ಹಿಜಾಬ್ ಧರಿಸಿಕೊಂಡು ಬಂದ್ರೆ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಇಲ್ಲ ಎಂಟ್ರಿ; ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆದೇಶ

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗಪಡಿಸಿರುವ ಶಾಲಾ ಸಮವಸ್ತ್ರ ಕಡ್ಡಾಯವಾಗಿರಲಿದೆ. ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳು ನಿರ್ಧರಿಸಿರುವ ಸಮವಸ್ತ್ರ ಕಡ್ಡಾಯ ಮಾಡಲಾಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ನೀಡಿದೆ.

ಹಿಜಾಬ್ ಧರಿಸಿಕೊಂಡು ಬಂದ್ರೆ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಇಲ್ಲ ಎಂಟ್ರಿ; ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆದೇಶ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: preethi shettigar

Updated on:Mar 26, 2022 | 11:19 AM

ಬೆಂಗಳೂರು: ಹಿಜಾಬ್ ಧರಿಸಿಕೊಂಡು ಎಸ್ಎಸ್ಎಲ್​ಸಿ ಪರೀಕ್ಷೆ(Exam) ಬಂದರೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ( Department of Public Education) ಆದೇಶ ನೀಡಿದೆ. 1995ರ ನಿಯಮ 11ರಲ್ಲಿ ಪ್ರದತ್ತವಾಗಿರುವ ಅಧಿಕಾರದನ್ವಯ ಸಮವಸ್ತ್ರ ಜಾರಿ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗಪಡಿಸಿರುವ ಶಾಲಾ ಸಮವಸ್ತ್ರ(Uniform) ಕಡ್ಡಾಯವಾಗಿರಲಿದೆ. ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳು ನಿರ್ಧರಿಸಿರುವ ಸಮವಸ್ತ್ರ ಕಡ್ಡಾಯ ಮಾಡಲಾಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ನೀಡಿದೆ.

ಶಾಲಾ- ಕಾಲೇಜಿನಲ್ಲಿ ಹಿಜಾಬ್ ಧರಿಸುವಂತಿಲ್ಲ, ಸರ್ಕಾರದ ವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ ಎಂದು ಮಾರ್ಚ್ ​15ರಂದು ಕರ್ನಾಟಕ ಹೈಕೋರ್ಟ್​ ತೀರ್ಪು ನೀಡಿದೆ.  ಈ ಬೆನ್ನೆಲೆ ಕೋರ್ಟ್ ತೀರ್ಪಿಗೆ ಬೇಸರ ವ್ಯಕ್ತಪಡಿಸಿರುವ​ ಮುಸ್ಲಿಂ ಸಮುದಾಯ ಮುಖಂಡರು ಕರ್ನಾಟಕ ಬಂದ್​ಗೆ ಕರೆ ನೀಡಿದ್ದರು. ಮುಸ್ಲಿಂ ಮುಖಂಡರು ಸ್ವಯಂಪ್ರೇರಿತ ಬಂದ್​ಗೆ ಘೋಷಣೆ ಮಾಡಿದ್ದರು. ಇನ್ನೂ ಕೂಡ ಕೆಲವು ಕಡೆ ಕೋರ್ಟ್​ ತೀರ್ಪಿಗೆ ಅಸಮಾಧಾನವಿದ್ದು, ಅನೇಕ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೇ ಗೈರಾಗಿದ್ದಾರೆ. ಹೀಗಿರುವಾಗಲೇ ಇಂದು ಸಾರ್ವಜನಿಕ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದ್ದು, ಮುಂಬರುವ 2022ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಹಿಜಾಬ್​ ಧರಿಸಿ ಬಂದರೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಆದೇಶ ಹೊರಡಿಸಿದೆ.

ಹೈಕೋರ್ಟ್​ನಿಂದ ಸ್ಪಷ್ಟನೆ:

ಉಡುಪಿಯಿಂದ ಶುರುವಾಗಿದ್ದ ಹಿಜಾಬ್​ ಗಲಾಟೆ ಇಡೀ ವಿಶ್ವಕ್ಕೆ ವ್ಯಾಪಿಸಿತ್ತು. ಮುಸ್ಲಿಂ ಸಮುದಾಯದ ಕೆಲ ವಿದ್ಯಾರ್ಥಿನಿಯರು ಹಿಜಾಬ್ ನಮ್ಮ ಹಕ್ಕು,  ನಾವು ಧರಿಸಿಯೇ ಶಾಲೆ- ಕಾಲೇಜಿಗೆ ಬರುತ್ತೇವೆ ಎಂದು ಪ್ರತಿಭಟನೆ ನಡೆಸಿದ್ದರು. ಜೊತೆಗೆ ಹಿಜಾಬ್ ಧರಿಸುವವರೆಗೆ ಕೇಸರಿ ಶಾಲು ಧರಿಸುತ್ತೇವೆ ಅಂತ ಹಲವು ಹಿಂದೂ ವಿದ್ಯಾರ್ಥಿಗಳು ಪಟ್ಟು ಬಿದ್ದಿದ್ದರು.

ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್​ರವರ ಪೂರ್ಣ ಪೀಠ ತೀರ್ಮಾನ ಕೈಗೊಂಡಿದ್ದು, ಸಮವಸ್ತ್ರ ನಿಗದಿಪಡಿಸುವ ಅಧಿಕಾರ ಶಾಲೆಗಳಿಗಿದೆ. ರಾಜ್ಯ ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ. ಉಡುಪಿ ಕಾಲೇಜಿಗೆ ನಿರ್ದೇಶನ ಹೇರುವ ಅಗತ್ಯವಿಲ್ಲ ಅಂತ ಕೋರ್ಟ್​ ತಿಳಿಸಿದೆ.

ಇದನ್ನೂ ಓದಿ: ಹಿಜಾಬ್ ಪ್ರಕರಣದ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ; ‘ಹಿಜಾಬ್‌ಗೂ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ’ ಎಂದ ಸಿಜೆಐ

ಶಾಲೆ-ಕಾಲೇಜುಗಳಲ್ಲಿ ಹಿಜಾಬ್​ ಧರಿಸಲು ಅವಕಾಶವಿಲ್ಲ, ಸರ್ಕಾರದ ವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ: ಹೈಕೋರ್ಟ್​

Published On - 11:04 am, Sat, 26 March 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್