AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಹಾನ್ಸ್ ಆಸ್ಪತ್ರೆ ಗುತ್ತಿಗೆ ಸಿಬ್ಬಂದಿಯಿಂದ ಕೆಲಸದ ಸಮಯದ ವಿಚಾರವಾಗಿ ಪ್ರತಿಭಟನೆ; ಸ್ಪಂದಿಸದ ಆಸ್ಪತ್ರೆ ಆಡಳಿತ

Nimhans Bengaluru: ವಿಭಾಗದ ಬಹುತೇಕ ಸಿಬ್ಬಂದಿ ಹೆಣ್ಣು ಮಕ್ಕಳು ಆಗಿರುವ ಕಾರಣದಿಂದ ರಾತ್ರಿ ವೇಳೆ ಕೆಲಸ ಮಾಡುವುದು ತೊಂದರೆ ಆಗುತ್ತಿದೆ. ಹೀಗಾಗಿ ಸಂಜೆ 7.30 ಒಳಗೆ ಕೆಲಸ ಮುಗಿಸಲು ಅವರು ಬೇಡಿಕೆ ಇಟ್ಟಿದ್ದಾರೆ.

ನಿಮ್ಹಾನ್ಸ್ ಆಸ್ಪತ್ರೆ ಗುತ್ತಿಗೆ ಸಿಬ್ಬಂದಿಯಿಂದ ಕೆಲಸದ ಸಮಯದ ವಿಚಾರವಾಗಿ ಪ್ರತಿಭಟನೆ; ಸ್ಪಂದಿಸದ ಆಸ್ಪತ್ರೆ ಆಡಳಿತ
ನಿಮ್ಹಾನ್ಸ್ ಸಿಬ್ಬಂದಿ ಪ್ರತಿಭಟನೆ (ಸಂಗ್ರಹ ಚಿತ್ರ)
TV9 Web
| Updated By: ganapathi bhat|

Updated on: Aug 06, 2021 | 11:28 PM

Share

ಬೆಂಗಳೂರು: ನಗರದ ನಿಮ್ಹಾನ್ಸ್ ಆಸ್ಪತ್ರೆ ಗುತ್ತಿಗೆ ಸಿಬ್ಬಂದಿಯಿಂದ ಕೆಲಸದ ಸಮಯದ ವಿಚಾರವಾಗಿ ಪ್ರತಿಭಟನೆ ನಡೆದಿದೆ. ಮಹಿಳಾ ಸಿಬ್ಬಂದಿ ಸಂಜೆ 7.30ರ ಒಳಗೆ ಶಿಫ್ಟ್ ಮುಗಿಸುವಂತೆ ಮನವಿ ಮಾಡಿದ್ದರು. ಆದರೆ, ಗುತ್ತಿಗೆ ಸಿಬ್ಬಂದಿ ಮನವಿಗೆ ಆಡಳಿತ ಮಂಡಳಿ ಸೂಕ್ತ ರೀತಿಯಲ್ಲಿ ಸ್ಪಂದಿಸಿಲ್ಲ. ಹೀಗಾಗಿ, ಸಿಬ್ಬಂದಿ ಧರಣಿ ನಡೆಸಿದ್ದಾರೆ. ಈ ವಿಚಾರವಾಗಿ ಕಳೆದ ಒಂದು ತಿಂಗಳಿಂದ ಗುತ್ತಿಗೆ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ ಸಂಸ್ಥೆ ಡೋಂಟ್‌ಕೇರ್ ಎಂಬಂತೆ ವರ್ತಿಸುತ್ತಿದೆ ಎಂದು ತಿಳಿದುಬಂದಿದೆ.

ನಿಮ್ಹಾನ್ಸ್ ಆಸ್ಪತ್ರೆಯ ಹೌಸ್ ಕೀಪಿಂಗ್ ಸಿಬ್ಬಂದಿ ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ರೇಡಿಯಾಲಜಿ ವಿಭಾಗದಲ್ಲಿ ಹೌಸ್ ಕೀಪಿಂಗ್ ಹಾಗೂ ಸಹಾಯಕ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಕೆಲಸದ ಟೈಮಿಂಗ್ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ವಿಭಾಗದ ಬಹುತೇಕ ಸಿಬ್ಬಂದಿ ಹೆಣ್ಣು ಮಕ್ಕಳು ಆಗಿರುವ ಕಾರಣದಿಂದ ರಾತ್ರಿ ವೇಳೆ ಕೆಲಸ ಮಾಡುವುದು ತೊಂದರೆ ಆಗುತ್ತಿದೆ. ಹೀಗಾಗಿ ಸಂಜೆ 7.30 ಒಳಗೆ ಕೆಲಸ ಮುಗಿಸಲು ಅವರು ಬೇಡಿಕೆ ಇಟ್ಟಿದ್ದಾರೆ.

ಕೊರೊನಾ, ನೈಟ್ ಕರ್ಫ್ಯೂ ಕಾರಣದಿಂದ ಬಸ್ ವ್ಯವಸ್ಥೆ, ಸಂಚಾರ ವ್ಯವಸ್ಥೆಗೆ ತೊಂದರೆ ಆಗುತ್ತಿದೆ ಎಂದು ಸಿಬ್ಬಂದಿಗಳು ನಿಮ್ಹಾನ್ಸ್ ಆಸ್ಪತ್ರೆಯ ಒಳಗೆ ಬರುವ ರಸ್ತೆಯಲ್ಲಿ ನಿಂತು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ, ನಿಮ್ಹಾನ್ಸ್ ಹಾಸ್ಪಿಟಲ್ ಆಡಳಿತ ಮಂಡಳಿ ಮನವಿಗೆ ಒಪ್ಪಿಲ್ಲ. ಇದರಿಂದಾಗಿ ದಿಕ್ಕುತೋಚದ ಪರಿಸ್ಥಿತಿಯಲ್ಲಿ ನಿಮ್ಹಾನ್ಸ್ ರೇಡಿಯಾಲಜಿ ಸಿಬ್ಬಂದಿಗಳು ಇದ್ದಾರೆ. ಅವರಲ್ಲಿ ಬಹುತೇಕರು ಆಸ್ಪತ್ರೆಯಲ್ಲಿ ಸುಮಾರು ಇಪ್ಪತ್ತು ವರ್ಷಗಳಿಂದ ಸೇವೆ ಮಾಡುತ್ತಿದ್ದವರು ಎಂಬುದು ಮತ್ತೊಂದು ಮಾತು. ಆದರೆ, ಸಿಬ್ಬಂದಿಗಳ ಬೇಡಿಕೆಗೆ ಸ್ಪಂದನೆ ದೊರಕಿಲ್ಲ.

ಇದನ್ನೂ ಓದಿ: Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,805 ಕೊರೊನಾ ಕೇಸ್ ಪತ್ತೆ; 36 ಮಂದಿ ಸಾವು

Covid19 Guidelines: ಇಂದಿನಿಂದಲೇ ನೈಟ್ ಕರ್ಫ್ಯೂ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

(Nimhans Hospital Contract Basis Employees Protest on Working Timings)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ