PUC students: ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ಬೈಕ್‌ ತರುವಂತಿಲ್ಲ-ಸಂಚಾರ ಪೊಲೀಸ್ ಆಯುಕ್ತ ರವಿಕಾಂತೇಗೌಡ

| Updated By: ಸಾಧು ಶ್ರೀನಾಥ್​

Updated on: Jul 07, 2022 | 8:27 PM

Dr. B.R. Ravikanthe Gowda: ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ಬೈಕ್ ತರುವಂತಿಲ್ಲ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಹೇಳಿದ್ದಾರೆ.

PUC students: ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ಬೈಕ್‌ ತರುವಂತಿಲ್ಲ-ಸಂಚಾರ ಪೊಲೀಸ್ ಆಯುಕ್ತ ರವಿಕಾಂತೇಗೌಡ
ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ಬೈಕ್‌ ತರುವಂತಿಲ್ಲ
Follow us on

ಬೆಂಗಳೂರು: ಪಿಯುಸಿ ವಿದ್ಯಾರ್ಥಿಗಳು (PUC students) ಕಾಲೇಜಿಗೆ ಬೈಕ್ ತರುವಂತಿಲ್ಲ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ (Dr. B.R. Ravikanthe Gowda) ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಪಿಯು ವಿದ್ಯಾರ್ಥಿಗಳು ವಾಹನ ಚಾಲನಾ ಪರವಾನಗಿ (ಡಿಎಲ್ -DL- Driving Licence) ಪಡೆಯಲು ಅರ್ಹತೆ ಹೊಂದಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಪಿಯುಸಿ ವಿದ್ಯಾರ್ಥಿಗಳು ಬೈಕ್ ಅಥವಾ ಸ್ಕೂಟರ್ ಗಳಲ್ಲಿ ಕಾಲೇಜುಗಳಿಗೆ ಬರುವಂತಿಲ್ಲ ಎಂದು ಹೇಳಿದ್ದಾರೆ.

ದ್ವಿಚಕ್ರ ವಾಹನ ವೀಲಿಂಗ್ ವಿರುದ್ಧ ವಿಶೇಷ ಅಭಿಯಾನ ನಡೆಸುತ್ತಿದ್ದೇವೆ. ಕಳೆದ ವಾರ 14 ವೀಲಿಂಗ್ ಪ್ರಕರಣಗಳು ದಾಖಲಾಗಿವೆ. ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ದೂರು ಆಧರಿಸಿ 12 ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಕ್ಕೆ 5 ರಿಂದ 10 ಲಕ್ಷ ರೂಪಾಯಿ ವರೆಗೆ ಬಾಂಡ್ ಬರೆಸಿಕೊಳ್ಳುತ್ತೇವೆ. ವೀಲಿಂಗ್ ಮಾಡುವವರ ಪೋಷಕರಿಗೆ ಕೌನ್ಸೆಲಿಂಗ್‌ ಮಾಡುತ್ತಿದ್ದೇವೆ. ನಕಲಿ ನಂಬರ್ ಪ್ಲೇಟ್ ಹೊಂದಿರುವ ವಾಹನಗಳು ಹೆಚ್ಚಾಗುತ್ತಿವೆ. ನಕಲಿ ನಂಬರ್ ಪ್ಲೇಟ್ ಹೊಂದಿರುವ ವಾಹನಗಳ ಮಾಲೀಕರನ್ನು ಬಂಧಿಸಿ ಜೈಲಿಗೆ ಕಳಿಹಿಸಲಾಗುವುದು ಎಂದು ಅವರು ಎಚ್ಚರಿಸಿದರು.

ಬೆಂಗಳೂರು ಸಂಚಾರ ಪೊಲೀಸ್ ಟ್ವೀಟ್ ಇಲ್ಲಿದೆ: