ಯಾವುದೇ ಅಲ್ಪಸಂಖ್ಯಾತ ಮಕ್ಕಳ ಸ್ಕಾಲರ್ ಶಿಪ್ ನಿಲ್ಲಿಸೋದಿಲ್ಲ- ಶಾದಿ ಮಹಲ್ ಮಾತ್ರ ನಿಲ್ಲಿಸ್ತೇವೆ: ಸಿಎಂ ಬೊಮ್ಮಾಯಿ ಸ್ಪಷ್ಟನೆ

ಶಾಲಾ ಮಕ್ಕಳ ಸ್ಕಾಲರ್ ಶಿಪ್, ಹೈಯರ್ ಎಜುಕೇಶನ್ ನಿಲ್ಲಿಸುವ ಕೆಲ ಪ್ರಯತ್ನ ಆಗಿತ್ತು. ಆದರೆ ಯಾವುದನ್ನೂ ಕೂಡ ನಿಲ್ಲಿಸುವುದಿಲ್ಲ. ಮಕ್ಕಳ ಸ್ಕಾಲರ್ ಶಿಪ್ ಗೆಂದೇ 100 ಕೋಟಿ ರೂಪಾಯಿ ಅನುದಾನವನ್ನೂ ಮಂಜೂರು ಮಾಡ್ತೇನೆ. ಯಾವುದೇ ಅಲ್ಪಸಂಖ್ಯಾತ ಮಕ್ಕಳ ಸ್ಕಾಲರ್ ಶಿಪ್ ನಿಲ್ಲಿಸೋದಿಲ್ಲ- ಸಿಎಂ ಬೊಮ್ಮಾಯಿ

ಯಾವುದೇ ಅಲ್ಪಸಂಖ್ಯಾತ ಮಕ್ಕಳ ಸ್ಕಾಲರ್ ಶಿಪ್ ನಿಲ್ಲಿಸೋದಿಲ್ಲ- ಶಾದಿ ಮಹಲ್ ಮಾತ್ರ ನಿಲ್ಲಿಸ್ತೇವೆ: ಸಿಎಂ ಬೊಮ್ಮಾಯಿ ಸ್ಪಷ್ಟನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Mar 29, 2022 | 5:37 PM

ಬೆಂಗಳೂರು: ಬಜೆಟ್​ ಅಧಿವೇಶನದಲ್ಲಿ ವಿಧಾನಸೌಧದಲ್ಲಿ ಕಲಾಪ ಮುಂದುವರಿದಿದೆ. ಕಲಾಪದ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಾಲಾ ಮಕ್ಕಳ ಸ್ಕಾಲರ್ ಶಿಪ್, ಹೈಯರ್ ಎಜುಕೇಶನ್ ನಿಲ್ಲಿಸುವ ಕೆಲ ಪ್ರಯತ್ನ ಈ ಹಿಂದೆ ಆಗಿತ್ತು. ಆದರೆ ಯಾವುದನ್ನೂ ಕೂಡ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿಗಳೆ, ಅಲ್ಪ ಸಂಖ್ಯಾತ ಮಕ್ಕಳಿಗೆ ಸ್ಕಾಲರ್ ಶಿಪ್ ನಿಲ್ಲಿಸಲಾಗ್ತಿದೆ. ಹಿಜಾಬ್ ವಿಚಾರ ನೀವು ಏನಾದ್ರೂ ಮಾಡಿಕೊಳ್ಳಿ, ಅದರೆ ಸ್ಕಾಲರ್ ಶಿಪ್ ದಯವಿಟ್ಟು ನಿಲ್ಲಿಸಬೇಡಿ ಎಂದು  ವಿಧಾನಪರಿಷತ್​ನಲ್ಲಿ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್​ ಅವರು ಸಿಎಂ ಬೊಮ್ಮಾಯಿ ಗಮನಕ್ಕೆ ತಂದರು. ಅದಕ್ಕೆ ಉತ್ತರಿಸಿದ ಸಿಎಂ ಬೊಮ್ಮಾಯಿ ಶಾಲಾ ಮಕ್ಕಳ ಸ್ಕಾಲರ್ ಶಿಪ್, ಹೈಯರ್ ಎಜುಕೇಶನ್ ನಿಲ್ಲಿಸುವ ಕೆಲ ಪ್ರಯತ್ನ ಆಗಿತ್ತು. ಆದರೆ ಯಾವುದನ್ನೂ ಕೂಡ ನಿಲ್ಲಿಸುವುದಿಲ್ಲ. ಮಕ್ಕಳ ಸ್ಕಾಲರ್ ಶಿಪ್ ಗೆಂದೇ 100 ಕೋಟಿ ರೂಪಾಯಿ ಅನುದಾನವನ್ನೂ ಮಂಜೂರು ಮಾಡ್ತೇನೆ. ಯಾವುದೇ ಅಲ್ಪಸಂಖ್ಯಾತ ಮಕ್ಕಳ ಸ್ಕಾಲರ್ ಶಿಪ್ ನಿಲ್ಲಿಸೋದಿಲ್ಲ. ಮಕ್ಕಳ ವಿಷಯದಲ್ಲಿ ಯಾವುದೇ ತಾರತಮ್ಯ ಮಾಡದೇ ಅವರಿಗೆ ಸ್ಕಾಲರ್ ಶಿಪ್ ಒದಗಿಸುತ್ತೇವೆ. ಶಾದಿ ಮಹಲ್ ಮಾತ್ರ ನಿಲ್ಲಿಸುತ್ತೇವೆ, ಅದನ್ನು ಬಿಟ್ಟು ಅಲ್ಪಸಂಖ್ಯಾತರ ಯಾವುದೇ ಯೋಜನೆ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕಮರ್ಷಿಯಲ್ ಟ್ಯಾಕ್ಸ್​ನಲ್ಲಿ ಹೆಚ್ಚು ಸಂಗ್ರಹ ಮಾಡಿದ್ದೇವೆ: ಸಿ ಎಂ ಬೊಮ್ಮಾಯಿ ನಾನ್ ಟ್ಯಾಕ್ಸ್​​ ರೆವಿನ್ಯೂ 6000 ಕೋಟಿ ಸಂಗ್ರಹ ಆಗುತ್ತಿದೆ. 26 ಸಾವಿರ ಕೋಟಿ ಪೂರಕ ಅಂದಾಜು ಮಂಡಿಸಿದ್ದೇವೆ. ದೇವರಾಜ ಅರಸು ನಿಮಗಕ್ಕೆ ₹200 ಕೋಟಿ ನೀಡಿದ್ದೇವೆ. ನೀರಾವರಿ ಯೋಜನೆಗೆ 3000 ಕೋಟಿ ಹೆಚ್ಚುವರಿ ನೀಡಿದ್ದೇವೆ. ಆರ್ಥಿಕ ಶಿಸ್ತು ಕಾಯ್ದು ಅವಶ್ಯಕ ಖರ್ಚು ಕಡಿಮೆ ಮಾಡಿದ್ದೇವೆ. ಬರುವ ವರ್ಷ ಕೊವಿಡ್ ಫ್ರೀ ವರ್ಷ ಆಗಬಹುದೆಂಬ ನಿರೀಕ್ಷೆಯಿದೆ ಎಂದು ವಿಧಾನಪರಿಷತ್​​ನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.

ಕೊರೊನಾ ವೇಳೆ ಸಾವನ್ನು ಕಂಡು ಮರುಗಿದ್ದ ಸಿರಗುಪ್ಪದ ಆಂಬುಲೆನ್ಸ್ ಚಾಲಕ ದೇಹದಾನ -ನೇತ್ರದಾನ ಮಾಡಿದರು ಬಳ್ಳಾರಿ: ಸಿರಗುಪ್ಪ ಪಟ್ಟಣದ 108 ಆಂಬುಲೆನ್ಸ್ ಚಾಲಕರೊಬ್ಬರು ನೇತ್ರದಾನ ಮತ್ತು ದೇಹದಾನ ಮಾಡಿ, ಮಾದರಿಯಾಗಿದ್ದಾರೆ. 42 ವರ್ಷದ ವಡಿವೇಲು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದರು. ಮೃತಪಟ್ಟ ನಂತರ ಸಿರಗುಪ್ಪ ಪಟ್ಟಣದ 108 ಆಂಬುಲೆನ್ಸ್ ಚಾಲಕ ಡಿ. ವಡಿವೇಲು ಅವರ ಕಣ್ಣು ಮತ್ತು ದೇಹದಾನ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

ಕೊರೊನಾ ವೇಳೆ ಅತಿಹೆಚ್ಚು ಸಾವನ್ನು ಕಂಡು ಮರುಗಿದ್ದ ಚಾಲಕ ವಡಿವೇಲು ಅವರು ತಾವು ಮೃತಪಟ್ಟ ಬಳಿಕವೂ ಬೇರೆಯವರಿಗೆ ಸಹಕಾರಿಯಾಗಬೇಕೆಂದು ದೇಹ ದಾನ ಮತ್ತು ನೇತ್ರದಾನಕ್ಕೆ ಪತ್ರಕ್ಕೆ ಮೊದಲೇ ಸಹಿ‌ ಮಾಡಿದ್ದರು. ಅವರ ಇಚ್ಛೆಯಂತೆ ಬಳ್ಳಾರಿಯ ನಿತ್ಯಜ್ಯೋತಿ ನೇತ್ರ ಭಂಡಾರಕ್ಕೆ ಕಣ್ಣು ಮತ್ತು ವಿಮ್ಸ್ ಆಸ್ಪತ್ರೆಗೆ ದೇಹದಾನ ಮಾಡಲಾಗಿದೆ. ಯುವ ಬ್ರಿಗೇಡ್ ನೇತೃತ್ವದಲ್ಲಿ ದೇಹ ದಾನ ಮತ್ತು ಕಣ್ಣುಗಳ ದಾನ ಕಾರ್ಯ ನೆರವೇರಿತು.

ಇದನ್ನೂ ಓದಿ: ಕೊರೊನಾ ವೇಳೆ ಸಾವನ್ನು ಕಂಡು ಮರುಗಿದ್ದ ಸಿರಗುಪ್ಪದ ಆಂಬುಲೆನ್ಸ್ ಚಾಲಕ ದೇಹದಾನ -ನೇತ್ರದಾನ ಮಾಡಿದರು

Facebook: ನಿಮ್ಮ ಟೈಮ್​ಲೈನ್; ಮೊನ್ನೆ ಹುಟ್ಟಿದ ನನ್ನ ಮಗುವಿಗೆ ಕೂಡ ಲಿಂಗಸೂಚಕ ಹೆಸರು ಇಟ್ಟಿಲ್ಲ!

Published On - 5:22 pm, Tue, 29 March 22

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್