ಬೆಂಗಳೂರಿನಲ್ಲಿ ಬಿಎಂಟಿಸಿ ಕಂಡಕ್ಟರ್​ಗಿಲ್ಲ ಭದ್ರತೆ;  ಕಲ್ಲಿನಿಂದ ತಲೆ ಜಜ್ಜಲು ಯತ್ನಿಸಿದ ಪ್ರಯಾಣಿಕ!

ಕಳೆದ ಶುಕ್ರವಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಂಡಕ್ಟರ್ ತಲೆಗೆ ಕಲ್ಲು ಬೀಸಿ ಎಸ್ಕೇಪ್ ಆಗಲು ಯತ್ನಿಸಿದ್ದ ಘಟನೆ ಟಿನ್ ಫ್ಯಾಕ್ಟರಿ ಬಳಿ ನಡೆದಿತ್ತು. ಕಳೆದ ಎರಡು ತಿಂಗಳಲ್ಲಿ ಬೆಂಗಳೂರಿನ ಬಸ್ ಕಂಡಕ್ಟರ್​ ಮೇಲೆ ಹಲ್ಲೆ ನಡೆದಿರುವ 3 ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ಬಿಎಂಟಿಸಿ ಕಂಡಕ್ಟರ್​ಗಿಲ್ಲ ಭದ್ರತೆ;  ಕಲ್ಲಿನಿಂದ ತಲೆ ಜಜ್ಜಲು ಯತ್ನಿಸಿದ ಪ್ರಯಾಣಿಕ!
ಬಿಎಂಟಿಸಿ ಬಸ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 24, 2024 | 1:40 PM

ಬೆಂಗಳೂರು: ಈ ತಿಂಗಳ ಆರಂಭದಲ್ಲಿ ಬೆಂಗಳೂರಿನ ವೈಟ್​ಫೀಲ್ಡ್​ನಲ್ಲಿ ಬಿಎಂಟಿಸಿ ವೋಲ್ವೋ ಬಸ್ ಪ್ರಯಾಣಿಕನೊಬ್ಬ ಕಂಡಕ್ಟರ್​​ಗೆ ಚಾಕುವಿನಿಂದ ಇರಿದ ಘಟನೆ ಭಾರೀ ಸಂಚಲನ ಸೃಷ್ಟಿಸಿತ್ತು. ಅದೇ ರೀತಿಯ ಮತ್ತೊಂದು ಘಟನೆ ಇದೀಗ ಬೆಂಗಳೂರಿನಲ್ಲಿ ನಡೆದಿದೆ. ಸ್ವಲ್ಪ ಯಾಮಾರಿದ್ದರೂ ಈ ಬಾರಿ ಕಂಡಕ್ಟರ್ ಪ್ರಾಣವೇ ಹೋಗುತ್ತಿತ್ತು. ಪ್ರಯಾಣಿಕನೊಬ್ಬ ಕಲ್ಲಿನಿಂದ ಕಂಡಕ್ಟರ್ ತಲೆಯನ್ನು ಜಜ್ಜಲು ಬಂದಿದ್ದ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಬಸ್ ಕಂಡಕ್ಟರ್​ಗಳ ಸುರಕ್ಷತೆಯ ಬಗ್ಗೆ ಮತ್ತೆ ಆತಂಕ ಸೃಷ್ಟಿಯಾಗಿದೆ.

ಕಳೆದ ಶುಕ್ರವಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಂಡಕ್ಟರ್ ತಲೆಗೆ ಕಲ್ಲು ಬೀಸಿ ಎಸ್ಕೇಪ್ ಆಗಲು ಯತ್ನಿಸಿದ್ದ ಘಟನೆ ಕಳೆದ ಶುಕ್ರವಾರ ಟಿನ್ ಫ್ಯಾಕ್ಟರಿ ಬಳಿ ನಡೆದಿತ್ತು. KA-14F1107 ನಂಬರಿನ ಬಿಎಂಟಿಸಿ ಬಸ್​ನಲ್ಲಿ ಈ ಘಟನೆ ನಡೆದಿತ್ತು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಧಾರಾಕಾರ ಮಳೆ; ಲಿಫ್ಟ್​ ಗುಂಡಿಯ ನೀರಿಗೆ ಬಿದ್ದು 7 ವರ್ಷದ ಬಾಲಕ ಸಾವು

ಇದರ ಜೊತೆಗೆ 3 ದಿನದ ಹಿಂದೆ ಪಾಸ್ ತೋರಿಸುವ ವಿಚಾರಕ್ಕೆ ಕಂಡಕ್ಟರ್ ಮತ್ತು ಪ್ರಯಾಣಿಕನ ನಡುವೆ ಕಿರಿಕ್ ಆಗಿತ್ತು. ಆ ವೇಳೆ ಪ್ರಯಾಣಿಕ ಕಂಡಕ್ಟರ್ ಸಂಗಪ್ಪನ ಹೊಟ್ಟೆಗೆ ಗುದ್ದಿ ಎಸ್ಕೇಪ್ ಆಗಿದ್ದ. ಇದಕ್ಕಾಗಿ ಆರೋಪಿ ಹೇಮಂತ್ ಎಂಬಾತ ಕಂಡಕ್ಟರ್ ಮೇಲೆ ಹಲ್ಲೆ ಮಾಡಲು 3 ದಿನಗಳಿಂದ ಹೊಂಚು ಹಾಕಿದ್ದ.

ಕಳೆದ ಎರಡು ತಿಂಗಳಲ್ಲಿ ಬೆಂಗಳೂರಿನ ಬಸ್ ಕಂಡಕ್ಟರ್​ ಮೇಲೆ ಹಲ್ಲೆ ನಡೆದಿರುವ 3 ಘಟನೆ ನಡೆದಿದೆ. ಸೆಪ್ಟೆಂಬರ್ 8ರಂದು ಅತ್ತಿಬೆಲೆಯಿಂದ ಮೆಜೆಸ್ಟಿಕ್ ಬರುತ್ತಿದ್ದ ವೋಲ್ವೋ ಬಸ್​ನಲ್ಲಿ ಹೊಸ ರೋಡ್ ಬಸ್ ಸ್ಟಾಪ್​ನಲ್ಲಿ ಕಂಡಕ್ಟರ್​ಗೆ ಸ್ಕ್ರೂ ಡ್ರೈವರ್ ನಿಂದ ಚುಚ್ಚಲು ಮುಂದಾಗಿದ್ದ. ಅಕ್ಟೋಬರ್ 1ರಂದು ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್​ನಲ್ಲಿ ಬಿಎಂಟಿಸಿ ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್​ಗೆ ಹರ್ಷ ಸಿನ್ಹಾ ಅನ್ನೋ ಯುವಕ 2-3 ಬಾರಿ ಚಾಕುವಿನಿಂದ ಚುಚ್ಚಿ ಕೊಲ್ಲಲು ಯತ್ನಿಸಿದ್ದ.

ಇದನ್ನೂ ಓದಿ: KSRTC ಕಂಡಕ್ಟರ್​ಗಳಿಗೆ ತಲೆ ನೋವಾದ ಹೊಸ ಟಿಕೆಟ್ ಮೆಷಿನ್​ಗಳು; ಹಳೆ ಮೆಷಿನ್​ಗಳೇ ಕೊಡಿ ಎಂದು ಮನವಿ

ಈಗ ಕಳೆದ ಅಕ್ಟೋಬರ್ 18ರ ಶುಕ್ರವಾರ ಮಧ್ಯಾಹ್ನ 2.30ರ ಸುಮಾರಿಗೆ ಟಿನ್ ಫ್ಯಾಕ್ಟರಿ ಬಸ್ ಸ್ಟ್ಯಾಂಡ್ ನಲ್ಲಿ ಊಟ ಮಾಡುತ್ತಿರುವ ವೇಳೆ ಆರೋಪಿ ಹೇಮಂತ್ ದೊಡ್ಡದಾದ ಕಲ್ಲಿನಿಂದ ಕಂಡಕ್ಟರ್ ಸಂಗಪ್ಪನ ತಲೆಗೆ ಹೊಡೆದು ಎಸ್ಕೇಪ್ ಆಗಿದ್ದ. ನಂತರ ಪ್ರಯಾಣಿಕರು ಆತನನ್ನು ಹಿಡಿದು ಪೋಲಿಸರ ವಶಕ್ಕೆ ನೀಡಿದ್ದಾರೆ. ಇದರಿಂದ ಕಂಡಕ್ಟರ್​ಗಳು ತಮ್ಮ ರಕ್ಷಣೆಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್