ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಚೆನ್ನಮ್ಮ ಹೆಸರಿಡಲು ಸಿಎಂಗೆ ಮನವಿ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ 224ನೇ ಜಯಂತಿ ಹಿನ್ನೆಲೆ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಬಳಿ ಇರುವ ರಾಯಣ್ಣ ಪ್ರತಿಮೆಗೆ ಮುಖ್ಯಮಂತ್ರಿ ಬೊಮ್ಮಾಯಿ, ಪುಪ್ಪಾರ್ಚನೆ ಮಾಡಿದರು. ರಾಯಣ್ಣ ಅಂದ್ರೆ ಕೂದಲು ನೆಟ್ಟಗಾಗುತ್ತವೆ.

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಚೆನ್ನಮ್ಮ ಹೆಸರಿಡಲು ಸಿಎಂಗೆ ಮನವಿ
ರಾಯಣ್ಣ ಪ್ರತಿಮೆಗೆ ಪುಪ್ಪಾರ್ಚನೆ ಮಾಡಿದ ಮುಖ್ಯಮಂತ್ರಿ ಬೊಮ್ಮಾಯಿ
Follow us
TV9 Web
| Updated By: sandhya thejappa

Updated on: Aug 15, 2021 | 11:59 AM

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ 224ನೇ ಜಯಂತಿ ಹಿನ್ನೆಲೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ನಿರಂಜನಾನಂದಪುರಿಶ್ರೀ ಮನವಿ ಮಾಡಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹೆಸರು, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಚೆನ್ನಮ್ಮ ಹೆಸರಿಡಲು ನಿರಂಜನಾನಂದಪುರಿ ಸ್ವಾಮೀಜಿಗಳು ಸಿಎಂಗೆ ಮನವಿ ಮಾಡಿದ್ದಾರೆ. ಅಲ್ಲದೇ ಸಂಸತ್ ಭವನದ ಮುಂದೆ ರಾಯಣ್ಣ ಪ್ರತಿಮೆ ಮಾಡುವಂತೆ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನದಿಂದ ಬೊಮ್ಮಾಯಿಗೆ ಮನವಿ ಮಾಡಿದ್ದಾರೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ 224ನೇ ಜಯಂತಿ ಹಿನ್ನೆಲೆ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಬಳಿ ಇರುವ ರಾಯಣ್ಣ ಪ್ರತಿಮೆಗೆ ಮುಖ್ಯಮಂತ್ರಿ ಬೊಮ್ಮಾಯಿ, ಪುಪ್ಪಾರ್ಚನೆ ಮಾಡಿದರು. ರಾಯಣ್ಣ ಅಂದ್ರೆ ಕೂದಲು ನೆಟ್ಟಗಾಗುತ್ತವೆ. ರೋಮಾಂಚನ ಆಗುತ್ತೆ. ವೀರ, ಧೀರ, ಶೂರ, ಶತಮಾನದ ಯುಗ ಪುರುಷ ರಾಯಣ್ಣ. ಸಿಪಾಯಿ ದಂಗೆಗೂ 40 ವರ್ಷ ಮುಂಚೆ ರಾಯಣ್ಣ, ಕಿತ್ತೂರು ಚೆನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ್ರು. ಬ್ರಿಟಿಷ್ ಕಮೀಷನರ್ ಠಾಕ್ರೆ ಬಂಧನ ಮಾಡಿ ಬ್ರಿಟಿಷರಿಗೆ ಭಯ ಹುಟ್ಟಿಸಿದ ವೀರ ಮಹಿಳೆ ಕಿತ್ತೂರು ಚೆನ್ನಮ್ಮ. ಆತನ ಬಂಟ ರಾಯಣ್ಣ ಅಂತ ಸಿಎಂ ಬೊಮ್ಮಾಯಿ ಹೇಳಿದರು.

ರಾಯಣ್ಣ ಮಾತು ಚೆನ್ನಮ್ಮ ತಾಯಿ ಮಗನ ಸಂಬಂಧ ಇತ್ತು. ಚೆನ್ನಮ್ಮ ಏನೇ ಮಾಡಬೇಕಾದ್ರು ರಾಯಣ್ಣ ಜೊತೆಗೆ ಇರುತ್ತಿದ್ದ. ಮೋಸ ಮಾಡಿ ರಾಯಣ್ಣನನ್ನ ಸೆರೆ ಹಿಡಿದ್ರು. ರಾಯಣ್ಣ ಹಿಡಿದುಕೊಟ್ಟವರ ಮನೆಯವರ ಅನ್ನ ಈಗಲೂ ಸಂಜೆ ವೇಳೆಗೆ ಹುಳ ಬೀಳುತ್ತೆ. ಇದು ರಾಯಣ್ಣ ಸಾತ್ವಿಕ ಶಕ್ತಿ ಅಂತ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಸಚಿವ ಅಶೋಕ್, ಸ್ಥಳೀಯ ಶಾಸಕ ದಿನೇಶ್ ಗುಂಡೂರಾವ್, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ಗೌರವ ಗುಪ್ತ ಸೇರಿ ಹಲವರು ಭಾಗಿಯಾಗಿದ್ದರು.

ಇನ್ನು ಸರ್ಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಶಾಲುಗೆ ಅವಕಾಶ ಇಲ್ಲದ ಕಾರಣ ಆಯೋಜಕರು ಮುಖ್ಯಮಂತ್ರಿಗೆ ಪುಸ್ತಕ ನೀಡಿ ಸ್ವಾಗತ ಕೋರಿದರು.

ಇದನ್ನೂ ಓದಿ

ನಾನು ಕೂಡ ಮುಖ್ಯಮಂತ್ರಿ ಆಗಬಹುದು, ಇದೇ ಅವಧಿಯಲ್ಲೇ ಸಿಎಂ ಆಗ್ತೀನಿ: ಸಚಿವ ಉಮೇಶ್ ಕತ್ತಿ

Martin: ಸ್ವಾತಂತ್ರ್ಯ ದಿನಾಚರಣೆಗೆ ಧ್ರುವ ಸರ್ಜಾ ಕೊಟ್ರು ಭರ್ಜರಿ ಗಿಫ್ಟ್; ಹೊಸ ಚಿತ್ರದ ಟೈಟಲ್, ಫಸ್ಟ್ ಲುಕ್ ರಿಲೀಸ್

(Niranjanananda Puri Swamiji requested CM to name the Belgaum and hubli airport)

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್