ಮೇಕೆದಾಟು ಯೋಜನೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ, ಅಣ್ಣಾಮಲೈರನ್ನ ಮನವೊಲಿಸುತ್ತೇವೆ; ಸಂಸದ ಡಿ.ವಿ.ಸದಾನಂದ ಗೌಡ

25 ಜನ ಸಂಸದರು ರಾಜ್ಯದ ಜನತೆ ಪರವಾಗಿ ಕೆಲಸ ಮಾಡುತ್ತೇವೆ. ಕುಡಿಯುವ ನೀರು ಪಡೆಯುವುದು ನಮ್ಮ ಹಕ್ಕು. ಮೇಕೆದಾಟು ಅಣೆಕಟ್ಟನ್ನ ಬಿಜೆಪಿ ಮಾಡಿಯೇ ಮಾಡುತ್ತದೆ. 25 ಜನ ಏನ್ ಮಾಡ್ತಿದ್ದಾರೆ ಎಂದು ಕಾಂಗ್ರೆಸ್ಸಿಗರು ಕೇಳುತ್ತಾರೆ.

ಮೇಕೆದಾಟು ಯೋಜನೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ, ಅಣ್ಣಾಮಲೈರನ್ನ ಮನವೊಲಿಸುತ್ತೇವೆ; ಸಂಸದ ಡಿ.ವಿ.ಸದಾನಂದ ಗೌಡ
ಸದಾನಂದ ಗೌಡ
Follow us
TV9 Web
| Updated By: sandhya thejappa

Updated on: Aug 07, 2021 | 1:13 PM

ಬೆಂಗಳೂರು:ಅಣ್ಣಾಮಲೈರಿಂದ (Annamalai) ಮೇಕೆದಾಟು ಡ್ಯಾಂ (Mekedatu Project) ನಿರ್ಮಾಣ ವಿರೋಧಕ್ಕೆ ಪ್ರತಿಕ್ರಿಯಿಸಿದ ಡಿ.ವಿ.ಸದಾನಂದ (DV Sadananda Gowda) ಗೌಡ, ಇಲ್ಲಿ ಅಧಿಕಾರಿಯಾಗಿದ್ದವರು ತಮಿಳುನಾಡಲ್ಲಿ ಬಿಜೆಪಿ ಅಧ್ಯಕ್ಷರಾಗಿದ್ದಾರೆ. ಅವರು ಇಲ್ಲಿದ್ದಾಗ ನಾವು ಆದೇಶಿಸಿ ಕೆಲಸ ಮಾಡಿಸುತ್ತಿದ್ದೆವು. ಅಣ್ಣಾಮಲೈ ಅಲ್ಲಿನ ರಾಜಕೀಯ ಒತ್ತಡಕ್ಕೆ ಮಣಿದು ವಿರೋಧ ವ್ಯಕ್ತಪಡಿಸಿದ್ದಾರೆ. ಅಣ್ಣಾಮಲೈರನ್ನ ಮನವೊಲಿಸುವ ಕೆಲಸವನ್ನ ಮಾಡುತ್ತೇವೆ ಎಂದು ತಿಳಿಸಿದರು.

ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆ ಮಾಡುತ್ತೇವೆ. ಮೇಕೆದಾಟು ಯೋಜನೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಮೇಕೆದಾಟು ಯೋಜನೆ ಮಾಡುವುದರಿಂದ ನೀರು ಇನ್ನಷ್ಟು ಸಂಗ್ರಹ ಮಾಡಬಹುದು. 25 ಜನ ಸಂಸದರು ರಾಜ್ಯದ ಜನತೆ ಪರವಾಗಿ ಕೆಲಸ ಮಾಡುತ್ತೇವೆ. ಕುಡಿಯುವ ನೀರು ಪಡೆಯುವುದು ನಮ್ಮ ಹಕ್ಕು. ಮೇಕೆದಾಟು ಅಣೆಕಟ್ಟನ್ನ ಬಿಜೆಪಿ ಮಾಡಿಯೇ ಮಾಡುತ್ತದೆ. 25 ಜನ ಏನ್ ಮಾಡ್ತಿದ್ದಾರೆ ಎಂದು ಕಾಂಗ್ರೆಸ್ಸಿಗರು ಕೇಳುತ್ತಾರೆ. ಕಾಂಗ್ರೆಸ್ ನಾಯಕರು ನಮ್ಮನ್ನ ಕೇಳಬೇಡಿ. ನನ್ನ ದೆಹಲಿಗೆ ಕಳುಹಿಸಿದ್ದು ರಾಜ್ಯದ ಜನರು. ನಾವು ರಾಜ್ಯದ ಜನರ ಪರವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಬೆಂಗಳೂರಿನಲ್ಲಿ ಸಂಸದ ಡಿ.ವಿ.ಸದಾನಂದಗೌಡ ಅಭಿಪ್ರಾಯಪಟ್ಟರು.

ಕೇಂದ್ರದಲ್ಲಿ ನಡೆಯುತ್ತಿರುವ ವಿದ್ಯಾಮಾನದ ಬಗ್ಗೆ ಗೊಂದಲವಿದೆ. ನಿಜವಾದ ಸಂಗತಿ ತಿಳಿಸುವುದಕ್ಕೆ ನಾವು ಸೇರಿದ್ದೇವೆ. ಸಂಸತ್ ಭವನವನ್ನು ಶ್ರದ್ಧಾಕೇಂದ್ರ ಎಂದು ಕರೆಯುತ್ತೇವೆ. ಕೊರೊನಾ ತಡೆಗೆ ಸರ್ಕಾರ ಕೈಗೊಂಡ ನಿರ್ಧಾರ ಗೊತ್ತಿದೆ. ಭಯೋತ್ಪಾದನೆ ತಡೆ ಬಗ್ಗೆ ಕೂಡ ಚರ್ಚೆ ಮಾಡಬೇಕಿದೆ. ಪಾಕಿಸ್ತಾನ, ಚೀನಾ ದೇಶಗಳು ಸಾಕಷ್ಟು ತೊಂದರೆ ಕೊಡುತ್ತಿವೆ. ಆದರೆ ಸಂಸತ್ತನ್ನು ಅಪವಿತ್ರ ಮಾಡಲು ಕಾಂಗ್ರೆಸ್ ಪ್ಲ್ಯಾನ್ ಮಾಡುತ್ತಿದೆ. ಅಧಿವೇಶನದಲ್ಲಿ ಚರ್ಚೆ ಮಾಡಲು ಕಾಂಗ್ರೆಸ್ ಬಿಡುತ್ತಿಲ್ಲ. ಪಲಾಯನವಾದ ಮಾಡಲು ಕಾಂಗ್ರೆಸ್ ರೆಡಿಯಾಗಿದೆ. ಪ್ರಶ್ನೋತ್ತರ ಕಲಾಪದಲ್ಲಿ ಹಲವು ಚರ್ಚೆಗಳು ನಡೆಯುತ್ತೆ. ಕ್ಷೇತ್ರಗಳ ಸಮಸ್ಯೆ ಬಗ್ಗೆ ಹಲವು ಪ್ರಶ್ನೆಗಳಿರುತ್ತೆ. ಪ್ರಶ್ನೋತ್ತರ ಕಲಾಪಕ್ಕೆ ಕಾಂಗ್ರೆಸ್ ಅವಕಾಶ ನೀಡಲಿಲ್ಲ ಅಂತ ಕೇಂದ್ರದ ಮಾಜಿ ಸಚಿವ ಡಿವಿಎಸ್ ಹೇಳಿಕೆ ನೀಡಿದ್ದಾರೆ.

ದೇಶದಲ್ಲಿ ಕೊರೊನಾದಿಂದ ಆರ್ಥಿಕತೆಗೆ ಹೊಡೆತ ಬಿದ್ದಿದೆ. ನಿರುದ್ಯೋಗ ಹೆಚ್ಚಾಗಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳುವುದಕ್ಕೆ ಚರ್ಚೆ ನಡೆಯುತ್ತಿದೆ. ಪರಿಹಾರ ಕಂಡುಕೊಳ್ಳಲು ಸಂಸತ್ತಿನಲ್ಲಿ ಚರ್ಚೆ ಮಾಡಲಾಗ್ತಿದೆ. ಆದರೆ ಕಾಂಗ್ರೆಸ್ ಪಲಾಯನ ಮಾಡುತ್ತಿದೆ. ಕಾಂಗ್ರೆಸ್ನವರು ಸಂಸತ್ತನ್ನು ಅಪವಿತ್ರಗೊಳಿದ್ದಾರೆ. ವಿಪಕ್ಷಗಳ ಗಲಾಟೆ ಮಧ್ಯೆ 18 ಗಂಟೆ ಕಲಾಪ ನಡೆದಿದೆ. ಗಲಾಟೆ ಮಧ್ಯೆಯೇ ಪ್ರಶ್ನೋತ್ತರ ಕಲಾಪವನ್ನು ನಡೆಸಿದ್ದೇವೆ. ಎಲ್ಲರನ್ನು ಕರೆದು ಪ್ರಧಾನಿ ಮೋದಿ ಸಹಕಾರ ಕೇಳಿದ್ದರು. ಆದರೂ ಕಾಂಗ್ರೆಸ್ ಹಿಟ್ ಆ್ಯಂಡ್ ರನ್ ಮಾಡುತ್ತಿದೆ. ಎಲ್ಲ ವಿಚಾರಗಳ ಬಗ್ಗೆ ಚರ್ಚೆ ಮಾಡಲು ಸರ್ಕಾರ ಸಿದ್ಧವಿದೆ. ಆದರೆ ಕಾಂಗ್ರೆಸ್​ನವರು ಮಾತ್ರ ಸಿದ್ಧರಿಲ್ಲ. ಕಾಂಗ್ರೆಸ್ ದೇಶದ ವ್ಯವಸ್ಥೆ ಹಾಳು ಮಾಡಲು ಯತ್ನಿಸುತ್ತಿದೆ ಅಂತ ಕಾಂಗ್ರೆಸ್ ಪಕ್ಷದ ವಿರುದ್ಧ ಡಿ.ವಿ.ಸದಾನಂದಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ

ಸಿಎಂ ಆದ ಕೂಡಲೆ ದೇವೇಗೌಡರ ಭೇಟಿಯ ಅಗತ್ಯವೇನಿತ್ತು?; ಬೊಮ್ಮಾಯಿ ವಿರುದ್ಧ ಪ್ರೀತಮ್ ಗೌಡ ಅಸಮಾಧಾನ ಸ್ಫೋಟ

ಪೊಲೀಸ್ ಕಸ್ಟಡಿಯಲ್ಲಿದ್ದ ಕಾಂಗೋ ಪ್ರಜೆ ಅನುಮಾನಾಸ್ಪದ ಸಾವು; ಮೃತದೇಹ ಕಾಂಗೋ ಎಂಬೆಸಿಗೆ ಹಸ್ತಾಂತರ

(No one can stop the Mekedatu project said DV Sadananda Gowda)

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ