ರ‍್ಯಾಪಿಡೊ ಬೈಕ್, ಟ್ಯಾಕ್ಸಿ ಸೇವೆಗಳಿಗೆ ಯಾವುದೇ ಅಡಚಣೆ ಇಲ್ಲ: ರ‍್ಯಾಪಿಡೊ ಸಂಸ್ಥೆ ಸ್ಪಷ್ಟನೆ

ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ರಾಜ್ಯ ಸರ್ಕಾರ ಬೆಂಗಳೂರು ನಗರ ಸೇರಿದಂತೆ ರಾಜ್ಯದ ನಗರ ಪ್ರದೇಶಗಳಲ್ಲಿ ಆ್ಯಪ್​ ಆಧಾರಿತ ಎಲೆಕ್ಟ್ರಿಕ್​ ಬೈಕ್​ ಟ್ಯಾಕ್ಸಿ ಸೇವೆಯನ್ನು ರದ್ದುಪಡಿಸಿತ್ತು. ಆದರೆ ಸರ್ಕಾರದ ಆದೇಶವು ವಿದ್ಯುತ್​ ಚಾಲಿತ ವಾಹನಗಳ ಓಡಾಟಕ್ಕೆ ಮಾತ್ರ ಸಂಬಂಧಿಸಿದ್ದಾಗಿದ್ದು, ರ‍್ಯಾಪಿಡೊ ಸೇವೆ ಯಥಾಪ್ರಕಾರ ಮುಂದುವರೆಯಲಿದೆ ಎಂದು ಸಂಸ್ಥೆ ಹೇಳಿದೆ.

ರ‍್ಯಾಪಿಡೊ ಬೈಕ್, ಟ್ಯಾಕ್ಸಿ ಸೇವೆಗಳಿಗೆ ಯಾವುದೇ ಅಡಚಣೆ ಇಲ್ಲ: ರ‍್ಯಾಪಿಡೊ ಸಂಸ್ಥೆ ಸ್ಪಷ್ಟನೆ
ರ‍್ಯಾಪಿಡೊ
Follow us
ವಿವೇಕ ಬಿರಾದಾರ
|

Updated on: Mar 13, 2024 | 11:39 AM

ಬೆಂಗಳೂರು, ಮಾರ್ಚ್​ 13: ರಾಜ್ಯ ಸರ್ಕಾರವು ಹಿಂಪಡೆದಿರುವ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ (Electric Bike Taxi) ಆದೇಶವು ರ‍್ಯಾಪಿಡೊ (Rapido) ಬೈಕ್ ಟ್ಯಾಕ್ಸಿ ಸೇವೆಗಳಿಗೆ ಯಾವುದೇ ಅಡಚಣೆ ಆಗುವುದಿಲ್ಲ ಎಂದು ರ್ಯಾಪಿಡೊ ಕಂಪನಿ ಸ್ಪಷ್ಟಪಡಿಸಿದೆ. ಹೈಕೋರ್ಟ್ (High Court)​ ಆದೇಶದ ಪ್ರಕಾರ ಕಾರ್ಯನಿರ್ವಹಿಸುತ್ತಿರುವ ರ‍್ಯಾಪಿಡೊಗೆ ಸರ್ಕಾರದ ಆದೇಶ ಅನ್ವಯವಾಗುವುದಿಲ್ಲ. ರಾಜ್ಯ ಸರ್ಕಾರದ ಆದೇಶವು ವಿದ್ಯುತ್​ ಚಾಲಿತ ವಾಹನಗಳ ಓಡಾಟಕ್ಕೆ ಮಾತ್ರ ಸಂಬಂಧಿಸಿದ್ದಾಗಿದ್ದು, ರ‍್ಯಾಪಿಡೊ ಸೇವೆ ಯಥಾಪ್ರಕಾರ ಮುಂದುವರೆಯಲಿದೆ ಎಂದು ಹೇಳಿದೆ.

ಸರ್ಕಾರ ಹಿಂಪಡೆದಿದ್ದು ಏಕೆ?

ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ರಾಜ್ಯ ಸರ್ಕಾರ ಬೆಂಗಳೂರು ನಗರ ಸೇರಿದಂತೆ ರಾಜ್ಯದ ನಗರ ಪ್ರದೇಶಗಳಲ್ಲಿ ಆ್ಯಪ್​ ಆಧಾರಿತ ಎಲೆಕ್ಟ್ರಿಕ್​ ಬೈಕ್​ ಟ್ಯಾಕ್ಸಿ ಸೇವೆಯನ್ನು ರದ್ದುಪಡಿಸಿತ್ತು.

2021ರಲ್ಲಿ ಜಾರಿಗೆ ಬಂದಿದ್ದ ವಿದ್ಯುತ್​ ಬೈಕ್​ ಟ್ಯಾಕ್ಸಿ

ಸಾರ್ವಜನಿಕ ಸಾರಿಗೆ ಸಂಪರ್ಕ ಕಲ್ಪಿಸಲು ಹಾಗೂ ವಾಹನಗಳ ಸಂಚಾರ ದಟ್ಟಣೆ ಕಡಿಮೆಗೊಳಿಸುವ ಉದ್ದೇಶದಿಂದ 2021ರಲ್ಲಿ ಅಂದಿನ ಸರ್ಕಾರವು, ಕರ್ನಾಟಕ ವಿದ್ಯುತ್​ ಬೈಕ್​​ ಟ್ಯಾಕ್ಸಿ ಸಂಸ್ಥೆಗಳಿಗೆ ಪರವಾನಿಗೆ ನೀಡಿತ್ತು. 2022ರ ಡಿಸೆಂಬರ್​​ನಲ್ಲಿ ಸಾರಿಗೆ ಇಲಾಖೆಯು ಇ-ಬೈಕ್ ಟ್ಯಾಕ್ಸಿ ಸೇವೆ ಆರಂಭಿಸಲು ಬ್ಲೂಸ್ಪಾರ್ಟ್ ಮತ್ತು ಬೌನ್ಸ್​ ಸಂಸ್ಥೆಗಳಿಗೆ ಪರವಾನಗಿ ನೀಡಿತ್ತು.

ಇದನ್ನೂ ಓದಿ: Viral: ಬೆಂಗಳೂರಿನ ವ್ಯಕ್ತಿಯೊಬ್ಬರು ರ‍್ಯಾಪಿಡೊ ಡ್ರೈವರ್​​ನೊಂದಿಗೆ ನಡೆಸಿದ ಸಂಭಾಷಣೆ ವೈರಲ್

ಬಿಳಿಬಣ್ಣದ ನಂಬರ್ ಪ್ಲೇಟ್ ಹೊಂದಿರುವ ಬೈಕ್‌ಗಳ ಮೂಲಕವೂ ಈ ಸೇವೆ ಒದಗಿಸಲು ಸರ್ಕಾರ ಅನುಮತಿ ನೀಡಿತ್ತು. ಇದಕ್ಕೆ ಆಟೊ ಮತ್ತು ಟ್ಯಾಕ್ಸಿ ಚಾಲಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ, ಬೈಕ್ ಟ್ಯಾಕ್ಸಿ ಸವಾರರ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಗಳು ವರದಿಯಾಗಿದ್ದವು. ಕೆಲವು ಸವಾರರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ದೂರುಗಳು ದಾಖಲಾಗಿದ್ದವು.

ಹಾಗಾಗಿ, ಇ-ಬೈಕ್ ಟ್ಯಾಕ್ಸಿ ಸೇವೆ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಲು ಬಿಎಂಆರ್‌ಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಸರ್ಕಾರ ಸಮಿತಿ ರಚಿಸಿತ್ತು. ಈ ಸಮಿತಿಯ ವರದಿ ಆಧಾರದ ಮೇಲೆ ಯೋಜನೆಯನ್ನು ರದ್ದುಪಡಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ