AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಿಗರ ಸುರಕ್ಷತೆಗೆ ಆದ್ಯತೆ: ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ; ಇಲ್ಲಿದೆ ಮಾಹಿತಿ

ದುಬಾರೆ ದುರಂತದ ಬೆನ್ನಲ್ಲೇ ಕರ್ನಾಟಕ ಅರಣ್ಯ ಇಲಾಖೆಯು ಆನೆ ಶಿಬಿರಗಳಿಗೆ ಹೊಸ ಸುರಕ್ಷತಾ ನಿಯಮಾವಳಿ ಜಾರಿಗೊಳಿಸಿದ್ದು, ಇನ್ನು ಮುಂದೆ ಪ್ರವಾಸಿಗರು ಆನೆಗಳಿಂದ ಕನಿಷ್ಠ 30 ಅಡಿ ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಪ್ರವಾಸಿಗರು ಗುರುತಿಸಲಾದ ಗ್ರೀನ್ ಝೋನ್ (ವೀಕ್ಷಣಾ ಪ್ರದೇಶ)ನಲ್ಲೇ ನಿಂತು ಆನೆಗಳನ್ನು ವೀಕ್ಷಿಸಬೇಕಿದ್ದು, ಹೊಸ ನಿಯಮಗಳ ಅನ್ವಯ ಶಿಬಿರಗಳಲ್ಲಿ ಏನೇನು ಬದಲಾವಣೆ ಆಗಲಿದೆ ಎಂಬ ಮಾಹಿತಿ ಇಲ್ಲಿದೆ.

ಪ್ರವಾಸಿಗರ ಸುರಕ್ಷತೆಗೆ ಆದ್ಯತೆ: ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ; ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರImage Credit source: captainscrown.com
ಪ್ರಸನ್ನ ಹೆಗಡೆ
|

Updated on: Jun 17, 2026 | 10:04 AM

Share

ಬೆಂಗಳೂರು, ಜೂನ್​​ 17: ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ನಿರ್ವಹಣಾ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗಾಗಿ ಕರ್ನಾಟಕ ಅರಣ್ಯ ಇಲಾಖೆ ಮೊದಲ ಬಾರಿಗೆ ಕರ್ನಾಟಕ ಆನೆ ಶಿಬಿರ ಸುರಕ್ಷತಾ ನಿಯಮಾವಳಿ (Karnataka Elephant Camp Safety Protocol) ಜಾರಿಗೊಳಿಸಿದೆ. ಇದರನ್ವಯ ಇನ್ನು ಮುಂದೆ ಪ್ರವಾಸಿಗರು ಆನೆಗಳನ್ನು ವೀಕ್ಷಿಸಲು ಕನಿಷ್ಠ 30 ಅಡಿ ಅಂತರ ಕಾಯ್ದುಕೊಳ್ಳಬೇಕು. ಆನೆಗಳಿಗೆ ಸ್ನಾನ ಮಾಡಿಸುವುದು, ಮುಟ್ಟುವುದು ಅಥವಾ ಆಹಾರ ನೀಡುವುದು ಸಂಪೂರ್ಣ ನಿಷೇಧವಾಗಿರಲಿದೆ.

ಪ್ರವಾಸಿಗರು ಗುರುತಿಸಲಾದ ಗ್ರೀನ್ ಝೋನ್ (ವೀಕ್ಷಣಾ ಪ್ರದೇಶ)ನಲ್ಲೇ ನಿಂತು ಆನೆಗಳನ್ನು ವೀಕ್ಷಿಸಬೇಕು. ಆನೆಗಳು ಹಾಗೂ ಪ್ರವಾಸಿಗರ ಚಟುವಟಿಕೆಗಳನ್ನು ಸಿಸಿಟಿವಿ ಕ್ಯಾಮೆರಾಗಳ ಮೂಲಕ ಮೇಲ್ವಿಚಾರಣೆ ಮಾಡಿ ದಾಖಲಿಸಲಾಗುತ್ತದೆ.ಸಾರ್ವಜನಿಕ ವೀಕ್ಷಣೆಗಾಗಿ ಯಾವುದೇ ಶಿಬಿರದಲ್ಲಿ 10ಕ್ಕಿಂತ ಹೆಚ್ಚು ಆನೆಗಳನ್ನು ಪ್ರದರ್ಶಿಸಲು ಅವಕಾಶ ಇರುವುದಿಲ್ಲ.

ಇದನ್ನೂ ಓದಿ: ದುಬಾರೆ ಶಿಬಿರದಲ್ಲಿ ಸಾಕಾನೆಗಳ ಕಾದಾಟದ ವೇಳೆ ಅವುಗಳ ನಡುವೆ ಸಿಲುಕಿ ಮಹಿಳೆ ಸಾವು

ದುಬಾರೆ ದುರಂತದ ಬಳಿಕ ಹೊಸ ನಿಯಮ

ಮೇ 19ರಂದು ದುಬಾರೆ ಆನೆ ಶಿಬಿರದಲ್ಲಿ ತಮಿಳುನಾಡಿನ ಪ್ರವಾಸಿಗರೊಬ್ಬರು ಮೃತಪಟ್ಟಿದ್ದ ಘಟನೆ ಹಿನ್ನೆಲೆಯಲ್ಲಿ ಈ ಸುರಕ್ಷತಾ ನಿಯಮಾವಳಿಯನ್ನು ಜಾರಿಗೊಳಿಸಲಾಗಿದೆ. ಶಿಬಿರಗಳಿಗೆ ನಿಯಮಗಳನ್ನು ಪಾಲಿಸಲು 15 ದಿನಗಳ ಗಡುವು ನೀಡಲಾಗಿದೆ. ಬಳಿಕ ಪರಿಶೀಲನೆ ನಡೆಸಿ ಪ್ರಮಾಣೀಕರಣ ನೀಡಲಾಗುವುದು. ಅನುಮತಿ ಸಿಗುವವರೆಗೆ ಶಿಬಿರಗಳ ಕಾರ್ಯಾಚರಣೆಗೆ ಅವಕಾಶ ಇರುವುದಿಲ್ಲ ಎಂದು ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಕುಮಾರ್ ಪುಷ್ಕರ್ ಅವರು, ತಿಳಿಸಿದ್ದಾರೆ.

ಪ್ರವಾಸಿಗರಿಗೆ ಸಮಯ ಹಾಗೂ ಸಂಖ್ಯಾ ಮಿತಿ

ಹೊಸ ನಿಯಮಗಳ ಅನ್ವಯ ಶಿಬಿರದ ಸಾಮರ್ಥ್ಯ, ಆನೆಗಳ ಸಂಖ್ಯೆ ಹಾಗೂ ಪ್ರವಾಸಿಗರ ದಟ್ಟಣೆ ಆಧರಿಸಿ ಪ್ರವಾಸಿಗರ ಬ್ಯಾಚ್‌ಗಳು ಹಾಗೂ ಸಮಯ ನಿಗದಿಪಡಿಸಲಾಗುತ್ತದೆ. ಗ್ರೀನ್ ಝೋನ್‌ನಲ್ಲಿ ಒಂದೇ ಸಮಯದಲ್ಲಿ 50 ರಿಂದ 75 ಪ್ರವಾಸಿಗರಿಗೆ ಮಾತ್ರ ಅವಕಾಶ ಇರಲಿದ್ದು, ವೀಕ್ಷಣಾ ಅವಧಿ 20 ರಿಂದ 30 ನಿಮಿಷಕ್ಕೆ ಸೀಮಿತವಾಗಿರಲಿದೆ ಎಂದು ದಿ ನ್ಯೂ ಇಂಡಿಯನ್​​ ಎಕ್ಸ್​​ಪ್ರೆಸ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಯೋಗ!
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ