿ ವಿಭಾಗದಲ್ಲಿ ಹೌಸ್ ಕೀಪಿಂಗ್ ಹಾಗೂ ಸಹಾಯಕ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಅವರು ಕೆಲಸದ ಟೈಮಿಂಗ್ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿದ್ದರು. ವಿಭಾಗದ ಬಹುತೇಕ ಸಿಬ್ಬಂದಿ ಹೆಣ್ಣು ಮಕ್ಕಳು ಆಗಿರುವ ಕಾರಣದಿಂದ ರಾತ್ರಿ ವೇಳೆ ಕೆಲಸ ಮಾಡುವುದು ತೊಂದರೆ ಆಗುತ್ತಿದೆ. ಹೀಗಾಗಿ ಸಂಜೆ 7.30 ಒಳಗೆ ಕೆಲಸ ಮುಗಿಸಲು ಅವರು ಬೇಡಿಕೆ ಇಟ್ಟಿದ್ದರು.
ಇದನ್ನೂ ಓದಿ: ನಿಮ್ಹಾನ್ಸ್ ಆಸ್ಪತ್ರೆ ಗುತ್ತಿಗೆ ಸಿಬ್ಬಂದಿಯಿಂದ ಕೆಲಸದ ಸಮಯದ ವಿಚಾರವಾಗಿ ಪ್ರತಿಭಟನೆ; ಸ್ಪಂದಿಸದ ಆಸ್ಪತ್ರೆ ಆಡಳಿತ
ಇದನ್ನೂ ಓದಿ: ಜಯನಗರದಲ್ಲಿ ನಾಯಿ ಮೇಲೆ ಫೈರಿಂಗ್ ನಿಮ್ಹಾನ್ಸ್ ಪ್ರೊಫೆಸರ್ ಅರೆಸ್ಟ್!