ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ನಾಳೆ ಗಣೇಶೋತ್ಸವ ಇಲ್ಲ: ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಆದೇಶ

ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರ ಸಂಬಂಧ ಯಥಾಸ್ಥಿತಿ ಎರಡೂ ಪಕ್ಷಗಳೂ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಆದೇಶ ನೀಡಿದ್ದು, ನಾಳೆ ಗಣೇಶೋತ್ಸವ ಇಲ್ಲ. 

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ನಾಳೆ ಗಣೇಶೋತ್ಸವ ಇಲ್ಲ: ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಆದೇಶ
Supreme Court
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Aug 30, 2022 | 6:43 PM

ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರ ಸಂಬಂಧ ಯಥಾಸ್ಥಿತಿ ಎರಡೂ ಪಕ್ಷಗಳೂ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಆದೇಶ ನೀಡಿದ್ದು, ನಾಳೆ ಗಣೇಶೋತ್ಸವ ಇಲ್ಲ. ಹೈಕೋರ್ಟ್​ನಲ್ಲಿ ಮತ್ತೆ ಹೊಸದಾಗಿ ವಿಚಾರಣೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದ್ದು, ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಹೊಸದಾಗಿ ಈದ್ಗಾ ಮೈದಾನದ ಬಗ್ಗೆ ವಿಚಾರಣೆ ನಡೆಸುವಂತೆ ಸುಪ್ರೀಂ ಆದೇಶಿಸಿದೆ. ವಕ್ಛ್ ಬೋರ್ಡ್ ಪರ ಕಪಿಲ್ ಸಿಬಲ್ ವಾದ ಮಂಡಿಸಿದರೆ, ಕರ್ನಾಟಕದ ಪರವಾಗಿ ವಕೀಲ ಮುಕುಲ್ ರೋಹಟಗಿ ವಾದ ಮಂಡಿಸಿದರು. ವಾದ ವಿವಾದಗಳ ಬಳಿಕ ಮೂವರು ನ್ಯಾಯಾಧೀಶರ ಪೀಠ ರಚನೆ ಮಾಡಿ ಸುಪ್ರೀಂಕೋರ್ಟ್ ಯಥಾಸ್ಥಿತಿ ಕಾಯ್ದುಕೊಳ್ಳಲು ತಿಳಿಸಿ.

ವಾದ ಪ್ರತಿವಾದ ಹೀಗಿದೆ:

ಸುಪ್ರೀಂ ಕೋರ್ಟ್ ನಿಷೇಧಾಜ್ಞೆ ಇರುವ ಹಿನ್ನಲೆ ಅಲ್ಲಿ ಬಿಬಿಎಂಪಿ ಗಣೇಶ ಚತುರ್ಥಿ ಆಚರಿಸಲು ಅನುಮತಿ ನೀಡಬಹುದೇ? ಎಂದು ಪ್ರಶ್ನಿಸಿದೆ. ಬಿಬಿಎಂಪಿಯಲ್ಲ ರಾಜ್ಯ ಸರ್ಕಾರ ಆಚರಣೆಗೆ ಅವಕಾಶ ಕೊಟ್ಟಿದೆ. ಈದ್ಗಾ ಮುಚ್ಚಿಲ್ಲ, ಅಲ್ಲಿ ಪ್ರಾರ್ಥನೆಗೆ ಅವಕಾಶಗಳಿದೆ ಎಂದು ಸರಕಾರದ ಪರ ವಕೀಲ ಮುಕುಲ್ ರೋಹಟಗಿ ಹೇಳಿದರು. ಯಾರೂ ಮಾಲೀಕರು ಇಲ್ಲದಿದ್ದರೆ ರಾಜ್ಯವೇ ಸರ್ಕಾರವೇ ಮಾಲೀಕ. ಈದ್ಗಾ ಮತ್ತು ಸಮಾಧಿಯನ್ನು ಮಧ್ಯಂತರದಲ್ಲಿ ಬಳಸಲಾಗುತ್ತದೆ. ಬಿಬಿಎಂಪಿ ಪರವಾಗಿಗೂ ಮಾಲಿಕತ್ವ ಇಲ್ಲ. ಮುಸ್ಲಿಮರ ಪರವಾಗಿಯೂ ಮಾಲಿಕತ್ವ ಇಲ್ಲ ಎಂದು ಕೋರ್ಟ್ ಹೇಳಿದೆ. 1987 ನಿಂದಲೂ ಪಹಣಿಯಲ್ಲಿ ಸರ್ಕಾರಿ ಆಸ್ತಿ ಎಂದು ದಾಖಲೆಗಳಿದೆ.

ಕಂದಾಯ ಮತ್ತು ಬಿಬಿಎಂಪಿ ದಾಖಲೆಗಳಲ್ಲಿ ಜಮೀನು ಆಟದ ಮೈದಾನ ಎಂದು ನಮೂದಿಸಲಾಗಿದೆ. 200 ವರ್ಷಗಳಿಂದ ಮಕ್ಕಳ ಆಟದ ಮೈದಾನಾಗಿದೆ. ಇದು ಸರ್ಕಾರಿ ಭೂಮಿ ಎಂದು ಗುರುತಿಸಲಾಗಿದೆ ಎಂದು ರೋಹಟಗಿ ವಾದ ಮಾಡಿದರು. ಈ ಹಿಂದೆ ಯಾವಾಗಲಾದರೂ ಗಣೇಶ ಉತ್ಸವ ಆಚರಣೆಗೆ ಸರಕಾರ ಆದೇಶ ನೀಡಿತ್ತಾ ಕೋರ್ಟ್ ಪ್ರಶ್ನಿಸಿದ್ದು, ಈ ಹಿಂದೆ ಸರಕಾರವಾಗಲಿ, ಬಿಬಿಎಂಪಿ ಇಂತಹ ಆದೇಶ ನೀಡಿರಲಿಲ್ಲ ಎಂದು ಮುಕುಲ್ ಹೇಳಿದರು.

ವಕ್ಛ್ ಬೋರ್ಡ್ ಪರ ಕಪಿಲ್ ಸಿಬಲ್ ವಾದ ಮಂಡಿಸಿದ್ದು, ಪಾಲಿಕೆಯು ತಾನು ಮಾಲೀಕ ಎಂಬುದನ್ನು ಸಾಬೀತುಪಡಿಸಲು ವಿಫಲವಾಗಿದೆ. ವಕ್ಛ್ ಬೋರ್ಡ್ ಯಾವಾಗಲೂ ಇದರ ಮಾಲೀಕ ಎಂದು ಹೇಳಿದರು. ಕರ್ನಾಟಕ ಹೈಕೋರ್ಟ್​ ಆದೇಶಕ್ಕೆ ತಡೆ ಕೋರಿದ್ದ ವಕ್ಫ್ ಬೋರ್ಡ್,​ ಚಾಮರಾಜಪೇಟೆ ಮೈದಾನ 200 ವರ್ಷಗಳಿಂದ ವಕ್ಫ್​ ಆಸ್ತಿಯಾಗಿದೆ. 1954ರಲ್ಲಿ ವಕ್ಫ್​ ಬೋರ್ಡ್​ ಆಸ್ತಿ ಎಂದು ಘೊಷಣೆ ಮಾಡಲಾಗಿದೆ. ಆದರೆ 2022ರಲ್ಲಿ ಈದ್ಗಾ ಮೈದಾನದ ಬಗ್ಗೆ ಪ್ರಶ್ನೆ ಮಾಡಲಾಗುತ್ತಿದೆ. ವಕ್ಫ್​ ಬೋರ್ಡ್​ ಆಸ್ತಿ ಎಂದು ನೋಟಿಫೀಕೇಷನ್​ ಕೂಡ ಆಗಿದೆ. ಈದ್ಗಾ ಮೈದಾನದಲ್ಲಿ ಸಾಂಸ್ಕೃತಿಕ, ಧಾರ್ಮಿಕ ಚಟುವಟಿಕೆಗೆ ಅವಕಾಶ ನೀಡಿದ್ದು, ಹೈಕೋರ್ಟ್ ಆದೇಶಕ್ಕೆ ತಡೆ ನೀಡುವಂತೆ ವಕೀಲ ಸಿಬಲ್​ ಮನವಿ ಮಾಡಿದರು.

ಮುಸ್ಲಿಂ ಸಮುದಾಯ ಈ ಮೈದಾನವನ್ನು ಪ್ರಾರ್ಥನೆಗೆ ಬಳಸುತ್ತಿದೆ. ವರ್ಷದಲ್ಲಿ ಎರಡು ಹಬ್ಬಗಳನ್ನು ಮೈದಾನದಲ್ಲಿ ಆಚರಿಸಲಾಗುತ್ತದೆ. ಓಪನ್ ಲ್ಯಾಂಡ್​ ಅಂತ ಇದನ್ನು ಬಳಸಲು ಸಾಧ್ಯವಿಲ್ಲ. ವಕ್ಫ್​ ಬೋರ್ಡ್​ಗೆ ಸೇರಿದ ಆಸ್ತಿ ಎಂಬುದಕ್ಕೆ ಎಲ್ಲಾ ದಾಖಲೆಗಳು ಇವೆ. ಮೈದಾನದಲ್ಲಿ ಎಲ್ಲಾ ಸಮುದಾಯದ ಮಕ್ಕಳು ಆಟವಾಡ್ತಾರೆ. ಹಿಂದೂ ಪರ ಸಂಘಟನೆಗಳು ಈದ್ಗಾ ಗೋಡೆ ಕೆಡವಿ ಹಾಕ್ತಿವಿ ಎಂದು ಬೆದರಿಸುತ್ತಾರೆ. ಬಾಬರಿ ಮಸೀದಿ ರೀತಿಯಲ್ಲಿ ಒಡೆಯುವ ಬೆದರಿಕೆ ಹಾಕಿದ್ದಾರೆ ಎಂದು ಕಪಿಲ್ ಸಿಬಲ್ ಅವರು ವಾದಮಂಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.  

Published On - 6:24 pm, Tue, 30 August 22

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ