Biometric Attendance: ಕೊರೊನಾ ಕಡಿಮೆಯಾದ ಹಿನ್ನೆಲೆ ಬಯೋಮೆಟ್ರಿಕ್ ಹಾಜರಾತಿ ದಾಖಲಿಸುವಂತೆ ಸುತ್ತೋಲೆ

| Updated By: ಆಯೇಷಾ ಬಾನು

Updated on: Feb 18, 2022 | 12:41 PM

ಸಚಿವಾಲಯ ಮತ್ತು‌ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬಯೋಮೆಟ್ರಿಕ್ ಹಾಜರಾತಿ(Biometric Attendance) ದಾಖಲಿಸುವಂತೆ ಸುತ್ತೋಲೆ ಕಳಿಸಲಾಗಿದೆ.

Biometric Attendance: ಕೊರೊನಾ ಕಡಿಮೆಯಾದ ಹಿನ್ನೆಲೆ ಬಯೋಮೆಟ್ರಿಕ್ ಹಾಜರಾತಿ ದಾಖಲಿಸುವಂತೆ ಸುತ್ತೋಲೆ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮಹಾಮಾರಿ ಕೊರೊನಾ(Coronavirus) ಪ್ರಕರಣಗಳು ಸದ್ಯ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಚಿವಾಲಯ ಮತ್ತು‌ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬಯೋಮೆಟ್ರಿಕ್ ಹಾಜರಾತಿ(Biometric Attendance) ದಾಖಲಿಸುವಂತೆ ಸುತ್ತೋಲೆ ಕಳಿಸಲಾಗಿದೆ. ಕೆಲ ದಿನಗಳ ಹಿಂದೆ ಕೊರೊನಾ ಹೆಚ್ಚಾಗಿದ್ದ ಕಾರಣ ಬಯೋಮೆಟ್ರಿಕ್ ಹಾಜರಾತಿಗೆ ತಾತ್ಕಾಲಿಕವಾಗಿ ವಿನಾಯಿತಿ ನೀಡಲಾಗಿತ್ತು.

ರಾಜ್ಯದಲ್ಲಿ ಕೊರೊನಾ ಹೆಚ್ಚಾಗಿ ಮಕ್ಕಳಲ್ಲಿ ಯುವಕರು ಸೇರಿದಂತೆ ರಾಜ್ಯದ ಸಿಎಂ, ಸಚಿವರು ಸೇರಿದಂತೆ ಅನೇಕರಲ್ಲಿ ಸೋಂಕು ಪತ್ತೆಯಾಗಿತ್ತು. ಈ ಹಿನ್ನೆಲೆ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಗೆ ತಾತ್ಕಾಲಿಕವಾಗಿ ವಿನಾಯಿತಿ ನೀಡಲು ಸರ್ಕಾರ ಮುಂದಾಗಿತ್ತು. ಸದ್ಯ ಈಗ ಕೊರೊನಾ ಕಡಿಮೆಯಾದ ಹಿನ್ನೆಲೆ ಸಚಿವಾಲಯ ಮತ್ತು‌ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬಯೋಮೆಟ್ರಿಕ್ ಹಾಜರಾತಿ ದಾಖಲಿಸುವಂತೆ ಸುತ್ತೋಲೆ ಕಳಿಸಲಾಗಿದೆ. ಮೊಟ್ಟ ಮೊದಲ ಬಾರಿಗೆ ಎಸ್.ಎಂ. ಕೃಷ್ಣ ಕಾಲದಲ್ಲಿ ಬಯೋಮೆಟ್ರಿಕ್ ಹಾಜರಾತಿ ವಿಧಾನ ಬಂತು. ಬಳಿಕ ಇದನ್ನು ಎಲ್ಲಾ ಕಡೆ ಜಾರಿ ಮಾಡಲಾಯಿತು. ಈಗ ಸರ್ಕಾರದಲ್ಲಿ ಬಯೋಮೆಟ್ರಿಕ್ ಪದ್ಧತಿ ಮಾತ್ರ ಇದೆ.

ಕರ್ನಾಟಕದಲ್ಲಿ ಗುರುವಾರ 1,579 ಜನರಿಗೆ ಕೊರೊನಾ ದೃಢ
ಕರ್ನಾಟಕ ರಾಜ್ಯದಲ್ಲಿ ಗುರುವಾರ (ಫೆಬ್ರವರಿ 17) ಹೊಸದಾಗಿ 1,579 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ರಾಜ್ಯದಲ್ಲಿ ಈವರೆಗೆ 39,33,115 ಜನರಿಗೆ ಕೊರೊನಾ ದೃಢಪಟ್ಟಂತಾಗಿದಗ್ದು, ಸೋಂಕಿತರ ಪೈಕಿ 38,73,580 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಗುರುವಾರ ಕೊರೊನಾ ಸೋಂಕಿನಿಂದ 23 ಮಂದಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಕೊವಿಡ್ ನಿಯಂತ್ರಣಕ್ಕೆ ವಿಧಿಸಿದ್ದ ನಿಷೇಧಾಜ್ಞೆ ಮುಂದುವರಿಕೆ ಮಾಡಿ ಆದೇಶ ಹೊರಡಿಸಲಾಗಿದೆ. ಬೆಂಗಳೂರಿನಲ್ಲಿ ಫೆ.28ರವರೆಗೂ ನಿಷೇಧಾಜ್ಞೆ ಮುಂದುವರಿಸಿ ಆದೇಶ ನೀಡಲಾಗಿದೆ. ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಈ ಬಗ್ಗೆ ಆದೇಶ ನೀಡಿದ್ದಾರೆ. ಕೊವಿಡ್ ನಿಬಂಧನೆಗಳು ಯಥಾವತ್ ಮುಂದುವರಿಯಲಿವೆ. ಯಾವುದೇ ರೀತಿಯ ಧರಣಿ, ಮೆರವಣಿಗೆಗೆ ಅವಕಾಶವಿಲ್ಲ. ನಿಬಂಧನೆಗಳನ್ನ ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ ಎಂದು ಹೇಳಲಾಗಿದೆ.

ಇದನ್ನೂ ಓದಿ: ಭಾರತೀಯ ರೈಲ್ವೆಯಿಂದ ಶುಕ್ರವಾರ 300 ಕ್ಕೂ ಹೆಚ್ಚು ರೈಲುಗಳು ರದ್ದು; ವಿವರಗಳು ಇಲ್ಲಿವೆ