ದಕ್ಷಿಣದಲ್ಲಿ ಬಿಜೆಪಿ ಬೆಳವಣಿಗೆಯಲ್ಲಿ ಅನಂತಕುಮಾರ್‌ ಕೊಡುಗೆ ಅಪಾರ, ಅವರ ಕೊರತೆ ಎದ್ದು ಕಾಣುತ್ತಿದೆ: ಸಚಿವ ನಿತಿನ್ ಗಡ್ಕರಿ

HN AnanthKumar: ಬಿಜೆಪಿ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಹೆಚ್.ಎನ್. ಅನಂತಕುಮಾರ್ ಅವರ ಮೂರನೇ ಪುಣ್ಯಸ್ಮರಣೆ ಕಾರ್ಯಕ್ರಮ ಇಂದು ನಗರದ ಆರ್.ವಿ. ಟೀಚರ್ಸ್ ಕಾಲೇಜಿನಲ್ಲಿ ನಡೆಯಿತು. ಈ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್, ಅನಂತಕುಮಾರ್ ಪ್ರತಿಷ್ಠಾನದ ಅಧ್ಯಕ್ಷ ಪ್ರೊ. ಪಿ.ವಿ. ಕೃಷ್ಣ ಭಟ್ ಭಾಗಿಯಾಗಿದ್ದರು.

ದಕ್ಷಿಣದಲ್ಲಿ ಬಿಜೆಪಿ ಬೆಳವಣಿಗೆಯಲ್ಲಿ ಅನಂತಕುಮಾರ್‌ ಕೊಡುಗೆ ಅಪಾರ, ಅವರ ಕೊರತೆ ಎದ್ದು ಕಾಣುತ್ತಿದೆ: ಸಚಿವ ನಿತಿನ್ ಗಡ್ಕರಿ
ದೇಶದ ಗ್ರೀನ್‌ ಎಕಾನಮಿಯಲ್ಲಿ ಬೆಂಗಳೂರಿನ ಕೊಡುಗೆ ಅಪಾರ: ಅನಂತಕುಮಾರ್ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಗಡ್ಕರಿ

ಬೆಂಗಳೂರು: ಬಿಜೆಪಿ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಹೆಚ್.ಎನ್. ಅನಂತಕುಮಾರ್ ಅವರ ಮೂರನೇ ಪುಣ್ಯಸ್ಮರಣೆ ಕಾರ್ಯಕ್ರಮ ಇಂದು ಜಯನಗರದಲ್ಲಿರುವ ಆರ್.ವಿ. ಟೀಚರ್ಸ್ ಕಾಲೇಜಿನಲ್ಲಿ ನಡೆಯಿತು. ಈ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್, ಅನಂತಕುಮಾರ್ ಪ್ರತಿಷ್ಠಾನದ ಅಧ್ಯಕ್ಷ ಪ್ರೊ. ಪಿ.ವಿ. ಕೃಷ್ಣ ಭಟ್ ಭಾಗಿಯಾಗಿದ್ದರು. ವೀಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮದಲ್ಲಿ ಭಾಗಿಯಾದ ಕೇಂದ್ರ ರಸ್ತೆ ಸಾರಿಗೆ, ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗ್ರೀನ್‌ ಎಕಾನಮಿಯಲ್ಲಿ ಬೆಂಗಳೂರಿನ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.

ದಕ್ಷಿಣ ಭಾರತದಲ್ಲಿ ಬಿಜೆಪಿ ಬೆಳವಣಿಗೆಯಲ್ಲಿ ದಿವಂಗತ ಅನಂತಕುಮಾರ್‌ರವರ ಕೊಡುಗೆ ಅಪಾರ. ದೇಶದ ಪ್ರಸಕ್ತ ರಾಜಕಾರಣದಲ್ಲಿ ಕೊರತೆ ಎದ್ದು ಕಾಣುತ್ತಿದೆ. ಅನಂತಕುಮಾರ್‌ ರಾಜ್ಯ ಬಿಜೆಪಿ ಅಧ್ಯಕ್ಷರಾಗಿದ್ದಾಗ ನಾವು ಹಲವು ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆವು. ಈ ಮೂಲಕ ಬಿಜೆಪಿ ದಕ್ಷಿಣ ಭಾರತದಲ್ಲಿ ಖಾತೆ ತೆರೆಯಿತು. ಕಳೆದ ಎರಡು ವರ್ಷಗಳಲ್ಲಿ ಅನಂತಕುಮಾರ್‌, ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್‌ ಅಂತಹವರನ್ನ ಕಳೆದುಕೊಂಡು ಪಕ್ಷ ಬಡವಾಗಿದೆ.

ಅನಂತಕುಮಾರ್‌ಗೆ ರಾಜಕಾರಣದಲ್ಲಿ ಬಹಳಷ್ಟು ಅವಕಾಶವಿತ್ತು. ಅವರ ಅನಾರೋಗ್ಯ ಬಗ್ಗೆ ತಿಳಿದುಕೊಳ್ಳುವಲ್ಲಿ ಆದ ವಿಳಂಬದಿಂದ ಅನಂತಕುಮಾರ್‌ರನ್ನ ಅಕಾಲಿಕವಾಗಿ ಕಳೆದುಕೊಳ್ಳಬೇಕಾಯಿತು. ಸಾಮಾನ್ಯ ಕಾರ್ಯಕರ್ತರೇ ಪಕ್ಷದ ಶಕ್ತಿ ಎಂದು ನಂಬಿದ್ದರು ಎಂದು ಅನಂತಕುಮಾರ್ ಸ್ಮಾರಕ ಉಪನ್ಯಾಸದಲ್ಲಿ ಗಡ್ಕರಿ ಭಾಷಣ ಮಾಡುತ್ತಾ ಸ್ಮರಿಸಿದರು. ಕೇಂದ್ರ ಸಚಿವ ನಿತಿನ್ ಗಡ್ಕರಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ದೇಶದ ಗ್ರೀನ್‌ ಎಕಾನಮಿಯಲ್ಲಿ ಬೆಂಗಳೂರಿನ ಕೊಡುಗೆ ಅಪಾರ -ಅನಂತಕುಮಾರ್ ಪುಣ್ಯಸ್ಮರಣೆ ವೇಳೆ ಕೇಂದ್ರ ಸಚಿವ ಗಡ್ಕರಿ

ದೇಶದ ಗ್ರೀನ್‌ ಎಕಾನಮಿಯಲ್ಲಿ ಬೆಂಗಳೂರು ನಗರದ ಕೊಡುಗೆ ಅಪಾರ. ಇ.ವಿ. ಹಾಗೂ ಗ್ರೀನ್‌ ಹೈಡ್ರೋಜನ್‌ ನಂತಹ ಕ್ಷೇತ್ರಗಳಲ್ಲಿ ಬೆಂಗಳೂರು ನಗರದ ಸ್ಟಾರ್ಟ್‌ ಅಪ್‌ ಗಳು ಪ್ರಮುಖ ಸಂಶೋಧನೆ ಕೈಗೊಂಡಿವೆ. ಕರ್ನಾಟಕದಲ್ಲಿ ಎಥೆನಾಲ್‌ ಉತ್ಪಾದನೆ ಹೆಚ್ಚಾಗಿದೆ. ಫ್ಲೆಕ್ಸ್‌ ಇಂಜಿನ್‌ ಹಾಗೂ ಎಲೆಕ್ಟ್ರಿಕ್‌ ವಾಹನಗಳ ಅಭಿವೃದ್ದಿಯಲ್ಲಿ ಹಲವಾರು ಸಂಶೋಧನೆಗಳು ನಡೆಯುತ್ತಿವೆ. ಈ ಸಂಶೋಧನೆಗಳಲ್ಲಿ ಬೆಂಗಳೂರು ನಗರದ ಕೊಡುಗೆ ಬಹಳಷ್ಟಿದೆ. ದೇಶದಲ್ಲಿ ಹಸಿರು ಆರ್ಥಿಕತೆ ಅಭಿವೃದ್ದಿಯಲ್ಲಿ ಬೆಂಗಳೂರು ನಗರದ ಸ್ಟಾರ್ಟ್‌ ಅಪ್‌ಗಳು ನೇತೃತ್ವ ವಹಿಸಲಿವೆ.

ಎಲೆಕ್ಟ್ರಿಕ್‌ ವಾಹನಗಳ ಕ್ಷೇತ್ರದಲ್ಲಿನ ಸಂಶೋಧನೆಗಳಲ್ಲಿ ಬೆಂಗಳೂರು ನಗರ ಪ್ರಮುಖ ಪಾತ್ರ ವಹಿಸಲಿದೆ. ಅನಂತ ಕುಮಾರ್‌ ಅವರ ಕನಸಾಗಿದ್ದ ಬೆಂಗಳೂರು ರಿಂಗ್‌ ರಸ್ತೆಯ ನಿರ್ಮಾಣದ ಬಗ್ಗೆ ಈಗಾಗಲೇ ಚರ್ಚೆಯನ್ನು ನಡೆಸಲಾಗಿದೆ. ಚುನಾವಣೆಯ ನೀತಿ ಸಂಹಿತೆಯ ನಂತರ ಕರ್ನಾಟಕಕ್ಕೆ ಆಗಮಿಸಿ ರಿಂಗ್‌ ರಸ್ತೆಯ ಕಾಮಗಾರಿ ಪ್ರಾರಂಭದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದರು.

(Nitin Gadkari Address AnanthKumar Memorial Lecture on Progressive Politics and Nation Building)

Published On - 8:55 pm, Fri, 12 November 21

Click on your DTH Provider to Add TV9 Kannada