AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ನಿಫಾ ವೈರಸ್ ಭೀತಿ: ಅಂತ್ಯಸಂಸ್ಕಾರಕ್ಕೆ ಕೇರಳಕ್ಕೆ ತೆರಳಿದ್ದ ಸ್ನೇಹಿತರಿಂದ ಸೋಂಕು ಹರಡುವ ಆತಂಕ

ಕರ್ನಾಟಕ ರಾಜಧಾನಿ ಬೆಂಗಳೂರು ವೈರಸ್​ಗಳ ಹಬ್ ಆಗುತ್ತಿದೆ. ರಾಜ್ಯ, ದೇಶ, ವಿದೇಶಗಳಲ್ಲಿ ಕಾಣಿಸುವ ಚಿತ್ರವಿಚಿತ್ರ ವೈರಸ್ ಸೋಂಕುಗಳು ರಾಜಧಾನಿಯಲ್ಲಿ ಪತ್ತೆಯಾಗುತ್ತವೆ. ಕೇರಳದ ನಿಫಾ ವೈರಸ್ ಕೂಡ ಇದರಿಂದ ಹೊರತಾಗಿಲ್ಲ. ರಾಜ್ಯದಲ್ಲಿ ನಿಫಾ ವೈರಸ್ ಈವರೆಗೆ ಪತ್ತೆಯಾಗದಿದ್ದರೂ, ನಿಫಾ ಭೀತಿ ಕಾಲಿಟ್ಟಿದೆ. ಇದಕ್ಕೆಲ್ಲ ಕಾರಣ ಮೃತ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಕೇರಳಕ್ಕೆ ತೆರಳಿದ್ದ ಯುವಕರು!

ಬೆಂಗಳೂರಿಗೆ ನಿಫಾ ವೈರಸ್ ಭೀತಿ: ಅಂತ್ಯಸಂಸ್ಕಾರಕ್ಕೆ ಕೇರಳಕ್ಕೆ ತೆರಳಿದ್ದ ಸ್ನೇಹಿತರಿಂದ ಸೋಂಕು ಹರಡುವ ಆತಂಕ
ಸಾಂದರ್ಭಿಕ ಚಿತ್ರImage Credit source: Getty Images
ವಿನಯ್​ ಕಾಶಪ್ಪನವರ್​
| Edited By: |

Updated on: Sep 18, 2024 | 6:48 AM

Share

ಬೆಂಗಳೂರು, ಸೆಪ್ಟೆಂಬರ್ 18: ಕೇರಳದಲ್ಲಿ ನಿಫಾ ವೈರಸ್​ಗೆ 23 ವರ್ಷದ ಯುವಕ ಬಲಿಯಾಗಿದ್ದಾನೆ. ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಸೈಕಾಲಜಿ ಓದುತ್ತಿದ್ದ ಯುವಕ ಕೇರಳದಲ್ಲಿ ನಿಫಾಗೆ ಬಲಿಯಾಗಿದ್ದು, ನಗರಕ್ಕೆ ನಿಫಾ ಟೆನ್ಷನ್ ಕಾಲಿಟ್ಟಿದೆ. ಬೆಂಗಳೂರಿನಿಂದ ಕೇರಳಕ್ಕೆ ತೆರಳಿದ್ದಾಗ ಯುವಕನಿಗೆ ನಿಫಾ ವೈರಸ್ ತಗುಲಿ, ಮೃತಪಟ್ಟಿದ್ದ. ಯುವಕನ ಸಾವಿನ ಬೆನ್ನಲ್ಲೇ ಕೇಂದ್ರ ಸರ್ಕಾರ ಹೈ ಅಲರ್ಟ್ ಆಗಿದೆ. ಕೇರಳ ಹಾಗೂ ವಿಶೇಷವಾಗಿ ಕರ್ನಾಟಕಕ್ಕೆ ಕಟ್ಟೆಚ್ಚರ ವಹಿಸಲು ಎಚ್ಚರಿಕೆ ನೀಡಿದೆ‌. ಈ ಮಧ್ಯೆ ನಿಫಾಗೆ ಬಲಿಯಾದ ಯುವಕನ ಅಂತ್ಯಸಂಸ್ಕಾರಕ್ಕೆ ಕೇರಳಕ್ಕೆ ತೆರಳಿದ್ದ 15 ಸ್ನೇಹಿತರು ಬೆಂಗಳೂರಿಗೆ ಆಪತ್ತು ತಂದಿದ್ದಾರೆ. ಮೃತ ಯುವಕನ ಪ್ರಾಥಮಿಕ ಸಂಪರ್ಕಿತರಾಗಿರುವ ಸ್ನೇಹಿತರ ಟ್ರ್ಯಾಕಿಂಗ್​​ಗೆ ಇಳಿದ ಆರೋಗ್ಯ ಇಲಾಖೆ ನಿಫಾ ಪರೀಕ್ಷೆಗೆ ಒಳಪಡಿಸಿಲಿದೆ.

ಸಪ್ಟೆಂಬರ್ 8 ರಂದು ಕೇರಳದ ಮಲಪ್ಪುರಂನಲ್ಲಿ ನಿಫಾಗೆ ಯುವಕ ಬಲಿಯಾಗಿದ್ದಾನೆ. ಅಂದೇ ಬೆಂಗಳೂರಿನಿಂದ ಆತನ 14 ಸ್ನೇಹಿತರು ಕೇರಳಕ್ಕೆ ಪ್ರಯಾಣ ಬೆಳೆಸಿದ್ದಾರೆ. ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.‌ ಕೇಂದ್ರದ ಸೂಚನೆ ಬೆನ್ನಲ್ಲೇ ಅಲರ್ಟ್ ಆದ ಆರೋಗ್ಯ ಇಲಾಖೆ ಯುವಕರನ್ನು ಟ್ರ್ಯಾಕ್ ಮಾಡಿದೆ.

ಆರೋಗ್ಯ ಇಲಾಖೆ ಹೇಳಿದ್ದೇನು?

ಅಷ್ಟೂ ಜನ ಯುವಕರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಯುವಕರ ರಕ್ತ ಹಾಗೂ ಸೆರಂ ಸ್ಯಾಂಪಲ್ ಲ್ಯಾಬ್​ಗೆ ಕಳುಹಿಸಲಾಗಿದೆ.‌ ಅದರ ವರದಿ ಇನ್ನೆರಡು ದಿನಗಳಲ್ಲಿ ಹೊರಬೀಳುವ ಸಾಧ್ಯತೆ ಇದೆ. ನಿಫಾ ಗುಣಲಕ್ಷಣಗಳ ಬಗ್ಗೆ ಆರೋಗ್ಯ ಇಲಾಖೆ ವಿಶೇಷವಾಗಿ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ ಎಂದು ಇಲಾಖೆಯ ಆಯುಕ್ತ ಶಿವಕುಮಾರ್ ತಿಳಿಸಿದ್ದಾರೆ.

ಕೇರಳದಿಂದ ಬೆಂಗಳೂರಿಗೆ ಬರುವವರ ಮೇಲೆ ನಿಗಾ

ಕೇರಳದಿಂದ ಬೆಂಗಳೂರಿಗೆ ಬರುವವರ ಮೇಲೂ ಹದ್ದಿನ ಕಣ್ಣಿಡಲು ನಿರ್ಧರಿಸಲಾಗಿದೆ. ಅಷ್ಟೇ ಅಲ್ಲ, ನಗರಕ್ಕೆ ಆತಂಕ ತಂದಿರುವ ಸ್ನೇಹಿತರ ಆರೋಗ್ಯದ ಬಗ್ಗೆ ಇಲಾಖೆ ಕಣ್ಣಿಟ್ಟಿದೆ. ಜ್ವರ, ಕೆಮ್ಮು, ತಲೆನೋವು, ವಾಂತಿ, ತಲೆತಿರುಗುವಿಕೆ, ಗಂಟಲು ನೋವು, ಅರೆ ನಿದ್ರಾವಸ್ಥೆ ಲಕ್ಷಣಗಳು ಕಾಣಿಸಿದರೆ ಐಸೊಲೇಷನ್ ಮಾಡಲು‌ ನಿರ್ಧರಿಸಿದೆ.

ಇದನ್ನೂ ಓದಿ: Nipah Virus: ಕೇರಳದಲ್ಲಿ ಮತ್ತೆ ನಿಫಾ ವೈರಸ್ ಭೀತಿ, ಬಾವಲಿಗಳಲ್ಲಿ ವೈರಸ್ ಪತ್ತೆ

ಸದ್ಯದ ಮಟ್ಟಿಗೆ ನಿಫಾ ವೈರಸ್ ಸೋಂಕಿ​​ಗೆ ನಿರ್ದಿಷ್ಟ ಚಿಕಿತ್ಸೆ ಇಲ್ಲ. ಈ ಸೋಂಕನ್ನು ನಿಗ್ರಹಿಸಲು ಯಾವುದೇ ರೋಗ ನಿರೋಧಕ ಚುಚ್ಚು ಮದ್ದಿಲ್ಲ. ಝೂನೋಟಿಕ್ ವೈರಸ್ ಆಗಿರುವ ನಿಫಾ ಆರಂಭದಲ್ಲೇ ನಿಯಂತ್ರಣ ಮಾಡದಿದ್ದರೆ ಆಪತ್ತು ಕಟ್ಟಿಟ್ಟಬುತ್ತಿ ಎಂದಿದ್ದಾರೆ ತಜ್ಞರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು