Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ವಿರುದ್ಧ ಕಾಫಿ -ತಿಂಡಿ, ಬಿಸ್ಕತ್​ನಲ್ಲಿ 200 ಕೋಟಿ ರೂ. ಲೂಟಿ ಆರೋಪ: ದಾಖಲೆ ಬಿಡುಗಡೆ ಮಾಡಿದ ಎನ್ ಆರ್ ರಮೇಶ್

ಸಿದ್ದರಾಮಯ್ಯ ಅವಧಿಯಲ್ಲಿ ಕಾಫಿ, ತಿಂಡಿ, ಬಿಸ್ಕತ್​​ ಹೆಸರಲ್ಲಿ ಹಗರಣ ನಡೆದಿದೆ. 5 ವರ್ಷದಲ್ಲಿ​​ ಸುಮಾರು 200 ಕೋಟಿ ರೂಪಾಯಿ ಲೂಟಿ ಮಾಡಿರುವ ಆರೋಪವಿದೆ.

ಸಿದ್ದರಾಮಯ್ಯ ವಿರುದ್ಧ ಕಾಫಿ -ತಿಂಡಿ, ಬಿಸ್ಕತ್​ನಲ್ಲಿ 200 ಕೋಟಿ ರೂ. ಲೂಟಿ ಆರೋಪ: ದಾಖಲೆ ಬಿಡುಗಡೆ ಮಾಡಿದ ಎನ್ ಆರ್ ರಮೇಶ್
ಎನ್​ಆರ್ ರಮೇಶ್, ಸಿದ್ದರಾಮಯ್ಯ
Follow us
ಆಯೇಷಾ ಬಾನು
|

Updated on:Mar 06, 2023 | 2:53 PM

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ವಿರುದ್ಧ ಬಿಜೆಪಿ ಮುಖಂಡ ಎನ್​ಆರ್ ರಮೇಶ್(NR Ramesh) ಗಂಭೀರ ಆರೋಪ ಮಾಡಿದ್ದು ದಾಖಲೆ ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನ ರಾಜ್ಯ BJP ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ದಾಖಲೆ ಸಮೇತ ಸಿದ್ದರಾಮಯ್ಯ ವಿರುದ್ಧ 200 ಕೋಟಿ ಹಗರಣ ಆರೋಪ ಮಾಡಿದ್ದಾರೆ.

ಸಿದ್ದರಾಮಯ್ಯ ಅವಧಿಯಲ್ಲಿ ಕಾಫಿ, ತಿಂಡಿ, ಬಿಸ್ಕತ್​​ ಹೆಸರಲ್ಲಿ ಹಗರಣ ನಡೆದಿದೆ. 5 ವರ್ಷದಲ್ಲಿ​​ ಸುಮಾರು 200 ಕೋಟಿ ರೂಪಾಯಿ ಲೂಟಿ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ದೂರು ನೀಡಿದ್ದೇನೆ ಎಂದು ಎನ್.ಆರ್.ರಮೇಶ್ ತಿಳಿಸಿದ್ದಾರೆ. ಅಲ್ಲದೆ ಸಿದ್ದರಾಮಯ್ಯ ವಿರುದ್ಧ ಕಾಫಿ ತಿಂಡಿ ಹಗರಣದ ತನಿಖೆಗೆ ಸಿಎಂಗೆ ಮನವಿ ಮಾಡಿದ್ದೇನೆ. ಮುಖ್ಯಮಂತ್ರಿಗಳು ಕೂಡ ನನ್ನ ಮನವಿಗೆ ಸ್ಪಂದಿಸಿದ್ದಾರೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಸಿಐಡಿಗೆ ಕೊಡುವ ಬಗ್ಗೆ ಬುಧವಾರದೊಳಗೆ ತಿಳಿಸೋದಾಗಿ ಭರವಸೆ ನೀಡಿದ್ದಾರೆ ಎಂದರು.

ಇದನ್ನೂ ಓದಿ: KSDA Recruitment 2023: ಕೃಷಿ ಇಲಾಖೆ ನೇಮಕಾತಿ: ಸ್ನಾತಕೋತ್ತರ ಪದವೀಧರರು ಅರ್ಜಿ ಸಲ್ಲಿಸಿ

ಹಾಸಿಗೆ , ದಿಂಬು, ಇಂದಿರಾ ಕ್ಯಾಂಟೀನ್ ತಿಂಡಿ, ನೆಲದಡಿಯ ಕಸದ ಡಬ್ಬಗಳು ಮತ್ತು ಎಲ್‌,ಇ,ಡಿ ದೀಪಗಳ ಅಳವಡಿಕೆಯಂತಹ ಯೋಜನೆಗಳ ಹೆಸರಿನಲ್ಲೂ ಸಾವಿರಾರು ಕೋಟಿ ರೂಪಾಯಿಗಳನ್ನು ಲೂಟಿ ಹಾಗೂ ಮುಖ್ಯಮಂತ್ರಿಗಳ ಕಛೇರಿಯ ಕಾರ್ಯಗಳಿಗೆ ಕಾಫೀ, ತಿಂಡಿ, ಬಿಸ್ಕೇಟ್, ಪೂರೈಕೆ ಹೆಸರಿನಲ್ಲೂ 200 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣವನ್ನು ಲೂಟಿ ಈ ಬೃಹತ್ ಹಗರಣವನ್ನು ಸಿಬಿಐ ಅಥವಾ ಸಿಐಡಿ ತನಿಖೆಗೆ ವಹಿಸುವಂತೆ ಮಾನ್ಯ ಮುಖ್ಯಮಂತ್ರಿಗಳನ್ನು ಆಗ್ರಹಿಸಿರುವ ಎನ್‌, ಆರ್‌ ರಮೇಶ್ ಮನವಿ ಮಾಡಿದ್ದಾರೆ.

ಈ ಬೃಹತ್‌ ಹಗರಣಕ್ಕೆ ಸಾಕ್ಷಿ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಅವಧಿಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿಗಳಾಗಿ ಕಾರ್ಯ ನಿರ್ವಹಿಸಿರುವ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲು ಮಾಡಿದ್ದೇವೆ ಎಂದು ಆರೋಪ ಮಾಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:50 pm, Mon, 6 March 23

ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು