ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅನುಮತಿ ಇಲ್ಲ: ಕೆ.ಹೆಚ್.ಮುನಿಯಪ್ಪ
ಹೊಸ ಎಪಿಎಲ್, ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಇನ್ನೂ ಒಂದಿಷ್ಟು ದಿನ ಅನುಮತಿ ಇಲ್ಲ. ಏನು ಕಾರಣ ಅಂತ ಸದ್ಯದರಲ್ಲೇ ಹೇಳುತ್ತೇನೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.
ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳ ಲಾಭ ಪಡೆಯಲು ಸಾಧ್ಯವಾಗದೆ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಮುಂದಾವರಿಗೆ ಸರ್ಕಾರ ನಿರಾಶೆ ಮೂಡಿಸಿದೆ. ಹೌದು ಹೊಸ ಎಪಿಎಲ್ (APL), ಬಿಪಿಎಲ್ (BPL) ಕಾರ್ಡ್ಗೆ ಅರ್ಜಿ ಸಲ್ಲಿಸಲು ಇನ್ನೂ ಒಂದಿಷ್ಟು ದಿನ ಅನುಮತಿ ಇಲ್ಲ. ಕಾರಣ ಏನು ಅಂತ ಸದ್ಯದರಲ್ಲೇ ಹೇಳುತ್ತೇನೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ (KH Muniyappa) ಹೇಳಿದರು. ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸುಧಾಮ್ ದಾಸ್ಗೆ ಎಂಎಲ್ಸಿ ಸ್ಥಾನ ನೀಡುವುದನ್ನು ವಿರೋಧಿಸಿ ಪತ್ರ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿರುವುದು ನಿಜ ಎಂದರು.
ಸುಧಾಮ್ ದಾಸ್ ಈಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇನ್ನೊಂದಿಷ್ಟು ದಿನಗಳ ಕಾಲ ಸುಧಾಮ್ ದಾಸ್ ಪಕ್ಷಕ್ಕೆ ಕೆಲಸ ಮಾಡಲಿ. ಪಕ್ಷಕ್ಕೆ ದುಡಿದ ದಲಿತ ನಾಯಕರಿಗೆ ಅವಕಾಶ ನೀಡಲಿ ಎಂಬುದಷ್ಟೇ ಸಲಹೆ. ಪ್ರಜಾಪ್ರಭುತ್ವ ವ್ಯವಸ್ಥೆಯ ಅಡಿಯಲ್ಲಿ ಪತ್ರ ಬರೆದಿರುವುದು ಸತ್ಯ. ಅಂತಿಮವಾಗಿ ನಮ್ಮ ಹೈಕಮಾಂಡ್ ನಾಯಕರು ನಿರ್ಧಾರ ಮಾಡುತ್ತಾರೆ ಎಂದು ಹೇಳಿದರು.
ನಿತಿಸಂಹಿತೆ ಹಿನ್ನೆಲೆಯಲ್ಲಿ ಪೋರ್ಟ್ಲ್ ಬಂದ್ ಆಗಿತ್ತು
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿಸಂಹಿತೆ ಜಾರಿಯಾಗುತ್ತಿದ್ದಂತೆಯೇ, ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸುವ ಆನ್‌ಲೈನ್ ಪೋರ್ಟಲ್ ಸ್ಥಗಿತಗೊಳಿಸಲಾಗಿತ್ತು. ಇದೀಗ ಹೊಸ ಸರ್ಕಾರ ರಚನೆಯಾಗಿ ಮೂರು ತಿಂಗಳು ಕಳೆದು ಈ ಪೋರ್ಟ್ಲ್ ಅನ್ನು ಆರಂಭಮಾಡಲಿಲ್ಲ. ಸರ್ಕಾರ ಅನುಮತಿ ನೀಡಿದ ನಂತರವಷ್ಟೇ ಅನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಸಿಗಲಿದೆ.
ಇದನ್ನೂ ಓದಿ: ಅಕ್ಕಿ ಇಲ್ಲವೆಂದು ಪೇಚಾಡುವ ಸರ್ಕಾರ; ತನ್ನದೇ ಗೋದಾಮಿನಿಂದ ಕೋಟ್ಯಾಂತರ ರೂ. ಅಕ್ಕಿ ಮಾಯ
ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ‘ಗ್ಯಾರಂಟಿ’ಗಳ ಲಾಭವನ್ನು ಪಡೆದುಕೊಳ್ಳಲು ಪಡಿತರ ಚೀಟಿ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ಪಡಿತರ ಚೀಟಿ ಮಾಡಿಸಲು ಜನರು ಮುಗಿಬೀಳುತ್ತಿದ್ದಾರೆ. ಹೊಸದಾಗಿ ಪಡಿತರ ಚೀಟಿ ಸಲ್ಲಿಸಲು ‘ಗ್ರಾಮ ಒನ್’ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಿಗೆ ಜನರು ನಿತ್ಯವೂ ಭೇಟಿ ನೀಡಿ ವಿಚಾರಿಸುತ್ತಿದ್ದಾರೆ. ‘ಗ್ಯಾರಂಟಿ’ ಯೋಜನೆಗಳಿಗೆ ಪಡಿತರ ಚೀಟಿ ಮಾನದಂಡವಾಗಿದ್ದರಿಂದ ಅರ್ಜಿ ಸಲ್ಲಿಸಲು ಬರುವವರ ಸಂಖ್ಯೆ ಹೆಚ್ಚಾಗಿದೆ. ಸದ್ಯಕ್ಕೆ ಅರ್ಜಿ ಸ್ವೀಕಾರ ಪ್ರಕ್ರಿಯೆಗೆ ಸರ್ಕಾರ ಅನುವು ಮಾಡಿಕೊಟ್ಟಿಲ್ಲ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:58 pm, Fri, 18 August 23