ಪ್ರೊ. ಸಿಎನ್​ಆರ್​ ರಾವ್‌ಗೆ ಯಾವುದೇ ನೋಟಿಸ್ ಜಾರಿ ಮಾಡಿಲ್ಲ: ಚುನಾವಣಾಧಿಕಾರಿ ಸ್ಪಷ್ಟನೆ

ಭಾರತ ರತ್ನ ಪ್ರೊ. ಸಿಎನ್​​ಆರ್ ರಾವ್ ಅವರಿಗೆ ಮತದಾರರ ಪಟ್ಟಿ ನೋಟಿಸ್ ಜಾರಿ ಮಾಡಿಲ್ಲ ಎಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ನೋಟಿಸ್ ನೀಡಲಾಗಿದೆ ಎಂಬ ಸುದ್ದಿ ಸಂಪೂರ್ಣ ಸತ್ಯಕ್ಕೆ ದೂರವಾದದ್ದು ಎಂದು ಚುನಾವಣಾ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಪ್ರೊ. ಸಿಎನ್​ಆರ್​ ರಾವ್‌ಗೆ ಯಾವುದೇ ನೋಟಿಸ್ ಜಾರಿ ಮಾಡಿಲ್ಲ: ಚುನಾವಣಾಧಿಕಾರಿ ಸ್ಪಷ್ಟನೆ
ಪ್ರೊ.ಸಿಎನ್​ಆರ್​​ ರಾವ್
Image Credit source: Getty images
Edited By:

Updated on: Sep 09, 2026 | 3:43 PM

ಬೆಂಗಳೂರು, ಸೆಪ್ಟೆಂಬರ್​ 09: ಭಾರತ ರತ್ನ ಪುರಸ್ಕೃತ ಖ್ಯಾತ ವಿಜ್ಞಾನಿ ಪ್ರೊ. ಸಿಎನ್​ಆರ್​​ ರಾವ್ ಅವರಿಗೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ ಮಾಡಲಾಗಿದೆ ಎಂಬ ಆರೋಪವನ್ನು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿಗಳು ತಳ್ಳಿಹಾಕಿದ್ದಾರೆ. ‘ಈ ಸುದ್ದಿ ಸಂಪೂರ್ಣ ಸುಳ್ಳು. ಅವರಿಗೆ ಯಾವುದೇ ರೀತಿಯ ನೋಟಿಸ್ ನೀಡಿಲ್ಲ’ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಮನೆಗೆ ತೆರಳಿ ಎನ್ಯುಮರೇಷನ್ ಫಾರ್ಮ್ ಭರ್ತಿ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಪ್ರೊ. ಸಿಎನ್​ಆರ್​​ ರಾವ್ ಅವರ ಮನೆಗೆ ಖುದ್ದು ಭೇಟಿ ನೀಡಿ, ಅವರ ಕುಟುಂಬಕ್ಕೆ ಎನ್ಯುಮರೇಷನ್ ಫಾರ್ಮ್ ವಿತರಿಸಿದ್ದಾರೆ. ರಾಜ್ಯ SVEEP ನೋಡಲ್ ಅಧಿಕಾರಿ ಹಾಗೂ ಬೆಂಗಳೂರು ಪಶ್ಚಿಮ ಪಾಲಿಕೆ ಆಯುಕ್ತರ ಸಮ್ಮುಖದಲ್ಲೇ ಈ ಗಣತಿ ನಮೂನೆಯನ್ನು ಭರ್ತಿ ಮಾಡಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿ ಮಾಹಿತಿ ನೀಡಿದ್ದಾರೆ.

ಪ್ರೊ. ಸಿಎನ್​ಆರ್​​ ರಾವ್​ ಅವರ ಹೆಸರಿನಲ್ಲಿ ವ್ಯತ್ಯಾಸ

ಈ ಹಿಂದಿನ 2002ರ ಮತದಾರರ ಪಟ್ಟಿಯಲ್ಲಿ ಅವರ ಹೆಸರು ‘ರಾಮ’ ಎಂದು ನಮೂದಾಗಿತ್ತು. ಆದರೆ ಪ್ರಸ್ತುತ ಮತದಾರರ ಪಟ್ಟಿಯಲ್ಲಿ ‘ಪ್ರೊಫೆಸರ್ ಸಿಎನ್​ರಾವ್ ಎಂ’ ಎಂದು ನೋಂದಣಿಯಾಗಿದೆ. ಈ ರೀತಿ ಹೆಸರಿನಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ.

ಅಂತಿಮ ಮತದಾರರ ಪಟ್ಟಿಗೆ ಸೇರ್ಪಡೆ

‘ಯಾವುದೇ ನೋಟಿಸ್ ನೀಡದೆಯೇ ಅವರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಉಳಿಸಿಕೊಳ್ಳಲು ಮತ್ತು ಸೇರಿಸಲು BLO ಶಿಫಾರಸು ಮಾಡಿದ್ದಾರೆ. ಈಗಾಗಲೇ ಕರಡು ಮತದಾರರ ಪಟ್ಟಿಯಲ್ಲಿ ಅವರ ಹೆಸರು ಸೇರ್ಪಡೆಯಾಗಿದ್ದು, ಅಂತಿಮ ಮತದಾರರ ಪಟ್ಟಿಯಲ್ಲೂ ಹೆಸರು ಅಧಿಕೃತವಾಗಿ ಉಳಿಯಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆ ಮೂಲಕ ಪ್ರೊ ಸಿಎನ್​​ ಆರ್ ರಾವ್ ಅವರಿಗೆ ನೋಟಿಸ್ ನೀಡಲಾಗಿದೆ ಎಂಬ ಸುದ್ದಿ ಸಂಪೂರ್ಣ ಸತ್ಯಕ್ಕೆ ದೂರವಾದದ್ದು’ ಎಂದು ಚುನಾವಣಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಸಾಮಾನ್ಯವಾಗಿ ಕೇಳಲಾಗುವ ಪ್ರಶ್ನೆಗಳು

ಪ್ರಶ್ನೆ 1: ಪ್ರೊ. ಸಿ.ಎನ್.ಆರ್. ರಾವ್​ ಯಾರು?

ಉತ್ತರ: ಪ್ರೊ ಸಿಎನ್​​ಆರ್ ರಾವ್ ಅವರು ರಸಾಯಶಾಸ್ತ್ರ ವಿಜ್ಞಾನಿ ಮತ್ತು ಭಾರತ ರತ್ನ ಪುರಸ್ಕೃತರು.

ಪ್ರಶ್ನೆ 1: ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ಚುನಾವಣಾ ಆಯೋಗದಿಂದ ನೋಟಿಸ್ ನೀಡಲಾಗಿದೆಯೇ?

ಉತ್ತರ: ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ಯಾವುದೇ ನೋಟಿಸ್ ಜಾರಿ ಮಾಡಿಲ್ಲ ಎಂದು ಚುನಾವಣಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ.

ಪ್ರಶ್ನೆ: ಎಸ್​​ಐಆರ್​ ಎಂದರೇನು?

ಉತ್ತರ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಆಗಿದ್ದು, ಚುನಾವಣಾ ಆಯೋಗ ಕೈಗೊಳ್ಳುವ ಪ್ರಕ್ರಿಯೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:32 pm, Wed, 9 September 26

ಅರುಣ್ ಕುಮಾರ್​ ಆರ್​.

ಅರುಣ್ ಕುಮಾರ್ ಆರ್. ಬೆಂಗಳೂರಿನ ಜ್ಞಾನಭಾರತಿ ವಿವಿಯಲ್ಲಿ ಸಮೂಹ ಸಂವಹನ ಹಾಗೂ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಟಿವಿ9 ಕನ್ನಡದಲ್ಲಿ ಮೆಟ್ರೋ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಜಿಬಿಎ ಹಾಗೂ ನಗರದ ಅಭಿವೃದ್ಧಿ ಕ್ಷೇತ್ರದಲ್ಲಿ ಒಂದು ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಇವರು, ಒಟ್ಟು 2 ವರ್ಷಗಳ ವರದಿಗಾರಿಕೆ ಅನುಭವದೊಂದಿಗೆ ಜನೋಪಯೋಗಿ ವಿಷಯಗಳ ಕುರಿತು ವರದಿ ಮಾಡುತ್ತಿದ್ದಾರೆ.

Read More
Loading...
Unable to load recommendations.
Follow Us