ಅನುಮತಿ ಪಡೆಯದೆ ರಸ್ತೆ ಅಗೆದರೆ ಬೀಳುತ್ತೆ FIR; ಬೆಸ್ಕಾಂ, ಜಲಮಂಡಳಿ ನಿರ್ಲಕ್ಷ್ಯಕ್ಕೆ ಕಡಿವಾಣ ಹಾಕಲು ಮುಂದಾದ ಬಿಬಿಎಂಪಿ

ನಗರದಲ್ಲಿ ದಿನದಿಂದ ದಿನಕ್ಕೆ ರಸ್ತೆ ಗುಂಡಿಗಳಿಂದ ಅಪಘಾತಗಳು ಹೆಚ್ಚಾಗುತ್ತಿವೆ. ಪಾಲಿಕೆ ವ್ಯಾಪ್ತಿಯಲ್ಲಿ ಅನೇಕ ಕಡೆ ಅನುಮತಿ ಪಡೆಯದೇ ಬೇಕಾಬಿಟ್ಟಿಯಾಗಿ ರಸ್ತೆ ಅಗೆದು ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿದೆ. ಹೀಗಾಗಿ ಇನ್ಮುಂದೆ ಜಲಮಂಡಳಿ, ಬೆಸ್ಕಾಂ ರಸ್ತೆ ಅಗೆದು ಕೆಲಸ ಆರಂಭಿಸಲು ಬಿಬಿಎಂಪಿ ಅನುಮತಿ ತೆಗೆದುಕೊಳ್ಳಬೇಕು.

ಅನುಮತಿ ಪಡೆಯದೆ ರಸ್ತೆ ಅಗೆದರೆ ಬೀಳುತ್ತೆ FIR; ಬೆಸ್ಕಾಂ, ಜಲಮಂಡಳಿ ನಿರ್ಲಕ್ಷ್ಯಕ್ಕೆ ಕಡಿವಾಣ ಹಾಕಲು ಮುಂದಾದ ಬಿಬಿಎಂಪಿ
ಬಿಬಿಎಂಪಿ
Follow us
TV9 Web
| Updated By: ಆಯೇಷಾ ಬಾನು

Updated on:Feb 02, 2022 | 1:08 PM

ಬೆಂಗಳೂರು: ಇನ್ಮುಂದೆ ಯಾರೆ ರಸ್ತೆ ಅಗೆಯಬೇಕಾದ್ರು ಬಿಬಿಎಂಪಿ(BBMP) ಅನುಮತಿ ಪಡೆಯಬೇಕಾಗಿರುವುದು ಕಡ್ಡಾಯ. ಏಕೆಂದರೆ ಅನುಮತಿ ಪಡೆಯದೆ ರಸ್ತೆ ಅಗೆದರೆ FIR ಪ್ರಕರಣ ದಾಖಲಿಸುವಂತೆ ಬಿಬಿಎಂಪಿ ಸೂಚಿಸಿದೆ. ಬೆಸ್ಕಾಂ,(BESCOM) ಜಲಮಂಡಳಿ(Bangalore Water Supply and Sewerage Board) ಕೂಡ ಬಿಬಿಎಂಪಿ ಅನುಮತಿ ಪಡೆಯಬೇಕು. ಇಲ್ಲ ಅಂದ್ರೆ ಕೇಸ್ ಪಕ್ಕ. ಪೋಲಿಸ್ ಠಾಣೆಯಲ್ಲಿ ಬೆಸ್ಕಾ, ಜಲಮಂಡಳಿ ವಿರುದ್ಧ ದೂರು ದಾಖಲಿಸಲು ಎಂಜಿನಿಯರ್ಗಳಿಗೆ ಪಾಲಿಕೆ ಸೂಚಿಸಿದೆ.

ನಗರದಲ್ಲಿ ದಿನದಿಂದ ದಿನಕ್ಕೆ ರಸ್ತೆ ಗುಂಡಿಗಳಿಂದ ಅಪಘಾತಗಳು ಹೆಚ್ಚಾಗುತ್ತಿವೆ. ಪಾಲಿಕೆ ವ್ಯಾಪ್ತಿಯಲ್ಲಿ ಅನೇಕ ಕಡೆ ಅನುಮತಿ ಪಡೆಯದೇ ಬೇಕಾಬಿಟ್ಟಿಯಾಗಿ ರಸ್ತೆ ಅಗೆದು ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿದೆ. ಹೀಗಾಗಿ ಇನ್ಮುಂದೆ ಜಲಮಂಡಳಿ, ಬೆಸ್ಕಾಂ ರಸ್ತೆ ಅಗೆದು ಕೆಲಸ ಆರಂಭಿಸಲು ಬಿಬಿಎಂಪಿ ಅನುಮತಿ ತೆಗೆದುಕೊಳ್ಳಬೇಕು. ಕಾಮಗಾರಿ ಮುಗಿದ ಬಳಿಕ ಕೆಲಸ ಪೂರ್ಣವಾದ ಬಗ್ಗೆ ಪ್ರಮಾಣ ಪತ್ರವನ್ನ ಬಿಬಿಎಂಪಿಗೆ ನೀಡಬೇಕು ಎಂದು ಖಡಕ್ ಆಗಿ ಸೂಚಿಸಿದೆ. ಪಾಲಿಕೆ ಅನುಮತಿ ಪಡೆಯದೇ ಕೆಲವು ಕಡೆ ಬೆಸ್ಕಾಂ ಒಎಸ್ ಸಿ ಕೇಬಲ್ ಅಳವಡಿಸುತ್ತಿದ್ದು ಅಗೆದ ನೆಲವನ್ನ ಸರಿಯಾಗಿ ಮುಚ್ಚುತ್ತಿಲ್ಲ. ಅಲ್ಲದೆ ಬಿಬಿಎಂಪಿಯ 110 ಹಳ್ಳಿಗಳಲ್ಲಿ ರಸ್ತೆ ಅಗೆಯಲಾಗಿದೆ. ಜಲಮಂಡಳಿ ರಸ್ತೆ ಅಗೆದು ಮತ್ತೆ ದುರಸ್ತಿ ಮಾಡಿಲ್ಲ. ಹೀಗಾಗಿ ರಸ್ತೆ ಗುಂಡಿಗೆ ಜನರು ಬಲಿಯಾಗುತ್ತಿದ್ದಾರೆ. ಪ್ರತಿ ಬಾರಿಯೂ ಬಿಬಿಎಂಪಿಯನ್ನೇ ದೂರಲಾಗುತ್ತಿದೆ. ಹೀಗಾಗಿ ಬೆಸ್ಕಾಂ, ಜಲಮಂಡಳಿ ವಿರುದ್ಧ ಕ್ರಮಕ್ಕೆ ಚಿಂತನೆ ನಡೆಸಿದ್ದು ಪ್ರಕರಣ ದಾಖಲಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದೆ.

ನಿಯಮಗಳನ್ನು ಪಾಲಿಸದಿದ್ದರೆ ಪ್ರಕರಣ ದಾಖಲಿಸುತ್ತೇವೆ ಬೆಂಗಳೂರಿನಲ್ಲಿ ರಸ್ತೆ ಅಗೆಯಲು ಅನುಮತಿ ಪಡೆಯಬೇಕು. ಬೆಸ್ಕಾಂ, ಜಲಮಂಡಳಿ ಅರ್ಜಿಯನ್ನು ಸಲ್ಲಿಸಬೇಕು. ಅನುಮತಿ ಪಡೆಯದೆ ರಸ್ತೆ ಗುಂಡಿಗಳನ್ನು ತೆಗೆಯಲಾಗಿದೆ. ಇನ್ನುಮುಂದೆ ಅನುಮತಿ ಪಡೆಯದೆ ರಸ್ತೆ ಅಗೆದರೆ ಕ್ರಮ ಕೈಗೊಳ್ಳಲಾಗುತ್ತೆ. ನಮ್ಮ ಅಧಿಕಾರಿಗಳಿಗೆ ಈಗಾಗಲೇ ಮಾಹಿತಿ ನೀಡಿದ್ದೇವೆ. ಅಧಿಕಾರಿಗಳನ್ನು ಹೊಣೆ ಮಾಡುವುದಾಗಿ ಸೂಚಿಸಿದ್ದೇನೆ. ನಿಯಮಗಳನ್ನು ಪಾಲಿಸದಿದ್ದರೆ ಪ್ರಕರಣ ದಾಖಲಿಸುತ್ತೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.

ಮಾರ್ಚ್ ಒಳಗೆ ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಲು ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಬೆಂಗಳೂರು: ನಗರ ಅಭಿವೃದ್ಧಿ ಸಂಬಂಧ ಸಿಎಂ ಬೊಮ್ಮಾಯಿ (Basavaraj Bommai) ನೇತೃತ್ವದಲ್ಲಿ ಜ.2ರಂದು ಸಭೆ ನಡೆಯಿತು. ಸಭೆಯಲ್ಲಿ ನಗರದಲ್ಲಿ ರಸ್ತೆ ಗುಂಡಿ ಮುಚ್ಚಲು ಸಿಎಂ ಸೂಚನೆ ನೀಡಿದ್ದಾರೆ. ಮಾರ್ಚ್ ಒಳಗೆ ರಸ್ತೆ ಗುಂಡಿ ಮುಚ್ಚಬೇಕು. ತುಂಬಾ ಕಳಪೆಯಾಗಿವೆ ಎಂಬ ಆರೋಪಗಳು ಹೆಚ್ಚಾಗುತ್ತಿವೆ. 40 ಪರ್ಸೆಂಟ್ ಕಮಿಷನ್ ಎಂಬ ದೂರುಗಳು ಬರುತ್ತಿವೆ. ಇದೆಲ್ಲ ಆಗಬಾರದು ಆದಷ್ಟು ಬೇಗ ಗುಂಡಿಗಳನ್ನ ಮುಚ್ಚಿಸಿ ಅಂತ ಅಧಿಕಾರಿಗಳಿಗೆ ಬೊಮ್ಮಾಯಿ ಹೇಳಿದ್ದಾರೆ.

ಇನ್ನು ಸಭೆಯಲ್ಲಿ ಮಳೆ ಹಾನಿಯ ಅನಾಹುತಗಳ ಬಗ್ಗೆ ಪ್ರಸ್ತಾಪ ಮಾಡಲಾಯಿತು. ಈ ವೇಳೆ ರಾಜಕಾಲುವೆ ಒತ್ತುವರಿದಾರರಿಗೆ ಬಿಸಿ ಮುಟ್ಟಿಸಲು ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರು ನಗರದಲ್ಲಿ ಒತ್ತುವರಿದಾರರ ಹಾವಳಿ ಹೆಚ್ಚಾಗಿದೆ. ಇದರ ಬಗ್ಗೆ ಹೆಚ್ಚು ಗಮನಹರಿಸಬೇಕು. ಮಳೆ ಬಂದ್ರೆ ಸಾಕಷ್ಟು ಸಮಸ್ಯೆಗಳಾಗುತ್ತವೆ. ನೀರು ಸರಾಗವಾಗಿ ಹರಿಯಲು ಒತ್ತುವರಿ ತೆರವು ಮಾಡಿ. ರಾಜಕಾಲುವೆ ಒತ್ತುವರಿ ತೆರವು ಬಗ್ಗೆ ಗಮನಹರಿಸಿ. ರಾಜಕಾಲುವೆಗಳಲ್ಲಿ ಹೂಳೆತ್ತುವ ಕಾರ್ಯ ನಡೆಯಬೇಕು. ರಸ್ತೆ ಗುಂಡಿ ಮುಚ್ಚುವ ಕಾರ್ಯ ಬೇಗ ಆಗಬೇಕು ಅಂತ ಅಧಿಕಾರಿಗಳಿಗೆ ತಿಳಿಸಿದರು.

ಇದನ್ನೂ ಓದಿ: ಮಾರ್ಚ್ ಒಳಗೆ ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಲು ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

Published On - 11:42 am, Wed, 2 February 22