ಕ್ರಿಮಿನಲ್ ಕೇಸ್ ಎದುರಿಸುತ್ತಿರುವ ವ್ಯಕ್ತಿಯ ಪಾಸ್‌ಪೋರ್ಟ್ ನವೀಕರಿಸಲು ಸಾಧ್ಯವಿಲ್ಲ: ಹೈಕೋರ್ಟ್
ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿರುವವರಿಗೆ ಹೊಸ ಪಾಸ್‌ಪೋರ್ಟ್ ನೀಡುವುದು, ನವೀಕರಣ ಅಥವಾ ಮರು ವಿತರಣೆ ಮಾಡಲು ಸಾಧ್ಯವಿಲ್ಲ ಎಂಬ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯ ನಿಯಮವನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ಎತ್ತಿಹಿಡಿದಿದೆ.
ಬೆಂಗಳೂರು, ಡಿಸೆಂಬರ್ 05: ಕ್ರಿಮಿನಲ್ (Criminal) ಮೊಕದ್ದಮೆ ಎದುರಿಸುತ್ತಿರುವವರಿಗೆ ಹೊಸ ಪಾಸ್‌ಪೋರ್ಟ್ ನೀಡುವುದು, ನವೀಕರಣ ಅಥವಾ ಮರು ವಿತರಣೆ ಮಾಡಲು ಸಾಧ್ಯವಿಲ್ಲ ಎಂಬ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯ ನಿಯಮವನ್ನು ಕರ್ನಾಟಕ ಹೈಕೋರ್ಟ್ (High Court) ಸೋಮವಾರ ಎತ್ತಿಹಿಡಿದಿದೆ.
ಸಂತೋಷಬೀಜಾಡಿ ಶ್ರೀನಿವಾಸ ಅವರ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು, “ವ್ಯಕ್ತಿಯ ಕ್ರಮಿನಿನಲ್ ಮೊಕದ್ದಮೆಯನ್ನು ಪರಿಗಣಿಸದೆ ಆತನಿಗೆ ಪಾಸ್‌ಪೋರ್ಟ್‌ನ ವಿತರಣೆ ಅಥವಾ ನವೀಕರಣ/ಮರು ನೀಡುವಂತೆ ಪಾಸ್‌ಪೋರ್ಟ್ ಕಾಯ್ದೆಯಲ್ಲಿ ಎಲ್ಲಿಯೂ ಹೇಳಿಲ್ಲ” ಎಂದು ಹೇಳಿದರು.
ಸೆಕ್ಷನ್ 6(2)(ಎಫ್) ಅಡಿಯಲ್ಲಿ ಪಾಸ್‌ಪೋರ್ಟ್ ವಿತರಣೆಗೆ ನಿಯಮಗಳನ್ನು ರೂಪಿಸಲಾಗಿದೆ. ಈ ನಿಯಮಗಳ ಪ್ರಕಾರ ಕ್ರಮಿನಿಲ್ ಮೊಕದ್ದಮೆ ಎದುರಿಸುತ್ತಿರುವವರಿಗೆ ಹೊಸ ಪಾಸ್‌ಪೋರ್ಟ್, ನವೀಕರಣ ಅಥವಾ ಮರು ವಿತರಣೆ ನೀಡುವುದನ್ನು ನಿಷೇಧಿಸಲಾಗಿದೆ. ಈ ನಿಯಮಗಳನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಇದನ್ನೂ ಓದಿ: ವೈವಾಹಿಕ ಸಂಬಂಧದಿಂದ ಪತ್ನಿ ಪತಿಯ ಯುಐಡಿಎಐ ಮಾಹಿತಿ ಪಡೆಯಲು ಸಾಧ್ಯವಿಲ್ಲ: ಹೈಕೋರ್ಟ್
ಆದಾಗ್ಯೂ, ಸಂತೋಷಬೀಜಾಡಿ ಶ್ರೀನಿವಾಸ ಅವರು ತಮ್ಮ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ವಿಚಾರಣೆ ನಡೆಸುತ್ತಿರವ ಸೆಷನ್ಸ್ ನ್ಯಾಯಾಲಯವನ್ನು ಸಂಪರ್ಕಿಸಬಹುದು ಮತ್ತು ಅಲ್ಪಾವಧಿಯ ಪಾಸ್‌ಪೋರ್ಟ್ ಅನ್ನು ನೀಡುವಂತೆ ಕೋರಬಹುದು. ಆದರೆ ಸೆಷನ್ಸ್ ನ್ಯಾಯಾಲಯವು ಅಂತಹ ಅರ್ಜಿಯನ್ನು ಕಾಯ್ದೆಗೆ ಅನುಗುಣವಾಗಿ ಕಟ್ಟುನಿಟ್ಟಾಗಿ ಪರಿಗಣಿಸಬೇಕು ಎಂದು ಹೈಕೋರ್ಟ್ ಹೇಳಿದೆ.
ಏಪ್ರಿಲ್ 11, 2014 ರಂದು ಅರ್ಜಿದಾರ ಶ್ರೀನಿವಾಸ ಅವರಿಗೆ ಪಾಸ್‌ಪೋರ್ಟ್ ನೀಡಲಾಯಿತು, ಇದು ಏಪ್ರಿಲ್ 10, 2024 ರವರೆಗೆ ಮಾನ್ಯವಾಗಿತ್ತು. ಈ ಅವಧಿಯಲ್ಲಿ, ಅರ್ಜಿದಾರರು ಸೆಕ್ಷನ್ 302, 201, 120-ಬಿ ಮತ್ತು 182 ರ ಅಡಿಯಲ್ಲಿ ಅಪರಾಧ ಎಸಗಿದ್ದಾರೆ.
ತುಮಕೂರಿನ ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವಾಗಲೇ ಶ್ರೀನಿವಾಸ ಪಾಸ್‌ಪೋರ್ಟ್ ಮರು ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಆದರೆ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯು ಕ್ರಿಮಿನಲ್ ಪ್ರಕರಣದ ಕಾರಣದಿಂದ ಅವರ ಅರ್ಜಿಯನ್ನು ತಿರಸ್ಕರಿಸಿತು. ಹೀಗಾಗಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ