ಬನ್ನೇರುಘಟ್ಟ ಪ್ರದೇಶದಲ್ಲಿ ಹೆದ್ದಾರಿ ಬೇಡ ಎಂಬ ಮನವಿಗೆ ಒಪ್ಪಿದ ಕೇಂದ್ರ ಸಚಿವ ನಿತಿನ್ ಗಡ್ಕರಿ: ಸಿಎಂ ಬೊಮ್ಮಾಯಿ

ಬನ್ನೇರುಘಟ್ಟ ಪ್ರದೇಶದಲ್ಲಿ ಹೆದ್ದಾರಿ ಬರುವುದು ಬೇಡ ಎಂದು ಹೇಳಿದ್ದೇವೆ. ಅದನ್ನ ಕೇಂದ್ರ ಸಾರಿಗೆ ಸಚಿವರು ಒಪ್ಪಿದ್ದಾರೆ. ರಾಜ್ಯದ ಹಲವು ನಗರದಲ್ಲಿ ರೈಲ್ವೆ ಅಂಡರ್ ಪಾಸ್, ಓವರ್ ಬ್ರಿಡ್ಜ್ ನಿರ್ಮಾಣ ಆಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬನ್ನೇರುಘಟ್ಟ ಪ್ರದೇಶದಲ್ಲಿ ಹೆದ್ದಾರಿ ಬೇಡ ಎಂಬ ಮನವಿಗೆ ಒಪ್ಪಿದ ಕೇಂದ್ರ ಸಚಿವ ನಿತಿನ್ ಗಡ್ಕರಿ: ಸಿಎಂ ಬೊಮ್ಮಾಯಿ
ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Edited By: Rakesh Nayak Manchi

Updated on: Jan 06, 2023 | 6:56 AM

ಬೆಂಗಳೂರು: ಬನ್ನೇರುಘಟ್ಟ (Bannerghatta) ಪ್ರದೇಶದಲ್ಲಿ ಹೆದ್ದಾರಿ ಬೇಡವೆಂಬ ಮನವಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ (Nitin Gadkari) ಅವರು ಒಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಕೇಂದ್ರ ಸಚಿವರೊಂದಿಗಿನ ಸಭೆಯ ಬಳಿಕ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ (National Highway) ಹೊರತು ಪಡಿಸಿ ರೈಲ್ವೆ ಅಂಡರ್ ಬ್ರಿಡ್ಜ್, ಓವರ್ ಬ್ರಿಡ್ಜ್ ನಿರ್ಮಾಣಕ್ಕೆ 1000 ಕೋಟಿ ರೂಪಾಯಿ ಕೊಡಲು ಒಪ್ಪಿದ್ದಾರೆ ಎಂದರು. ಅಲ್ಲದೆ, ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಫ್ಲೈ ಓವರ್ (Flyover) ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದರು.

ಕೇಂದ್ರ ಸಚಿವರೊಂದಿಗೆ ಮಹತ್ವದ ಸಭೆ ನಡೆಸಲಾಗಿದೆ. ಸಚಿವರು ಎಲ್ಲ ಕಡೆ ಪರಿಶೀಲನೆ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಗಳು 46,800 ಕೋಟಿ ಕಾಮಗಾರಿ ನಡೆಯುತ್ತಿದೆ. ಇನ್ನು 1 ಲಕ್ಷ ಕೋಟಿಯ ಕಾಮಗಾರಿ ನಡೆಯಬೇಕು. ಫಾಸ್ಟ್ ಟ್ರಾಕ್​​ನಲ್ಲಿ ಪೂರೈಸಲು ಚರ್ಚೆ ಮಾಡಿದ್ದೇವೆ. ಬನ್ನೇರುಘಟ್ಟ ಪ್ರದೇಶದಲ್ಲಿ ಹೆದ್ದಾರಿ ಬರುವುದು ಬೇಡ ಎಂದು ಹೇಳಿದ್ದೇವೆ. ಅದನ್ನ ಒಪ್ಪಿದ್ದಾರೆ. ರಾಜ್ಯದ ಹಲವು ನಗರದಲ್ಲಿ ರೈಲ್ವೆ ಅಂಡರ್ ಪಾಸ್, ಓವರ್ ಬ್ರಿಡ್ಜ್ ನಿರ್ಮಾಣ ಆಗಲಿದೆ ಎಂದರು.

ಇದನ್ನೂ ಓದಿ: Nitin Gadkari Karnataka Visit: ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ವೇ ಕಾಮಗಾರಿ ವೀಕ್ಷಿಸಿದ ನಿತಿನ್ ಗಡ್ಕರಿ

ಮೆಟ್ರೋದಿಂದ ಬೇರೆ ಕಡೆ ಹೋಗಲು ಡಬ್ಬಲ್ ಡೆಕ್ಕರ್ ಬಸ್ ಹಾಗೂ ಮೋನೊ ರೈಲು ನಿರ್ಮಾಣ ಸಂಬಂಧ ಸಭೆಯಲ್ಲಿ ಚರ್ಚೆ ಆಗಿದೆ. ರಿಂಗ್ ರಸ್ತೆ ನಿರ್ಮಾಣಕ್ಕೂ ತೀರ್ಮಾನ ಮಾಡಲಾಗಿದೆ. ಶಿರಾಡಿಘಾಟ್‌ನಲ್ಲಿ 4 ಲೈನ್ ಮಾಡಲು ತೀರ್ಮಾನ ಮಾಡಲಾಗಿದೆ. 4 ಲೈನ್ ನಿರ್ಮಾಣ ಕಾಮಗಾರಿಗೆ ಮಾರ್ಚ್‌ನಲ್ಲಿ ಚಾಲನೆ ನೀಡುತ್ತೇವೆ. ಬೆಂಗಳೂರು-ಮೈಸೂರು ರಸ್ತೆ ಫೆಬ್ರವರಿ, ಮಾರ್ಚ್‌ನಲ್ಲಿ ಉದ್ಘಾಟನೆ ಮಾಡಲಾಗುವುದು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:56 am, Fri, 6 January 23

TV9 Web

TV9 Kannada

Read More
Loading...
Unable to load recommendations.
Follow Us