AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ ಹಾಗೂ ಕೈಗಾರಿಕೆಗಳ ಸಮಯ ಬದಲಾವಣೆ ಸಾಧ್ಯವಿಲ್ಲ: ಹೈಕೋರ್ಟ್‌ಗೆ ಶಿಕ್ಷಣ, ಕಾರ್ಮಿಕ ಇಲಾಖೆ ಮಾಹಿತಿ

ಬೆಂಗಳೂರಿನ ಸಂಚಾರ ದಟ್ಟಣೆ ತಪ್ಪಿಸಲು ಹೈಕೋರ್ಟ್ ಸೂಚನೆ ನೀಡಿತ್ತು. ಆದರೆ ಶಾಲೆ ಹಾಗೂ ಕೈಗಾರಿಕೆಗಳ ಸಮಯ ಬದಲಾವಣೆ ಸಾಧ್ಯವಿಲ್ಲ ಎಂದು ಸಂಬಂಧಪಟ್ಟವರೊಂದಿಗಿನ ಸಮಾಲೋಚನೆಯ ವರದಿಯನ್ನು ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಹೈಕೋರ್ಟ್‌ಗೆ ಸಲ್ಲಿಕೆ ಮಾಡಿದೆ. 

ಶಾಲೆ ಹಾಗೂ ಕೈಗಾರಿಕೆಗಳ ಸಮಯ ಬದಲಾವಣೆ ಸಾಧ್ಯವಿಲ್ಲ: ಹೈಕೋರ್ಟ್‌ಗೆ ಶಿಕ್ಷಣ, ಕಾರ್ಮಿಕ ಇಲಾಖೆ ಮಾಹಿತಿ
ಕರ್ನಾಟಕ ಹೈಕೋರ್ಟ್ (ಸಂಗ್ರಹ ಚಿತ್ರ)
Ramesha M
| Edited By: |

Updated on:Dec 18, 2023 | 9:31 PM

Share

ಬೆಂಗಳೂರು, ಡಿಸೆಂಬರ್​​ 18: ಬೆಂಗಳೂರಿನಲ್ಲಿ ವಾಹನ ದಟ್ಟಣೆ ತಪ್ಪಿಸಲು ಹೈಕೋರ್ಟ್ (High Court)​​ ಸರ್ಕಾರಕ್ಕೆ ಸಲಹೆ ನೀಡಿತ್ತು. ಶಾಲೆ ಹಾಗೂ ಕೈಗಾರಿಕೆಗಳ ಕಾರ್ಯನಿರ್ವಹಣೆ ಸಮಯ ಬದಲಾವಣೆಗೆ ಸಲಹೆ ನೀಡಿತ್ತು. ಇದೀಗ ಶಾಲೆ ಹಾಗೂ ಕೈಗಾರಿಕೆಗಳ ಸಮಯ ಬದಲಾವಣೆ ಸಾಧ್ಯವಿಲ್ಲ ಎಂದು ಸಂಬಂಧಪಟ್ಟವರೊಂದಿಗಿನ ಸಮಾಲೋಚನೆಯ ವರದಿಯನ್ನು ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಹೈಕೋರ್ಟ್‌ಗೆ ಸಲ್ಲಿಕೆ ಮಾಡಿದೆ.

ಮಕ್ಕಳನ್ನು ನಿದ್ರೆಯಿಂದ ಬೇಗ ಎಚ್ಚರಿಸಿದರೆ ನಿದ್ರಾಹೀನತೆ ಸಮಸ್ಯೆ ಉಂಟಾಗುವುದು. ಆರೋಗ್ಯಕರ ಉಪಾಹಾರ ಸೇವನೆಗೂ ಸಮಯ ಸಿಗದಂತಾಗಲಿದೆ. ಶಾಲೆಗಳ ಬಳಿ ದಟ್ಟಣೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಕೈಗಾರಿಕೆಗಳ ಸಮಯ ಬದಲಾವಣೆಯಿಂದ ದಟ್ಟಣೆ ಕಡಿಮೆಯಾಗುವುದಿಲ್ಲ. ಶಿಫ್ಟ್‌ಗಳಲ್ಲಿ ಕಾರ್ಮಿಕರು ಕೆಲಸ ಮಾಡುವುದರಿಂದ ದಟ್ಟಣೆಗೆ ಕಾರಣವಾಗುವುದಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಶಾಲಾ ಸಮಯ ಬದಲಾವಣೆ: ಖಾಸಗಿ ಶಾಲೆಗಳ ಒಕ್ಕೂಟ, ಪೋಷಕರ ವಿರೋಧ

ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಸಲ್ಲಿಸಿದ್ದ ವರದಿಯನ್ನು CJ ಪ್ರಸನ್ನ ಬಿ ವರಾಳೆ, ನ್ಯಾ.ಕೃಷ್ಣದೀಕ್ಷಿತ್‌ರಿದ್ದ ಪೀಠದಲ್ಲಿ ವಿಚಾರಣೆ ಮಾಡಲಾಗಿದ್ದು, ಜನವರಿ ಮೊದಲ ವಾರಕ್ಕೆ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಸಮರ್ಪಣ ಸಾಂಸ್ಕೃತಿಕ ಸೇವಾ ಸಂಸ್ಥೆ ಪಿಐಎಲ್ ಸಲ್ಲಿಸಿತ್ತು.

ಶಾಲಾ ಆರಂಭದ ಸಮಯ ಬದಲಾವಣೆಯಿಂದಾಗುವ ಸಮಸ್ಯೆ

ಸಮಯ ಬದಲಾವಣೆಗೆ ಕೆಲ ಖಾಸಗಿ ಶಾಲೆಗಳ ಒಕ್ಕೂಟಗಳಿಂದ ವಿರೋಧ ವ್ಯಕ್ತವಾಗಿತ್ತು. ಬೇಗ ಶಾಲೆ ಆರಂಭ ಮಾಡುವುದಕ್ಕೆ ಪೋಷಕರಿಂದಲೂ ವಿರೋಧ ವ್ಯಕ್ತವಾಗಿತ್ತು. ಪರ್ಯಾಯ ಮಾರ್ಗದ ಕುರಿತು ಕೆಲ ಖಾಸಗಿ ಸಂಘಟನೆಯಿಂದ ಸಲಹೆ ನೀಡಲಾಗಿತ್ತು. ಹಾಗಾದರೆ, ಶಾಲಾ ಆರಂಭದ ಸಮಯ ಬದಲಾವಣೆಯಿಂದ ಆಗುವ ಸಮಸ್ಯೆ ಏನು?

ಇದನ್ನೂ ಓದಿ: ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಶಾಲೆಯ ಸಮಯ ಬದಲಾವಣೆ; ಖಾಸಗಿ, ಸರ್ಕಾರಿ ಶಾಲೆಗಳ ಪ್ರತಿನಿಧಿಗಳ ಜತೆ ಸಭೆ ನಡೆಸಲಿದೆ ಸರ್ಕಾರ

ಮಕ್ಕಳು ಬೆಳಗ್ಗೆ ಬೇಗ ಏಳಬೇಕು, ಪೋಷಕರು ಕೆಲಸಕ್ಕೆ ಹೋಗಲು ಕಷ್ಟ, ಮಕ್ಕಳ ದೈಹಿಕ ಚಟುವಟಿಕೆಗೆ ಕಡಿಮೆ ಕಾಲಾವಕಾಶ ಸಿಗುತ್ತದೆ, ಮಕ್ಕಳು ಕಡಿಮೆ ನಿದ್ದೆ ಮಾಡಿದರೆ ಆರೋಗ್ಯ ಸಮಸ್ಯೆಯಾಗಬಹುದು. ಈ ಕಾರಣಗಳಿಗೆ ಶಾಲಾ ಸಮದಲ್ಲಿ ಬದಲಾವಣೆಗೆ ವಿರೋಧ ವ್ಯಕ್ತವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:26 pm, Mon, 18 December 23

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ