ಬೆಂಗಳೂರಿನ ಪೀಣ್ಯ ಫ್ಲೈಓವರ್ ಮೇಲೆ‌ ಸರಣಿ ಅಪಘಾತ; 9 ಕಾರುಗಳು ಜಖಂ, ಓರ್ವರಿಗೆ ಗಾಯ

ಸ್ವಿಫ್ಟ್ ಕಾರು ಚಾಲಕ ದಿಢೀರ್ ಬ್ರೇಕ್ ಹಾಕಿದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ವೃದ್ಧೆಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬೆಂಗಳೂರಿನ ಪೀಣ್ಯ ಫ್ಲೈಓವರ್ ಮೇಲೆ‌ ಸರಣಿ ಅಪಘಾತ; 9 ಕಾರುಗಳು ಜಖಂ, ಓರ್ವರಿಗೆ ಗಾಯ
ಸಾಂಕೇತಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Mar 20, 2022 | 7:55 PM

ಬೆಂಗಳೂರು: ನಗರದ ಪೀಣ್ಯ ಫ್ಲೈಓವರ್ ಮೇಲೆ‌ ಸರಣಿ ಅಪಘಾತ ಸಂಭವಿಸಿದೆ. ಸರಣಿ ಅಪಘಾತದಲ್ಲಿ 9 ಕಾರುಗಳು ಜಖಂಗೊಂಡಿವೆ. ಸ್ವಿಫ್ಟ್ ಕಾರು ಚಾಲಕ ದಿಢೀರ್ ಬ್ರೇಕ್ ಹಾಕಿದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ವೃದ್ಧೆಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೆಲ ಕಾಲ ಫ್ಲೈ‌ಓವರ್ ಮೇಲೆ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿದ್ದು ಸಂಚಾರ ದಟ್ಟಣೆ‌ ನಿಯಂತ್ರಣ ಮಾಡಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಪೀಣ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪಾವಗಡ ಬಸ್ ಅಪಘಾತ ಪ್ರಕರಣ: ಜನರಿಗೆ ಬಸ್ ಹತ್ತಬೇಡಿ ಅಂತ ಹೇಳಲಾಗಲ್ಲ ಎಂದು ಉಡಾಫೆ ಉತ್ತರ ನೀಡಿದ ಬಸ್ ನಿರ್ವಾಹಕ ಮುರುಳಿ ತುಮಕೂರು: ಮಾರ್ಚ್ 19ರಂದು ಬೆಳಗ್ಗೆ ತುಮಕೂರಿನಲ್ಲಿ ದೊಡ್ಡ ದುರಂತ ನಡೆದು ಹೋಗಿದೆ. ವೈಎನ್‌ ಹೊಸಕೋಟೆಯಿಂದ ಪಾವಗಡಕ್ಕೆ ಹೊರಟಿದ್ದ ಖಾಸಗಿ ಬಸ್, ಪಳವಳ್ಳಿ ಕಟ್ಟೆ ಬಳಿ ಪಲ್ಟಿಯಾಗಿತ್ತು(Pavagada Bus Accident). ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ಪೋತಗಾನಹಳ್ಳಿ ನಿವಾಸಿ 21 ವರ್ಷದ ಹರ್ಷಿತಾಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿತ್ತು. ಆದ್ರೆ, ಚಿಕಿತ್ಸೆ ಫಲಿಸದೇ ರಾತ್ರಿ ಹರ್ಷಿತಾ ಕೊನೆಯುಸಿರೆಳೆದಿದ್ದಾರೆ. ಸದ್ಯ ಘಟನೆ ಸಂಬಂಧ ಬಸ್ ನಿರ್ವಾಹಕ ಮುರುಳಿ ಮಾತನಾಡಿದ್ದು ಅಪಘಾತದ ಬಗ್ಗೆ ವಿವರಿಸಿದ್ದಾರೆ.

ಬಸ್ ನಿರ್ವಾಹಕ ಮುರುಳಿ ಬೇಜವಾಬ್ದಾರಿ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ಬಸ್ನಲ್ಲಿ 127 ಜನರಿದ್ದರು. ನಾನು ಬಸ್ನ ಟಾಪ್ ಮೇಲಿದ್ದೆ. ಬಸ್ ಡ್ರೈವರ್ ನಿಧಾನವಾಗಿ ಹೋಗುತ್ತಿದ್ದರು. ಬಸ್ ಮೇಲೆ ಇದ್ದರಿಂದ ಯಾಕೆ ಪಲ್ಟಿ ಆಯ್ತು ಅಂತ ಗೊತ್ತಿಲ್ಲ. ಬೇಡ ಅಂತ ಹತ್ತಿದ್ರು ಜನರೇ ಬಸ್ ಹತ್ತಿದ್ದು ಎಂದು ನಿರ್ವಾಹಕ ಮುರುಳಿ ಬೇಜವಾಬ್ದಾರಿ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ಜನರಿಗೆ ಹತ್ತಬೇಡಿ ಅಂತ ಹೇಳಲು ಆಗಲ್ಲ. ನನಗೂ ಗಾಯಗಳಾಗಿವೆ. ನಿನ್ನೆ ಎರಡು ಬಸ್ಗಳು ಬಂದಿರಲಿಲ್ಲ, ಹೀಗಾಗಿ ನಮ್ಮ ಬಸ್ ಫುಲ್ ರಶ್ ಆಗಿದೆ. ನಾನು ಘಟನೆ ನಡೆಯುವಾಗ ಮೇಲೆ ಇದ್ದೆ ಎಂದು ಪಾವಗಡ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖಾಸಗಿ ಬಸ್ ನಿರ್ವಾಹಕ ಮುರುಳಿ ತಿಳಿಸಿದ್ದಾರೆ.

ಇನ್ನು ಮತ್ತೊಂದು ಕಡೆ ಬಸ್ ಸ್ಟೇರಿಂಗ್‌ನ ಬೇರಿಂಗ್ ಕಟ್ ಆದ ಹಿನ್ನೆಲೆ ಅಪಘಾತ ಸಂಭವಿಸಿದೆ ಎಂದು ಪೊಲೀಸರ ವಿಚಾರಣೆ ವೇಳೆ ಬಸ್ ಚಾಲಕ ರಘು ಮಾಹಿತಿ ನೀಡಿದ್ದಾರೆ. ಬಂಧಿತ ಖಾಸಗಿ ಬಸ್ ಚಾಲಕನಿಗೆ ಪಾವಗಡ ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದ್ದು ವೈದ್ಯಕೀಯ ಪರೀಕ್ಷೆ ನಂತರ ಜಡ್ಜ್‌ ಮುಂದೆ ಹಾಜರುಪಡಿಸುವುದಾಗಿ ಪಾವಗಡ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಈ ಹಿಂದೆಯೇ ರಾಜೀವ್ ಗಾಂಧಿ ದೂರದರ್ಶನದ ಮೂಲಕ ರಾಮಾಯಣ, ಮಹಾಭಾರತ ತೋರಿಸಿದ್ದಾರೆ; ಬಿಜೆಪಿಗೆ ಡಿಕೆಶಿ ಟಾಂಗ್

Bengaluru Rain: ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಮಳೆಯಾಗಲಿದೆ

Published On - 6:10 pm, Sun, 20 March 22

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್