ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಇನ್ಮುಂದೆ ಮೊಬೈಲ್ ಬಳಸುವಂತಿಲ್ಲ: ಸರ್ಕಾರ ಆದೇಶ
ಒಂದು ವರ್ಷದ ಮನವಿಗೆ ಇದೀಗ ಸರ್ಕಾರ ಸ್ಪಂದಿಸಿದ್ದು, ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಇನ್ಮುಂದೆ ಮೊಬೈಲ್ ಫೋನ್ ಬಳಕೆ ನಿಷೇಧಿಸಿ ಸುತ್ತೋಲೆ ಹೊರಡಿಸಿದೆ. ಸರ್ಕಾರದ ನಿರ್ಧಾರವನ್ನು ಹಿಂದೂ ದೇಗುಲಗಳ ಅರ್ಚಕರ ಒಕ್ಕೂಟ ಸ್ವಾಗತಿಸಿದೆ.
ಬೆಂಗಳೂರು, ಜುಲೈ 17: ರಾಜ್ಯದ ದೇವಸ್ಥಾನ (temples) ಗಳಲ್ಲಿ ಇನ್ಮುಂದೆ ಮೊಬೈಲ್ ಫೋನ್ ಬಳಕೆ ನಿಷೇಧಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ದೇವಸ್ಥಾನಗಳಲ್ಲಿ ಮೊಬೈಲ್ ನಿಷೇಧಿಸುವಂತೆ ಅಖಿಲ ಕರ್ನಾಟಕ ಹಿಂದೂ ದೇಗುಲಗಳ ಅರ್ಚಕರ ಒಕ್ಕೂಟ ಮನವಿಯಂತೆ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಮೊಬೈಲ್ ನಿಷೇಧಿಸಲಾಗಿದೆ. ಒಂದು ವರ್ಷದಿಂದ ಮೊಬೈಲ್ ಬಳಕೆ ನಿಷೇಧಿಸುವಂತೆ ಮನವಿ ಮಾಡಿದ್ದ ಅರ್ಚಕರ ಒಕ್ಕೂಟಕ್ಕೆ ಸ್ಪಂದಿಸಿ ಇದೀಗ ಸುತ್ತೋಲೆ ಹೊರಡಿಸಿದೆ.
ಸದ್ಯ ಸರ್ಕಾರದ ನಿರ್ಧಾರವನ್ನು ಹಿಂದೂ ದೇಗುಲಗಳ ಅರ್ಚಕರ ಒಕ್ಕೂಟ ಸ್ವಾಗತಿಸಿದೆ. ಇನ್ಮುಂದೆ ದೇಗುಲಗಳ ಆವರಣದಲ್ಲಿ ಮೊಬೈಲ್ ಸೂಚನಾ ಫಲಕಹಾಕುವಂತೆ ಸೂಚಿಸಲಾಗಿದೆ. ಜೊತೆಗೆ ದೇವಸ್ಥಾನಕ್ಕೆ ಬರುವವರು ಕಡ್ಡಾಯವಾಗಿ ಮೊಬೈಲ್ ಸ್ಚಿಚ್ ಆಫ್ ಮಾಡಿ ದರ್ಶನ ಮಾಡುವಂತೆ ಆದೇಶ ನೀಡಲಾಗಿದೆ.
ಇದನ್ನೂ ಓದಿ: ಗದಗ: ಸಿಂಜೆಂಟಾ ವಿರುದ್ಧ ರೈತರ ವಿನೂತನ ಪ್ರತಿಭಟನೆ, ಸೂರ್ಯಕಾಂತಿ ಎಸ್ಬಿ-293 ಹೈಬ್ರಿಡ್ ಬೀಜ ಮಾರಾಟಕ್ಕೆ ತಡೆ
ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ, ಮೊಬೈಲ್ ಫೋನ್ ಬಳಕೆ ಹೆಚ್ಚಾಗಿದೆ. ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಫೋನ್ ಬಳಕೆಯ ಶಬ್ದಗಳಿಂದ ದೇವಾಲಯದ ಸಿಬ್ಬಂದಿಗಳಿಗೂ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೂ ಏಕ ಮನಸ್ಸಿನಿಂದ ಧ್ಯಾನ ಪೂಜಾದಿಗಳನ್ನು ನಡೆಸಲು ತೊಂದರೆಯಾಗುತ್ತಿದೆ.
ಇದನ್ನೂ ಓದಿ: ಹಣಕ್ಕಾಗಿ ಹುದ್ದೆಯಲ್ಲಿ 500 ಕೋಟಿ ರೂಪಾಯಿ ಡೀಲ್: ಹೆಚ್ಡಿ ಕುಮಾರಸ್ವಾಮಿ ಆರೋಪ
ಈ ಹಿನ್ನೆಲೆಯಲ್ಲಿ, ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ದೇವರ ದರ್ಶನದ ಸಮಯದಲ್ಲಿ ತಮ್ಮ ಮೊಬೈಲ್ ಪೋನ್‌ಗಳನ್ನು ಸ್ಕೆಚ್ ಆಫ್ ಮಾಡಿ, ದೇವರ ದರ್ಶನ ಮಾಡುವಂತೆ ಸೂಚಿಸಲಾಗಿದೆ. ಜೊತೆಗೆ ದೇವಾಲಯಗಳ ಸೂಚನಾ ಫಲಕಗಳಲ್ಲಿ ಅಗತ್ಯ ಸೂಚನೆಗಳನ್ನು ಪ್ರಕಟಿಸುವಂತೆ ತಿಳಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.