ಕನ್ನಡ ರಾಜ್ಯೋತ್ಸವ ಸಂಭ್ರಮ: ಬೆಂಗಳೂರಿನ ಕಂಠೀರವ ಕ್ರೀಡಾಂಗಣ ಸುತ್ತಮುತ್ತ ನೋ ಪಾರ್ಕಿಂಗ್

|

Updated on: Nov 01, 2023 | 7:59 AM

Kannada Rajyotsava 2023: ಇಂದು ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ ಹಿನ್ನೆಲೆ ನಗರ ಸಂಚಾರ ಪೊಲೀಸರು ಸುತ್ತಮುತ್ತಲಿನ ಕೆಲವು ರಸ್ತೆಗಳಲ್ಲಿ ವಾಹನ ನಿಲುಗಡೆಗೆ ನಿರ್ಬಂಧ ಹೇರಿದ್ದಾರೆ. ಹಾಗೂ ಸಾರ್ವಜನಿಕರು ಪರ್ಯಾಯ ರಸ್ತೆಗಳನ್ನು ಬಳಸಲು ಮತ್ತು ಕಂಠೀರವ ಕ್ರೀಡಾಂಗಣ ಮತ್ತು ಸುತ್ತಮುತ್ತಲಿನ ರಸ್ತೆಗಳನ್ನು ತಪ್ಪಿಸುವಂತೆ ವಿನಂತಿಸಿದ್ದಾರೆ.

ಕನ್ನಡ ರಾಜ್ಯೋತ್ಸವ ಸಂಭ್ರಮ: ಬೆಂಗಳೂರಿನ ಕಂಠೀರವ ಕ್ರೀಡಾಂಗಣ ಸುತ್ತಮುತ್ತ ನೋ ಪಾರ್ಕಿಂಗ್
ಸಂಗ್ರಹ ಚಿತ್ರ
Follow us on

ಬೆಂಗಳೂರು, ನ.01: 68ನೇ ಕನ್ನಡ ರಾಜ್ಯೋತ್ಸವಕ್ಕೆ (Kannada Rajyotsava 2023) ಇಡೀ ಕರುನಾಡು ಸಿದ್ದವಾಗಿದೆ. ಇಂದು ಕಂಠೀರವ ಕ್ರೀಡಾಂಗಣದಲ್ಲಿ (Kanteerava Stadium) ಕರ್ನಾಟಕ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮ ಇರುವ ಹಿನ್ನೆಲೆ ನಗರ ಸಂಚಾರ ಪೊಲೀಸರು ಸುತ್ತಮುತ್ತಲಿನ ಕೆಲವು ರಸ್ತೆಗಳಲ್ಲಿ ವಾಹನ ನಿಲುಗಡೆಗೆ ನಿರ್ಬಂಧ ಹೇರಿದ್ದಾರೆ (Parking Restrictions). ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಅತಿಥಿಗಳು, ಶಾಲಾ ಮಕ್ಕಳು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.

ಕಸ್ತೂರ್ಬಾ ರಸ್ತೆ, ರಾಜಾ ರಾಮ್ ಮೋಹನ್ ರಾಯ್ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆ, ಮತ್ತು ನೃಪತುಂಗ ರಸ್ತೆಗಳಲ್ಲಿ ಬೆಳಿಗ್ಗೆ 6 ರಿಂದ ಕಾರ್ಯಕ್ರಮ ಮುಗಿಯುವ ವರೆಗೂ ವಾಹನಗಳ ಪಾರ್ಕಿಂಗ್​ಗೆ ಅನುಮತಿ ಇಲ್ಲ. “ಸಾರ್ವಜನಿಕರು ಪರ್ಯಾಯ ರಸ್ತೆಗಳನ್ನು ಬಳಸಲು ಮತ್ತು ಕಂಠೀರವ ಕ್ರೀಡಾಂಗಣ ಮತ್ತು ಸುತ್ತಮುತ್ತಲಿನ ರಸ್ತೆಗಳನ್ನು ತಪ್ಪಿಸುವಂತೆ ವಿನಂತಿಸಿದ್ದಾರೆ” ಈ ಬಗ್ಗೆ ಸಂಚಾರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Kannada Rajyotsava 2023 Live: ಕರ್ನಾಟಕ ರಾಜ್ಯೋತ್ಸವ ಸಂಭ್ರಮ, ರಾಜ್ಯದೆಲ್ಲೆಡೆ ನಾಡಹಬ್ಬ ಆಚರಣೆ

68 ಸಾಧಕರು, 10 ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ರಾಜ್ಯ ಸರ್ಕಾರ ಮಂಗಳವಾರ ಬಿಡುಗಡೆ ಮಾಡಿದೆ. ಸಂಘ ಸಂಸ್ಥೆಗಳು ಹಾಗೂ ವೈಯಕ್ತಿಕವಾಗಿ ಒಟ್ಟು 68 ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ಘೋಷಣೆ ಮಾಡಲಾಗಿದೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಶಿವರಾಜ್ ಎಸ್.ತಂಗಡಗಿ, ಕರ್ನಾಟಕ ಸಂಭ್ರಮ-50ರ ಪ್ರಯುಕ್ತ ವಿಶೇಷವಾಗಿ 10 ಸಂಘ ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಇಸ್ರೋ ಮುಖ್ಯಸ್ಥ ಸೋಮನಾಥ ಅವರಿಗೂ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, 100 ವರ್ಷ ದಾಟಿದ ಇಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ. ಒಬ್ಬರು ದಾವಣಗೆರೆ ಹಾಗೂ ಒಬ್ಬರು ಉತ್ತರ ಕನ್ನಡ ಜಿಲ್ಲೆಯವರಿಗೆ ನೀಡಲಾಗಿದೆ. 13 ಮಹಿಳೆಯರು ಮತ್ತು 54 ಪುರುಷರು ಹಾಗೂ ಮತ್ತು ಒಬ್ಬರು ಮಂಗಳಮುಖಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನ ಘೋಷಿಸಲಾಗಿದ್ದು, ಪ್ರಶಸ್ತಿ ಪಡೆದವರಿಗೆ ರೂ 5 ಲಕ್ಷ ನಗದು ಹಾಗೂ 25 ಗ್ರಾಂ ಚಿನ್ನದ ಪದಕ ನೀಡಲಾಗುವುದು ಎಂದು ಹೇಳಿದ್ದಾರೆ.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ 68ನೇ ರಾಜ್ಯೋತ್ಸವ ಪ್ರಯುಕ್ತ ಇಂದು ಪ್ರಶಸ್ತಿ ಪ್ರಧಾನ ಮಾಡಲಾಗುತ್ತೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓಲದು ಇದರ ಮೇಲೆ ಕ್ಲಿಕ್ ಮಾಡಿ