AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ವಿರುದ್ಧ ಅವಿಶ್ವಾಸ ಮಂಡನೆ ಕಾನೂನಾತ್ಮಕವಾಗಿಲ್ಲ: ಸಿಎನ್ ಬಾಲಕೃಷ್ಣ

ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ವಿರುದ್ಧದ ಅವಿಶ್ವಾಸ ಮಂಡನೆ ಮಾಡಿರುವುದು ಕಾನೂನಾತ್ಮಕವಾಗಿಲ್ಲ ಎಂದು ಸಂಘದ ಅಧ್ಯಕ್ಷ ಸಿಎಂ ಬಾಲಕೃಷ್ಣ ಆರೋಪಿಸಿದ್ದಾರೆ. ನಮ್ಮ ನೋಟಿಸ್​ಗೆ ಸರಿಯಾದ ಉತ್ತರ ನೀಡಿಲ್ಲ ಅವರು ಎಂದು ಆರೋಪಿಸಿದರು.

ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ವಿರುದ್ಧ ಅವಿಶ್ವಾಸ ಮಂಡನೆ ಕಾನೂನಾತ್ಮಕವಾಗಿಲ್ಲ: ಸಿಎನ್ ಬಾಲಕೃಷ್ಣ
ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ವಿರುದ್ಧ ಅವಿಶ್ವಾಸ ಮಂಡನೆ ಕಾನೂನಾತ್ಮಕವಾಗಿಲ್ಲ ಎಂದ ಸಿಎನ್ ಬಾಲಕೃಷ್ಣ
Rakesh Nayak Manchi
Rakesh Nayak Manchi|

Updated on: Jun 09, 2023 | 3:26 PM

Share

ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ವಿರುದ್ಧದ ಅವಿಶ್ವಾಸ ಮಂಡನೆ ಮಾಡಿರುವುದು ಕಾನೂನಾತ್ಮಕವಾಗಿಲ್ಲ ಎಂದು ಸಂಘದ ಅಧ್ಯಕ್ಷ ಸಿಎಂ ಬಾಲಕೃಷ್ಣ (CN Balakrishna) ಆರೋಪಿಸಿದ್ದಾರೆ. ನಮ್ಮ ನೋಟಿಸ್​ಗೆ ಸರಿಯಾದ ಉತ್ತರ ನೀಡಿಲ್ಲ. ಕೆಂಪೇಗೌಡ ಭವನಕ್ಕೆ ಬಂದು ಸಭೆ ನಡೆಸಲು ಒತ್ತಾಯ ಮಾಡಿದ್ದಾರೆ. ಅವರು ಕಾನೂನು ಬಾಹಿರವಾಗಿ ನಡೆದುಕೊಂಡಿದ್ದಾರೆ. ಅವರಿಗೆ ತಿಳುವಳಿಕೆ ಮೂಲಕ ಪತ್ರದ ಮುಖೇನ ತಿಳಿಸಿದ್ದೇವೆ ಎಂದು ಹೇಳಿದ್ದಾರೆ.

ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ವಿರುದ್ಧ 21 ಸಹಿಗಳು ಆಗಿವೆ. ಈ ಬಗ್ಗೆ ಮೇ 21 ರಂದು ಅವಿಶ್ವಾಸ ಮಂಡನೆ ಮಾಡಿ ಪತ್ರ ನೀಡಿದ್ದಾರೆ. ಅದಾದ 7 ದಿನಗಳ ಒಳಗೆ ನಾವು ಪತ್ರ ನೀಡಬೇಕಿತ್ತು. ಆ ವೇಳೆ ಪದಾಧಿಕಾರಿ‌ ಒಬ್ಬರು ರಾಜೀನಾಮೆ ನೀಡಿದರು. ನಮ್ಮ ಆಡಳಿತ ಮಂಡಳಿಯಲ್ಲಿ ಅನೇಕ ಗೌರ್ನಿಂಗ್ ಕೌನ್ಸಿಲ್ ಇವೆ. ಇಲ್ಲಿ ಯಾರೂ ಕೂಡ ರಾಜೀನಾಮೆ ಪತ್ರ ಸಲ್ಲಿಸದೆ ಅವಿಶ್ವಾಸ ಮಂಡಿಸಿದ್ದಾರೆ. ಈ ಬಗ್ಗೆ ನೀಡಿರುವ ನೊಟೀಸ್‌ಗಳಿಗೆ ಅವರು ಉತ್ತರ ನೀಡಿಲ್ಲ ಎಂದರು.

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾನೂನು ರದ್ದತಿ ಸುಳಿವು; ರಾಜ್ಯದಾದ್ಯಂತ ಮುಂದುವರಿದ ಬಿಜೆಪಿ ಪ್ರತಿಭಟನೆ

ಜೂನ್ 7 ರಂದು ಕೋ ಆಪರೇಟಿವ್ ಸೊಸೈಟಿ ರಿಜಿಸ್ಟ್ರಾರ್ ಅವರಿಗೆ ಅಧೀಕೃತವಾಗಿ‌ ತಿಳಿಸಿದ್ದೆವು. ಈ‌ ದಿನ ಏಕಾಏಕಿ ಕೆಂಪೇಗೌಡ ಭವನಕ್ಕೆ ಬಂದು ಸಭೆ ನಡೆಸಲು ಒತ್ತಾಯ ಮಾಡಿದ್ದಾರೆ. ಅವರು ಕಾನೂನು ಬಾಹಿರವಾಗಿ ನಡೆದುಕೊಂಡಿದ್ದಾರೆ. ಅವರಿಗೆ ತಿಳುವಳಿಕೆ ಮೂಲಕ ಪತ್ರದ ಮುಖೇನ ತಿಳಿಸಿದ್ದೇವೆ. ಅವರಿಗೆ ನೀಡಿರುವ ನೊಟೀಸ್‌ಗೆ ಉತ್ತರ ನೀಡಿಲ್ಲ ಅಂತ ಸಹಕಾರಿ ಇಲಾಖೆಗೆ ತಿಳಿಸಿದ್ದೇವೆ ಎಂದು ಹೇಳಿದರು.

ನಾವು ಸಹಕಾರ‌ ಇಲಾಖೆಯು ಸೂಚಿಸುವಂತೆ ಕಾನೂನಾತ್ಮಕವಾಗಿ ನಡೆದುಕೊಳ್ಳುತ್ತೇವೆ. ಅವರು ನಡೆಸಿರುವ ಸಭೆ ಬೈ ಲಾ ವಿರುದ್ಧವಾಗಿದೆ. ಅವಿಶ್ವಾಸ ಮಂಡನೆಗೆ 24 ನಿರ್ದೇಶಕರು ಸಭೆಯಲ್ಲಿ ಭಾಗಿಯಾಗಬೇಕು. ಆದರೇ ಸಭೆಯಲ್ಲಿ 19 ಜನ ಮಾತ್ರ ಇದ್ದರು. ಇದು ಕಾನೂನಾತ್ಮಕವಾಗಿಲ್ಲ ಎಂದು ಬಾಲಕೃಷ್ಣ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ