AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಬಿಜಿ ರಾಮ್ ಜಿ ಅಡಿ ಕೆಲಸ ಮಾಡಿದರೂ ಕೂಲಿ ಇಲ್ಲ: 308 ಪಿಡಿಓ, 74 ಇಓ, 12 ಡಿಎಸ್​​ಗಳಿಗೆ ನೋಟಿಸ್

ಬರಗಾಲದ ಪರಿಸ್ಥಿತಿಯಲ್ಲಿ ಜನರು ಗುಳೆ ಹೋಗುವುದನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಇತ್ತೀಚೆಗೆ ವಿಬಿ-ಜಿ ರಾಮ್‌ಜಿ (ಉದ್ಯೋಗ ಖಾತ್ರಿ) ಯೋಜನೆಯಡಿಯಲ್ಲಿ ಕಾರ್ಮಿಕರಿಗೆ ಕೆಲಸ ನೀಡಲಾಗಿತ್ತು. ಜೊತೆಗೆ ಅವರಿಗೆ 15 ದಿನದೊಳಗೆ ಕೂಲಿ ಹಣ ಪಾವತಿಸುವಂತೆ ಸೂಚಿಸಲಾಗಿತ್ತು. ಆದರೆ ಇದೀಗ ರಾಜ್ಯದಲ್ಲಿ ಹಣ ಪಾವತಿಸುವಲ್ಲಿ ವಿಳಂಬ ಹಾಗೂ ನಿರ್ಲಕ್ಷ್ಯ ಕಂಡುಬಂದಿದ್ದು, ಕಾರಣ ಕೇಳಿ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ನೋಟಿಸ್ ಹೊರಡಿಸಿದ್ದಾರೆ.

ವಿಬಿಜಿ ರಾಮ್ ಜಿ ಅಡಿ ಕೆಲಸ ಮಾಡಿದರೂ ಕೂಲಿ ಇಲ್ಲ: 308 ಪಿಡಿಓ, 74 ಇಓ, 12 ಡಿಎಸ್​​ಗಳಿಗೆ ನೋಟಿಸ್
ವಿಬಿ-ಜಿ ರಾಮ್‌ಜಿ ಯೋಜನೆ, ಈಶ್ವರ್ ಖಂಡ್ರೆImage Credit source: Getty images
ಪ್ರಸನ್ನ ಗಾಂವ್ಕರ್​
| Edited By: |

Updated on: Oct 12, 2026 | 5:30 PM

Share

ಮುಖ್ಯಾಂಶಗಳು

  • ವಿಬಿ-ಜಿ ರಾಮ್‌ಜಿ(ಉದ್ಯೋಗ ಖಾತ್ರಿ)ಯೋಜನೆಯ ಹಣ ಪಾವತಿ ವಿಳಂಬ
  • 308 ಪಿಡಿಒ, 74 ಇಒ, 12 ಉಪ ಕಾರ್ಯದರ್ಶಿಗಳಿಗೆ ನೋಟಿಸ್
  • ಕಾರ್ಮಿಕರಿಗೆ ಕೂಲಿ ಹಣ ಪಾವತಿಸುವಲ್ಲಿ ವಿಳಂಬ ಹಾಗೂ ನಿರ್ಲಕ್ಷ್ಯ

ಬೆಂಗಳೂರು, ಅಕ್ಟೋಬರ್​​ 12: ವಿಬಿ-ಜಿ ರಾಮ್‌ಜಿ (ಉದ್ಯೋಗ ಖಾತ್ರಿ) ಯೋಜನೆಯ ಕಾರ್ಮಿಕರಿಗೆ ಕೂಲಿ ಹಣ ಪಾವತಿಸುವಲ್ಲಿ ವಿಳಂಬ ಹಾಗೂ ನಿರ್ಲಕ್ಷ್ಯ ತೋರಿದ 308 ಪಿಡಿಒ, 74 ಇಒ, 12 ಉಪ ಕಾರ್ಯದರ್ಶಿಗಳಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಕಾರ್ಯದರ್ಶಿ ಮತ್ತು 12 ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಈ ಸಂಬಂಧ ಲಿಖಿತ ಸೂಚನೆ ನೀಡಲಾಗಿದೆ.

ಸಚಿವ ಈಶ್ವರ್​ ಖಂಡ್ರೆ ಅಸಮಾಧಾನ

ವಿಬಿ-ಜಿ ರಾಮ್‌ಜಿ ಅಡಿ ಕೆಲಸ ಮಾಡುವ ಫಲಾನುಭವಿಗಳಿಗೆ 15 ದಿನಗಳ ಒಳಗಾಗಿ ಕೂಲಿ ಹಣ ಪಾವತಿಸದಿದ್ದರೆ ಸಂಬಂಧಿತ ಪಿಡಿಓಗಳನ್ನೇ ಹೊಣೆ ಮಾಡಲಾಗುವುದು ಎಂಬ ಸ್ಪಷ್ಟ ಸೂಚನೆ ಇದೆ. ಹೀಗಿದ್ದರೂ 12 ಜಿಲ್ಲೆಗಳ 311 ಗ್ರಾಮ ಪಂಚಾಯತಿಗಳಲ್ಲಿ ವಿಳಂಬ ಆಗಿರುವ ಬಗ್ಗೆ ಸಚಿವ ಈಶ್ವರ್​ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಣ ಬಿಡುಗಡೆ ಆಗಿದ್ದರೂ ನೀಡಿದ ಅಧಿಕಾರಿಗಳು 

ಗ್ರಾಮ ಪಂಚಾಯತಿಗಳಿಗೆ ವಿಬಿ-ಜಿ ರಾಮ್‌ಜಿ ಕೂಲಿ ಹಣ ಬಿಡುಗಡೆ ಆಗಿದ್ದರೂ, ಕೆಲಸ ಮಾಡಿದ ಅಕುಶಲ ಕಾರ್ಮಿಕರಿಗೆ ಕೂಲಿ ಹಣ ಪಾವತಿಸದಿರುವುದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಈಶ್ವರ್​ ಖಂಡ್ರೆ, ಅಧಿಕಾರಿಗಳ ಈ ನಿರ್ಲಕ್ಷ್ಯದಿಂದಾಗಿ, ಬರ ಪರಿಸ್ಥಿತಿಯಲ್ಲೂ ಜನ ವಿಬಿ-ಜಿ ರಾಮ್‌ಜಿ ಕೆಲಸಕ್ಕೆ ಬರಲು ಹಿಂದೇಟು ಹಾಕುತ್ತಿದ್ದು, ಗುಳೆ ಹೋಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

LIVE TV

ಎಲ್ಲೆಲ್ಲಿ ಕಾರ್ಮಿಕರಿಗೆ ಹಣ ಪಾವತಿಸುವಲ್ಲಿ ವಿಳಂಬ?

ಬಾಗಲಕೋಟೆ ಜಿಲ್ಲೆಯಲ್ಲಿ 23, ಬೆಳಗಾವಿಯಲ್ಲಿ 52, ಚಾಮರಾಜನಗರದಲ್ಲಿ 13, ಚಿಕ್ಕಮಗಳೂರು ಜಿಲ್ಲೆಯಲ್ಲಿ 14, ದಕ್ಷಿಣ ಕನ್ನಡದಲ್ಲಿ 15, ಹಾಸನ ಜಿಲ್ಲೆಯಲ್ಲಿ 47, ಕೊಡಗು ಜಿಲ್ಲೆ 25, ಮಂಡ್ಯ ಜಿಲ್ಲೆ 13, ಮೈಸೂರು ಜಿಲ್ಲೆಯಲ್ಲಿ 53, ಶಿವಮೊಗ್ಗ ಜಿಲ್ಲೆ 14, ಉಡುಪಿ ಜಿಲ್ಲೆಯಲ್ಲಿ 23, ವಿಜಯಪುರ ಜಿಲ್ಲೆಯಲ್ಲಿ 16 ಸೇರಿ ಒಟ್ಟು 311 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೆಲಸ ಮಾಡಿದ ಅಕುಶಲ ಕಾರ್ಮಿಕರಿಗೆ ಕೂಲಿ ಹಣ ಪಾವತಿಸುವಲ್ಲಿ ವಿಳಂಬ ಮತ್ತು ನಿರ್ಲಕ್ಷ್ಯವಹಿಸಲಾಗಿದೆ.

ಇದನ್ನೂ ಓದಿ: ವಿಬಿ-ಜಿ-ರಾಮ್​​ ಜಿ ಜಾರಿ: 125 ದಿನ ಕೆಲಸದ ಗ್ಯಾರಂಟಿ ಜೊತೆ ವೇತನ ಹೆಚ್ಚಳ, ಕರ್ನಾಟಕದಲ್ಲಿ ಎಷ್ಟು?

ಈ ಹಿನ್ನೆಲೆಯಲ್ಲಿ ಎಲ್ಲಾ ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳು, ಮೇಲ್ವಿಚಾರಣೆ ಮಾಡಬೇಕಾದ ಜವಾಬ್ದಾರಿ ಹೊತ್ತ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳು ಹಾಗೂ 12 ಜಿಲ್ಲಾ ಪಂಚಾಯತಿಗಳ ಉಪ ಕಾರ್ಯದರ್ಶಿಗಳಿಗೆ ಕಾರಣ ಕೇಳಿ ನೋಟಿಸ್​​ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More