ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ಪೇಟ, ಶಾಲುಗೆ ಬ್ರೇಕ್; ಹೂ ಗುಚ್ಚದ ಬದಲು ಕನ್ನಡ ಪುಸ್ತಕ ನೀಡಿ – ರಾಜ್ಯ ಸರ್ಕಾರ ಆದೇಶ

ಸರ್ಕಾರದ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ, ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ನೀಡದಂತೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟಿಸಲಾಗಿದೆ.

ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ಪೇಟ, ಶಾಲುಗೆ ಬ್ರೇಕ್; ಹೂ ಗುಚ್ಚದ ಬದಲು ಕನ್ನಡ ಪುಸ್ತಕ ನೀಡಿ - ರಾಜ್ಯ ಸರ್ಕಾರ ಆದೇಶ
ಬಸವರಾಜ ಬೊಮ್ಮಾಯಿ
Follow us
TV9 Web
| Updated By: ಆಯೇಷಾ ಬಾನು

Updated on:Aug 10, 2021 | 2:38 PM

ಬೆಂಗಳೂರು: ರಾಜ್ಯ ಸರ್ಕಾರದ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ, ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ನೀಡದಂತೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ಪೇಟ, ಶಾಲು ಸೇರಿದಂತೆ ಅನಗತ್ಯ ಖರ್ಚುಗಳಿಗೆ ರಾಜ್ಯ ಸರ್ಕಾರ ಕಡಿವಾಣ ಹಾಕಿದೆ. ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ, ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ನೀಡದಂತೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟಿಸಲಾಗಿದೆ.

ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು. ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಆದೇಶ ಪ್ರಕಟ ಸಿಎಂ ಈ ಆದೇಶವನ್ನು ಮೌಖಿಕವಾಗಿ ಹೇಳಿದ ತಕ್ಷಣ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ಸರ್ಕಾರಿ ಆದೇಶ ಜಾರಿ ಮಾಡಿದರು. ಇನ್ನು ಮುಂದೆ ಹೂ ಗುಚ್ಚದ ಬದಲಿಗೆ ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

CM Order

ಆದೇಶ ಪ್ರತಿ

ಇದನ್ನೂ ಓದಿ: ಶಾಂತಿ ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಮೊದಲ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Published On - 1:26 pm, Tue, 10 August 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ