ಧಾರ್ಮಿಕ ಆಚರಣೆಗೆ ಶಾಲೆಗಳಲ್ಲಿ ಅವಕಾಶವಿಲ್ಲ, ಸುಪ್ರೀಂಕೋರ್ಟ್ನ ಮುಂದಿನ ತೀರ್ಪಿಗೆ ಕಾಯುತ್ತೇವೆ: ಶಿಕ್ಷಣ ಸಚಿವ ಬಿಸಿ ನಾಗೇಶ್
ಸರ್ಕಾರದ ಶಿಕ್ಷಣ ಕಾಯ್ದೆಯ ಪ್ರಕಾರ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶ ಇಲ್ಲ. ಸರ್ಕಾರಿ ಮತ್ತು ಎಲ್ಲ ಶಾಲೆಗಳು ಅದೇ ಕಾಯ್ದೆಯ ಪ್ರಕಾರ ನಡೆಯುತ್ತೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.

ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಪ್ರಪಂಚದ ಎಲ್ಲೆಡೆ ಸ್ತ್ರೀಸ್ವಾತಂತ್ರ್ಯದ ಬಗ್ಗೆ ಮಾತನಾಡುತ್ತಿರುವ ಸಂದರ್ಭದಲ್ಲಿ ಒಳ್ಳೇ ತೀರ್ಪು ಬರುತ್ತೆ ಎನ್ನುವ ನಿರೀಕ್ಷೆ ಸರ್ಕಾರಕ್ಕೆ ಇತ್ತು. ಆದರೆ ಇದು ವಿಭಜಿತ ತೀರ್ಪು ಬಂದಿದೆ. ಮುಂದಿನ ತೀರ್ಪಿಗೆ ಸರ್ಕಾರ ಕಾಯುತ್ತೆ. ಹೈಕೋರ್ಟ್ ತೀರ್ಪಿಗೆ ಸರ್ಕಾರ ಕಾಯುತ್ತೆ. ಸರ್ಕಾರದ ಶಿಕ್ಷಣ ಕಾಯ್ದೆಯ ಪ್ರಕಾರ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶ ಇಲ್ಲ. ಸರ್ಕಾರಿ ಮತ್ತು ಎಲ್ಲ ಶಾಲೆಗಳು ಅದೇ ಕಾಯ್ದೆಯ ಪ್ರಕಾರ ನಡೆಯುತ್ತೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದರು.
ಕರ್ನಾಟಕ ಹಿಜಾಬ್ ಸಂಬಂಧ ಸುಪ್ರೀಂಕೋರ್ಟ್ ತೀರ್ಪು ಪ್ರಕಟವಾದ ನಂತರ ಇದಕ್ಕೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಪ್ರತಿಕ್ರಿಯೆ ನೀಡಿದರು. ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಮುಂದುವರಿಯುತ್ತದೆ. ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಧಾರ್ಮಿಕ ಆಚರಣೆ, ಚಿಹ್ನೆಗಳ ಪ್ರದರ್ಶನ ಸಲ್ಲದು ಎಂದು ಸರ್ಕಾರದ ನಿಲುವು ಪುನರುಚ್ಚರಿಸಿದರು. ಇದನ್ನೂ ಓದಿ: Hijab Verdict: ಸುಪ್ರೀಂಕೋರ್ಟ್ನಿಂದ ಹಿಜಾಬ್ ಕುರಿತು ವಿಭಜಿತ ತೀರ್ಪು, ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ಪ್ರಕರಣ
ವಿಶ್ವದಾದ್ಯಂತ ಮಹಿಳೆಯರು ಹಿಜಾಬ್ ವಿರುದ್ಧ ಬೀದಿಗಿಳಿದಿದ್ದಾರೆ. ಇರಾನ್ನಂಥ ಇಸ್ಲಾಮಿಕ್ ದೇಶಗಳಲ್ಲಿಯೇ ಪ್ರತಿಭಟನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ತೀರ್ಪು ಸಹ ಕರ್ನಾಟಕ ಹೈಕೋರ್ಟ್ ತೀರ್ಪು ಎತ್ತಿಹಿಡಿಯಬಹುದು ಎಂದು ನಿರೀಕ್ಷಿಸಿದ್ದೆ. ಹಾಗೆಂದು ನಾನು ಸುಪ್ರೀಂಕೋರ್ಟ್ ವಿರುದ್ಧ ಮಾತನಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ಹಿಜಾಬ್ ಕುರಿತು ನಮ್ಮ ಸರ್ಕಾರ ಈ ಹಿಂದೆ ಹೊರಡಿಸಿದ್ದ ಅಧಿಸೂಚನೆಯು ಊರ್ಜಿತದಲ್ಲಿ ಇರುತ್ತದೆ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದರು.
Hijab Verdict: ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಇಲ್ಲ ಅವಕಾಶ
ದೆಹಲಿ: ಹಿಜಾಬ್ ವಿವಾದದ ಬಗ್ಗೆ ನ್ಯಾಯಾಧೀಶರು ವಿಭಜಿತ ತೀರ್ಪು ನೀಡಿರುವುದರಿಂದ ಸದ್ಯದ ಮಟ್ಟಿಗೆ ಕರ್ನಾಟಕ ಹೈಕೋರ್ಟ್ನ ಹಿಜಾಬ್ ತೀರ್ಪು ಊರ್ಜಿತದಲ್ಲಿ ಇರುತ್ತದೆ ಎಂದು ಕಾನೂನು ತಜ್ಞರು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಮುಖ್ಯ ನ್ಯಾಯಮೂರ್ತಿ ಪ್ರಕರಣದ ವಿಚಾರಣೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಅನಂತರವಷ್ಟೇ ಸುಪ್ರೀಂಕೋರ್ಟ್ನ ಆದೇಶ ಪ್ರಕಟವಾಗಲಿದ್ದು, ಅದು ಹೈಕೋರ್ಟ್ ಆದೇಶದ ಜಾಗದಲ್ಲಿ ಊರ್ಜಿತಕ್ಕೆ ಬರಲಿದೆ. ಹೀಗಾಗಿ ಸದ್ಯದ ಮಟ್ಟಿಗೆ ಕರ್ನಾಟಕ ಹೈಕೋರ್ಟ್ನ ಆದೇಶ ಯಥಾಸ್ಥಿತಿ ಮುಂದುವರಿಯಲಿದ್ದು, ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಕಾನೂನು ತಜ್ಞರು ಹಾಗೂ ವಕೀಲರು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ 4ನೇ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಮೋದಿ ಚಾಲನೆ; 3 ಗಂಟೆ ಕಡಿಮೆಯಾಗಲಿದೆ ಚಂಡೀಗಢ್-ದೆಹಲಿ ಸಂಚಾರದ ಅವಧಿ
Published On - 11:15 am, Thu, 13 October 22