
ಬೆಂಗಳೂರು, ಅಕ್ಟೋಬರ್ 15: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಅಡಿಯಲ್ಲಿ ಬಿ-ಖಾತಾದಿಂದ ಎ-ಖಾತಾ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೆ ಎ-ಖಾತಾವನ್ನು (A-Khata) ಆನ್‌ಲೈನ್‌ನಲ್ಲೇ ಪಡೆಯಬಹುದಾಗಿದೆ. ಆ ಮೂಲಕ ಬೆಂಗಳೂರಿನ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ದೀಪಾವಳಿ ಅತಿ ದೊಡ್ಡ ಗಿಫ್ಟ್ ನೀಡಿದೆ. ಇನ್ಮುಂದೆ ಬಿ-ಖಾತಾದಿಂದ ಎ-ಖಾತಾ ಪರಿವರ್ತನೆ ಮತ್ತಷ್ಟು ಸುಲಭವಾಗಲಿದೆ. ಈ ಉಪಕ್ರಮಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಬುಧವಾರ ಚಾಲನೆ ನೀಡಿದ್ದಾರೆ.
ಈ ಕುರಿತಾಗಿ ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ‘ಇನ್ಮುಂದೆ ಬಿ-ಖಾತಾದಿಂದ ಎ-ಖಾತಾ ಪರಿವರ್ತನೆ ಸುಲಭ! ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬೆಂಗಳೂರಿನ ನಾಗರಿಕರಿಗೆ ಅನುಕೂಲವಾಗಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಬಿ-ಖಾತಾದಿಂದ ಎ-ಖಾತಾ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೆ ಎ-ಖಾತಾವನ್ನು ಆನ್‌ಲೈನ್‌ನಲ್ಲೇ ಪಡೆಯುವುದಕ್ಕೆ ಇಂದು ಚಾಲನೆ ನೀಡಲಾಯಿತು ಎಂದಿದ್ದಾರೆ.
ಇನ್ಮುಂದೆ ಬಿ-ಖಾತಾದಿಂದ ಎ-ಖಾತಾ ಪರಿವರ್ತನೆ ಸುಲಭ!
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬೆಂಗಳೂರಿನ ನಾಗರಿಕರಿಗೆ ಅನುಕೂಲವಾಗಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಬಿ-ಖಾತಾದಿಂದ ಎ-ಖಾತಾ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೆ ಎ-ಖಾತಾವನ್ನು ಆನ್‌ಲೈನ್‌ನಲ್ಲೇ ಪಡೆಯುವುದಕ್ಕೆ ಇಂದು ಚಾಲನೆ ನೀಡಲಾಯಿತು. 2000… pic.twitter.com/qE14ukwGUR
— DK Shivakumar (@DKShivakumar) October 15, 2025
2000 ಚ.ಮೀ.ಗಳವರೆಗಿನ ನಿವೇಶನಗಳಿಗೆ https://bbmp.karnataka.gov.in/BtoAKhata ವೆಬ್‌ಸೈಟ್‌ನಲ್ಲಿ ಹಾಗೂ 2000 ಚ.ಮೀ.ಗೂ ಹೆಚ್ಚಿನ ನಿವೇಶನಗಳಿಗೆ https://bpas.bbmp.gov.in ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇದು ಲಕ್ಷಾಂತರ ಜನರಿಗೆ ಅನುಕೂಲವಾಗಲಿದ್ದು, ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ತಾಪತ್ರಯ ಕಡಿಮೆ ಆಗಲಿದೆ ಎಂದು ಟ್ವೀಟ್ ಮಾಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:02 pm, Wed, 15 October 25